ಕೇಂದ್ರ ಸಚಿವೆ ಸ್ಮೃತಿ ಇರಾನಿಯ ಅಶ್ಲೀಲ ಫೋಟೊ ಪೋಸ್ಟ್: ಇತಿಹಾಸದ ಪ್ರೊಫೆಸರ್ ಗೆ ಜೈಲುಶಿಕ್ಷೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮುನ್ನ ಅಲಿಗೆ ಬಂಧನದಿಂದ ರಕ್ಷಣೆ ನೀಡಲು ಸುಪ್ರೀಂಕೋರ್ಟ್ ಕೂಡಾ ನಿರಾಕರಿಸಿತ್ತು.
Team Udayavani, Jul 21, 2021, 4:55 PM IST
ಫಿರೋಜಾಬಾದ್/ಉತ್ತರಪ್ರದೇಶ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುರಿತು ಫೇಸ್ ಬುಕ್ ನಲ್ಲಿ ಅಶ್ಲೀಲ ಚಿತ್ರ ಪೋಸ್ಟ್ ಮಾಡಿರುವ ಆರೋಪ ಎದುರಿಸುತ್ತಿದ್ದ ಪ್ರೊಫೆಸರ್ ಉತ್ತರಪ್ರದೇಶದ ಫಿರೋಜಾಬಾದ್ ಕೋರ್ಟ್ ಗೆ ಶರಣಾದ ನಂತರ ಜೈಲಿಗೆ ಕಳುಹಿಸಿರುವ ಘಟನೆ ವರದಿಯಾಗಿದೆ.
ಇದನ್ನೂ ಓದಿ:ಹೆಲಿಕಾಪ್ಟರ್ ಇದಾವೆ, ಬೆಂಜ್ ಕಾರ್ ಇದ್ದಾವೆ.. ನನಗೇ ಇನ್ನೇನು ಬೇಕು : ಶಾಮನೂರು
ಫಿರೋಜಾಬಾದ್ ಕೋರ್ಟ್ ನ ಹೆಚ್ಚುವರಿ ಸೆಷನ್ಸ್ ಜಡ್ಜ್ ಅನುರಾಗ್ ಕುಮಾರ್ ಮುಂದೆ ಪ್ರೊಫೆಸರ್ ಶಾಹಾರ್ಯಾರ್ ಅಲಿ ಶರಣಾಗಿದ್ದು, ಏತನ್ಮಧ್ಯೆ ಅಲಿ ಮಧ್ಯಂತರ ಜಾಮೀನು ನೀಡುವಂತೆ ಮಂಗಳವಾರ ಜಾಮೀನು ಅರ್ಜಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಆದರೆ ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ರದ್ದುಗೊಳಿಸಿ, ಅಲಿಗೆ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿರುವುದಾಗಿ ಪಿಟಿಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ವಿರುದ್ಧ ಎಸ್ ಆರ್ ಕೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಅಲಿ ತನ್ನ ಫೇಸ್ ಬುಕ್ ಪುಟದಲ್ಲಿ ಅಶ್ಲೀಲ ಫೋಟೋವನ್ನು ಪೋಸ್ಟ್ ಮಾಡಿರುವ ಆರೋಪದಡಿ ಫಿರೋಜಾಬಾದ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು.
ಈ ಘಟನೆ ನಂತರ ಎಸ್ ಆರ್ ಕೆ ಕಾಲೇಜು ಮಂಡಳಿ ಅಲಿಯನ್ನು ಅಮಾನತುಗೊಳಿಸಿ ನೋಟಿಸ್ ಜಾರಿಗೊಳಿಸಿರುವುದಾಗಿ ವರದಿ ವಿವರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮುನ್ನ ಅಲಿಗೆ ಬಂಧನದಿಂದ ರಕ್ಷಣೆ ನೀಡಲು ಸುಪ್ರೀಂಕೋರ್ಟ್ ಕೂಡಾ ನಿರಾಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ