ಜೈಸಲ್ಮೇರ್: ವಾಹನ ಪಲ್ಟಿಯಾಗಿ ಬಿಎಸ್ಎಫ್ ಯೋಧ ಸಾವು,ಇಬ್ಬರಿಗೆ ಗಾಯ
Team Udayavani, Dec 10, 2021, 1:15 PM IST
ಜೈಸಲ್ಮೇರ್: ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ವಾಹನವೊಂದು ಪಲ್ಟಿಯಾದ ಪರಿಣಾಮ ಓರ್ವ ಬಿಎಸ್ಎಫ್ ಯೋಧ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ರಾತ್ರಿ ರಾಮಗಢ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ರಾಮಗಢದ ಎಸ್ಎಚ್ಒ ಚುನ್ನಿಲಾಲ್ ತಿಳಿಸಿದ್ದಾರೆ.
ಮೃತರನ್ನು 38 ವರ್ಷದ ವೀರೇಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಜೈಸಲ್ಮೇರ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ