ವ್ಯರ್ಥ ನೀರು ಬಳಕೆಗೆ ಒತ್ತು :3986ಕೋ.ರೂ. ವೆಚ್ಚದಲ್ಲಿ1348 ಕಿಂಡಿ ಅಣೆಕಟ್ಟು ಕಟ್ಟಲು ಯೋಜನೆ

Team Udayavani, Mar 9, 2021, 6:10 AM IST

ವ್ಯರ್ಥ ನೀರು ಬಳಕೆಗೆ ಒತ್ತು :3986ಕೋ.ರೂ. ವೆಚ್ಚದಲ್ಲಿ1348 ಕಿಂಡಿ ಅಣೆಕಟ್ಟು ಕಟ್ಟಲು ಯೋಜನೆ

ರಾಜ್ಯದ ವಿವಿಧ ನದಿಗಳಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಸ ಮ ರ್ಪ ಕ ವಾಗಿ ಬಳಕೆ ಮಾಡಿಕೊಳ್ಳಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಸಮುದ್ರಕ್ಕೆ ಹರಿದು ಹೋಗುವ ನೀರು ಬಳಸಿಕೊಳ್ಳಲು 3986 ಕೋಟಿ ರೂ. ವೆಚ್ಚದಲ್ಲಿ ಐದು ವರ್ಷದಲ್ಲಿ 1348 ಕಿಂಡಿ ಅಣೆಕಟ್ಟು ಕಟ್ಟಲು ಯೋಜನೆ ರೂಪಿಸಲಾಗಿದ್ದು, 2021-22ರಲ್ಲಿ ಈ ಯೋಜನೆಗೆ 500 ಕೋಟಿ ಮೀಸಲಿಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದ ನದಿಗಳಲ್ಲಿ ಪ್ರವಾಹ ಉಂಟಾದಾಗ ಭಾರೀ ಅಲೆಗಳಿಂದ ಉಪ್ಪು ನೀರು ಹಿಮ್ಮುಖವಾಗಿ ನುಗ್ಗುವುದನ್ನು ಪ್ಲಾಪ್‌ ಗೇಟ್‌ ಮೂಲಕ ತಡೆಗಟ್ಟುವ ಖಾರ್‌ಲ್ಯಾಂಡ್‌ ಯೋಜನೆಯನ್ನು 300 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಮಹದಾಯಿ ಯೋಜನೆಗೆ ನ್ಯಾಯಾಧಿಕರಣದ ತೀರ್ಪಿನಂತೆ ಕಳಸಾ-ಬಂಡೂರಿ ತಿರುವು ಯೋಜನೆಗಳಿಗೆ 1,677 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಕೈಗೆತ್ತಿ ಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೇಡ್ತಿ- ವರದಾ ನದಿ ಜೋಡನೆಗೆ 22 ಟಿಎಂಸಿ ನೀರು ಬಳಸಿಕೊಳ್ಳಲು ಎನ್‌ಡಬ್ಲ್ಯೂಡಿಎ ಸಿದ್ಧಪಡಿಸುತ್ತಿದೆ. ಈ ಯೋಜನೆಯಿಂದ ಉತ್ತರ ಕರ್ನಾಟಕ ಬರ ಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಕಲ್ಪಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೃಷ್ಣಾ, ಭದ್ರಾ ರಾಷ್ಟ್ರೀಯ ಯೋಜನೆ ಮಾನ್ಯತೆಗೆ ಆದ್ಯತೆ: ರಾಜ್ಯದ ಬೃಹತ್‌ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಾಗೂ ಹನಿ ಮತ್ತು ತುಂತುರು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಮಧ್ಯ ಕರ್ನಾಟಕ ಭಾಗಕ್ಕೆ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಯ 21,474 ಕೋಟಿ ರೂ. ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿ ತಾತ್ಮಕ ಅನುಮೋದನೆಯನ್ನು ನೀಡಲಾಗಿದ್ದು, ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಪ್ರಸ್ತಾಪ ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಹಂತದಲ್ಲಿದೆ. ಕೇಂದ್ರದ ನೆರವಿನೊಂದಿಗೆ ಈ ಯೋಜನೆಯನ್ನು ಶೀಘ್ರ ವಾಗಿ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಇದರಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ರೈತ ರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಆರು ಲಕ್ಷ ಹೆಕ್ಟೇರ್‌ ಅಚ್ಚುಕಟ್ಟು ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿ ಸುವ ಗುರಿ ಹೊಂದಿರುವ ಕೃಷ್ಣಾ ಮೇಲ್ಡಂಡೆ ಯೋಜನೆ 3ನೇ ಹಂತದ ಯೋಜನೆ ಅನುಷ್ಠಾನ ಗೊಳಿಸಲು ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಕೇಂದ್ರದ ನೆರವು ಪಡೆಯಲಾಗುವುದು. ಈ ಯೋಜನೆಗೆ 5,600 ಕೋಟಿ ರೂ. ಮೀಸಲಿಡಲಾಗುವುದು ಎಂದು ತಿಳಿಸಿದ್ದಾರೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಪ್ರಥಮ ಹಂತದ ಏತ ನೀರಾವರಿ ಕಾಮಗಾರಿಗಳು ಮುಗಿಯುವ ಹಂತದಲ್ಲಿದ್ದು, ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಅಡ್ಡಿಯಾಗಿರುವ ಭೂ ಸ್ವಾಧೀನ ಸಮಸ್ಯೆಗಳನ್ನು ನಿವಾರಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯಕ್ಕೆ ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯದೊಂದಿಗೆ ಸಮಾಲೋಚಿಸಿ ಯೋಜನೆ ಅನುಷ್ಠಾನ ಮಾಡುವ ಘೋಷಣೆ ಮಾಡಿದ್ದಾರೆ. ವಿಶ್ವಬ್ಯಾಂಕ್‌ ನೆರವಿನೊಂದಿಗೆ ಡ್ರಿಪ್‌ ಯೋಜನೆ ಅಡಿಯಲ್ಲಿ 1,500 ಕೋಟಿ ಮೊತ್ತದಲ್ಲಿ 58 ಅಣೆಕಟ್ಟುಗಳ ಪುನಶ್ಚೇತನ ಮತ್ತು ಅಭಿವೃದ್ಧಿ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಅಲ್ಲದೇ ಜಲ ಸಂಪನ್ಮೂಲ ಇಲಾಖೆಯಡಿ ಯಲ್ಲಿ ಅನುಷ್ಠಾನಗೊಂಡಿರುವ ಮತ್ತು ಅನು ಷ್ಠಾನಗೊಳ್ಳುತ್ತಿರುವ ಎಲ್ಲ ಏತ ನೀರಾವರಿ ಯೋಜನೆಗಳ ವ್ಯವಸ್ಥಿತ ಕಾರ್ಯಾಚರಣೆಗಳ ಮತ್ತು ನಿರ್ವಹಣೆಗಾಗಿ ಸೂಕ್ತ ಮಾರ್ಗಸೂಚಿ ಗಳೊಂದಿಗೆ ಕಾರ್ಯ ನೀತಿ ರೂಪಿಸುವುದಾಗಿ ತಿಳಿಸಿದ್ದಾರೆ.

ಜಲ ಸಂಪನ್ಮೂಲ ಇಲಾಖೆಯಡಿ 5 ಲಕ್ಷ ಹೆಕ್ಟೇರ್‌ಗೂ ಅಧಿಕ ಅಚ್ಚುಕಟ್ಟು ಪ್ರದೇಶಗಳಿಗೆ ಸೂಕ್ಷ್ಮ ಮತ್ತು ತುಂತುರು ನೀರಾವರಿ ಯೋಜನೆ ಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸು ವುದಾಗಿ ತಿಳಿಸಿದ್ದಾರೆ.

ಬೆಂಗಳೂರು ನಗರದ ವೃಷಭಾವತಿ ಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308 ಎಂ.ಎಲ್‌.ಡಿ ನೀರನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 234 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು 500 ಕೋಟಿ ಮೀಸಲಿಟ್ಟಿದ್ದಾರೆ.

“ಆತ್ಮನಿರ್ಭರ’ಕ್ಕೆ ಬಲ
ಕೃಷಿ ನವೋದ್ಯಮಗಳ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲು, ಸ್ಥಳೀಯ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡಲು ವಿಜಯಪುರದ ಇಟ್ಟಂಗಿಹಾಳದಲ್ಲಿ ಆತ್ಮನಿರ್ಭರ ಭಾರತ ಅಭಿಯಾನದಡಿ ಆಹಾರ ಪಾರ್ಕ್‌ ಸ್ಥಾಪಿಸಲು ನಿರ್ಧರಿಸಲಾಗಿದೆ. ಅದೇ ರೀತಿ, ಆತ್ಮನಿರ್ಭರದಡಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧ ಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಡಿ ಶೇ. 35ರಷ್ಟು ಸಹಾಯಧನ ನೀಡಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರ ಕೂಡ ಶೇ. 15ರಷ್ಟು ಸಹಾಯಧನ ನೀಡುವ ಮೂಲಕ ಇದರ ಪ್ರಮಾಣವನ್ನು ಒಟ್ಟಾರೆ ಶೇ. 50ಕ್ಕೆ ವಿಸ್ತರಿಸಲಾಗುತ್ತಿದೆ. ಇದಕ್ಕಾಗಿ ಬಜೆಟ್‌ನಲ್ಲಿ 50 ಕೋಟಿ ರೂ. ನೀಡಲಾಗಿದೆ. ಈ ಸಹಾಯಧನವನ್ನು ಶೀತಲಗೃಹ ನಿರ್ಮಾಣ, ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದೆ.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.