ವಿನಯ ಕುಲಕರ್ಣಿಗೆ ಮತ್ತೆ ಹದಿನಾಲ್ಕು ದಿನ ನ್ಯಾಯಾಂಗ ಬಂಧನ!
Team Udayavani, Nov 23, 2020, 6:59 PM IST
ಧಾರವಾಡ: ಯೋಗೀಶ್‌ಗೌಡ ಹತ್ಯೆ ಪ್ರಕರಣದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ಕಾಲ ವಿಸ್ತರಣೆಯಾಗಿದೆ.
ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ಸೋಮವಾರ ಅಂತ್ಯಗೊಂಡ ಕಾರಣ ನಗರದ 3ನೇ ಹೆಚ್ಚುವರಿ ಹಾಗೂ ವಿಶೇಷ ಸಿಬಿಐ ನ್ಯಾಯಾಲಯದ ಮುಂದೆ ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆ ನಡೆಸಲಾಯಿತು.
ಈ ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿ ಇರುವುದರಿಂದ ಸಿಬಿಐ ಅಧಿಕಾರಿಗಳ ತಂಡವು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತು. ನ್ಯಾಯಾಧೀಶರಾದ ಎಂ. ಪಂಚಾಕ್ಷರಿ ಅವರು, ಡಿ.7ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದರು.
ಇದನ್ನೂ ಓದಿ:ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸತ್ತ ಕುರಿಗಳೊಂದಿಗೆ ಕುರಿಗಾರರ ಪ್ರತಿಭಟನೆ
ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ವಿಚಾರಣೆಯನ್ನು ಧಾರವಾಡ ಹೈಕೋರ್ಟನ ಏಕಸದಸ್ಯ ಪೀಠವು ನವೆಂಬರ್ 30ಕ್ಕೆ ಮುಂದೂಡಿದೆ.
ಯೋಗೀಶಗೌಡ ಹತ್ಯೆಯ ನಂತರ ತನಿಖಾಧಿಕಾರಿಯಾಗಿದ್ದ ಟಿಂಗರಿಕರ್ ಸಾಕ್ಷಿ ನಾಶ ಹಾಗೂ ಭ್ರಷ್ಟಚಾರದ ಆರೋಪ ಎದುರಿಸುತ್ತಿದ್ದಾರೆ. ಟಿಂಗರಿಕರ್ ಅವರು ಸಿಬಿಐನಿಂದ ಬಂಧನ ಭೀತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಸಿಬಿಐ ಅಧಿಕಾರಿಗಳ ತಂಡ ಹೈಕೋರ್ಟ್ ಗೆ ಹಾಜರಾಗಿ ನಿರೀಕ್ಷಣಾ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಿದರು. ಈ ಹಿಂದೆ ಧಾರವಾಡದ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444