ಮೇ 31 ರ ವರೆಗೆ ಸಾಮೂಹಿಕ ಪ್ರಾರ್ಥನೆ ನಡೆಸದಂತೆ ವಕ್ಫ್ ಬೋರ್ಡ್ ಆದೇಶ
Team Udayavani, May 20, 2020, 9:11 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಮೇ 31 ರ ವರೆಗೆ ಲಾಕ್ ಡೌನ್ ಮುಂದುವರೆದಿರುವುದರಿಂದ ಮುಸ್ಲಿಂ ಸಮುದಾಯವರು ಮಸೀದಿಗಳಲ್ಲಿ ರಮ್ಜಾನ್ ಸಾಮೂಹಿಕ ಪ್ರಾರ್ಥನೆ ನಡೆಸದಂತೆ ವಕ್ಫ್ ಮಂಡಳಿ ಎಲ್ಲ ಮಸೀದಿ ಹಾಗೂ ದರ್ಗಾಗಳ ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡಿದೆ.
ರಾಜ್ಯದಲ್ಲಿ 4 ನೇ ಹಂತದ ಲಾಕ್ ಡೌನ್ ಮೇ 31 ರ ವರೆಗೆ ಜಾರಿಯಲ್ಲಿರುವುದರಿಂದ ಮಸೀದಿ, ದರ್ಗಾ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುವಂತಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ ಒಬ್ಬರಿಗೊಬ್ಬರು ಅಪ್ಪಿಕೊಳ್ಳುವುದು, ಹಸ್ತ ಲಾಘವ ಮಾಡುವುದು, ಸ್ನೇಹಿತರು ಹಾಗೂ ಸಂಬಂಧಿಕರನ್ನು ಭೇಟಿ ಮಾಡದಂತೆ ಸೂಚಿಸಲಾಗಿದೆ.
ಅಲ್ಲದೇ ಹೊರ ರಾಜ್ಯ ಹಾಗೂ ವಿದೇಶಗಳಿಂದ ಬಂದವರಿಂದ ಅಂತರ ಕಾಯ್ದುಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ