ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ 48 ಲಕ್ಷ ಮಕ್ಕಳಿಗೆ ಲಸಿಕೆ; ಸಚಿವ ಡಾ.ಕೆ.ಸುಧಾಕರ್

ಕೇಂದ್ರ ಸರ್ಕಾರದಿಂದ ಉಚಿತವಾಗಿ 2 ಡೋಸ್ ಲಸಿಕೆ

Team Udayavani, Dec 4, 2022, 3:59 PM IST

dr-sudhakar

ಬೆಂಗಳೂರು : ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಜೆಇ ಲಸಿಕಾ ಅಭಿಯಾನ ಕುರಿತು ಮಾಹಿತಿ ನೀಡಿದ ಸಚಿವರು, ಡಿಸೆಂಬರ್ ಮೊದಲನೇ ವಾರದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರದ ಎರಡು ವಾರಗಳಲ್ಲಿ ಎಲ್ಲಾ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕಾಕರಣಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಉಚಿತವಾಗಿ ಜೆನವ್ಯಾಕ್ ಜೆಇ ಲಸಿಕೆಗಳನ್ನು ಸರಬರಾಜು ಮಾಡಿದೆ ಎಂದರು.

ಪ್ರಪಂಚದಾದ್ಯಂತ 24 ರಾಷ್ಟ್ರಗಳಲ್ಲಿ ಜಪಾನೀಸ್ ಎನ್‍ಸೆಫಲೈಟಿಸ್ (ಜೆಇ) ಪಿಡುಗು ಗುರುತಿಸಲಾಗಿದೆ. ಭಾರತವೂ ಸೇರಿದಂತೆ ಏಷ್ಯಾದ 11 ಏಷ್ಯಾ ರಾಷ್ಟ್ರಗಳು ಈ ಪಟ್ಟಿಯಲ್ಲಿದೆ. ಪ್ರತಿ ವರ್ಷ ಸರಾಸರಿ 68,000 ಪ್ರಕರಣಗಳು ವರದಿಯಾಗುತ್ತಿದ್ದು, ಮರಣ ಪ್ರಮಾಣ ಶೇ.20 ರಿಂದ ಶೇ.30 ರಷ್ಟಿದೆ. ಗುಣಮುಖರಾದ ಶೇ.30 ರಿಂದ ಶೇ.50 ರಷ್ಟು ಪ್ರಕರಣಗಳಲ್ಲಿ ನರದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟಾಗಿವೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ಜೆಇ ಮೆದುಳು ಜ್ವರದ ಮೊದಲ ಪ್ರಕರಣ 1955 ರಲ್ಲಿ ತಮಿಳುನಾಡಿನ ವೆಲ್ಲೂರ್ ನಲ್ಲಿ ವರದಿಯಾಗಿತ್ತು. ಕರ್ನಾಟಕದಲ್ಲಿ 1978 ರಲ್ಲಿ ಕೋಲಾರ ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕಂಡುಬರುತ್ತಿದೆ. 2016 ರಲ್ಲಿ 11 ಪ್ರಕರಣಗಳು, 2017 ರಲ್ಲಿ 23 ಪ್ರಕರಣಗಳು, 2018 ರಲ್ಲಿ 35 ಪ್ರಕರಣಗಳು, 2019 ರಲ್ಲಿ 33 ಪ್ರಕರಣಗಳು, 2020 ರಲ್ಲಿ 19 ಪ್ರಕರಣಗಳು, 2021 ರಲ್ಲಿ 25 ಪ್ರಕರಣಗಳು, 2022 ರಲ್ಲಿ 21 ಪ್ರಕರಣಗಳು ಪತ್ತೆಯಾಗಿವೆ. ರೋಗ ಪತ್ತೆ ಮಾಡಲು ರಾಜ್ಯದಲ್ಲಿ ಸೆಂಟಿನಲ್ ಸರ್ವೆಲೆನ್ಸ್ ಲ್ಯಾಬೊರೇಟರಿ (ಎಸ್‍ಎಸ್‍ಎಲ್‍) ಗಳನ್ನು ಸಜ್ಜುಗೊಳಿಸಲಾಗಿದೆ. ನಿಮ್ಹಾನ್ಸ್ -ಸ್ಟೇಟ್ ಅಪೆಕ್ಸ್ ಲ್ಯಾಬೊರೇಟರಿ, ವಿಮ್ಸ್-ಬಳ್ಳಾರಿ, ಕಿಮ್ಸ್-ಹುಬ್ಬಳ್ಳಿ, ಡಿಪಿಎಚ್‍ಎಲ್-ಕೋಲಾರ, ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್-ಉಡುಪಿ, ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‍ಐವಿ)-ಬೆಂಗಳೂರು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

10 ಜಿಲ್ಲೆಗಳಲ್ಲಿ ಲಸಿಕಾಕರಣ
ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10 ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಡೋಸ್ ಮತ್ತು 1.5 ವರ್ಷದ ವಯಸ್ಸಿನಲ್ಲಿ 2ನೇ ಡೋಸ್ ಲಸಿಕೆ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೆಇ ಹರಡದ ಅವಧಿಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಈ ಅಭಿಯಾನದಲ್ಲಿ 1-15 ವರ್ಷ ವಯಸ್ಸಿನ ಮಕ್ಕಳಿಗೆ ಒಂದು ಡೋಸ್ ಲಸಿಕೆ ನೀಡಲಾಗುವುದು‌ ಎಂದು ಸಚಿವರು ವಿವರಿಸಿದರು.

ನಾವೀಗ ಮೆದುಳು ಜ್ವರದ ವಿರುದ್ಧ ಯುದ್ಧ ಸಾರಬೇಕಿದ್ದು, ಇದಕ್ಕಾಗಿ ಆರೋಗ್ಯ ಇಲಾಖೆಯು ಎಲ್ಲಾ ರೀತಿಯಲ್ಲಿ ಸನ್ನದ್ಧವಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಜೆಇ ಮೆದುಳು ಜ್ವರ ‘ಪ್ಲೇವಿವೈರಸ್’ ಎಂಬ ವೈರಾಣುವಿನಿಂದ ಬರುತ್ತದೆ. ಇದು ಕ್ಯುಲೆಕ್ಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಹಂದಿಗಳು ಮತ್ತು ಕಾಡಿನ ಪಕ್ಷಿಗಳಲ್ಲಿರುವ ಈ ವೈರಾಣುವಿಗೆ ಮಾನವರು ಕಟ್ಟಕಡೆಯ ಹೋಸ್ಟ್ ಆಗಿರುತ್ತಾರೆ.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.