Viral Video: ಗ್ರಾಮದೊಳಗೆ ಅಡ್ಡಾದಿಡ್ಡಿ ಓಡಾಡಿ ಜನರಿಗೆ ಭೀತಿ ಹುಟ್ಟಿಸಿದ ಮೊಸಳೆ!
ಮೊಸಳೆ ಎಲ್ಲೆಂದರಲ್ಲಿ ಮುಕ್ತವಾಗಿ ಓಡಾಟ ನಡೆಸಿತ್ತು
Team Udayavani, Aug 8, 2024, 3:47 PM IST
ಲಕ್ನೋ: ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಭಾರೀ ಗಾತ್ರದ ಮೊಸಳೆಯೊಂದು ಬೇಕಾಬಿಟ್ಟಿ ಓಡಾಡಿದ್ದು, ಇದರಿಂದ ಸ್ಥಳೀಯರು ಭಯಭೀತರಾದ ಘಟನೆ ಉತ್ತರಪ್ರದೇಶದ ಬಿಜ್ನೂರ್ ನ ನಂಗಲ್ ಸೋಟಿ ಗ್ರಾಮದಲ್ಲಿ ಗುರುವಾರ (ಆಗಸ್ಟ್ 08) ನಡೆದಿದೆ.
ಜನರ ಓಡಾಟದ ರಸ್ತೆಯಲ್ಲಿ ಬಿರುಸಿನ ಹೆಜ್ಜೆಯೊಂದಿಗೆ ಸಾಗುತ್ತಿದ್ದ ಮೊಸಳೆಯನ್ನು ಕಂಡು ಸ್ಥಳೀಯರು ಆಘಾತಕ್ಕೊಳಗಾಗಿದ್ದರು. ಅಷ್ಟೇ ಅಲ್ಲ ಈ ಸಂದರ್ಭದಲ್ಲಿ ಅದನ್ನು ಹಿಡಿಯಲು ಪ್ರಯತ್ನಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಇದು ವೈರಲ್ ಆಗಿರುವುದಾಗಿ ವರದಿ ತಿಳಿಸಿದೆ..
ಮೊಸಳೆ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಆದರೆ ಅರಣ್ಯಾಧಿಕಾರಿಗಳು ಆಗಮಿಸುವವರೆಗೂ ಮೊಸಳೆ ಎಲ್ಲೆಂದರಲ್ಲಿ ಮುಕ್ತವಾಗಿ ಓಡಾಟ ನಡೆಸಿತ್ತು ಎಂದು ವರದಿ ವಿವರಿಸಿದೆ.
A crocodile strolling through the village streets in Bijnor, UP
pic.twitter.com/Cu52FDy1ZR— Ghar Ke Kalesh (@gharkekalesh) August 8, 2024
ಮೊಸಳೆ ಹೆಜ್ಜೆ ಹಾಕುತ್ತಾ ಬರುತ್ತಿದ್ದರೆ, ಮತ್ತೊಂದೆಡೆ ಭಯಭೀತ ನಿವಾಸಿಗಳು ಓಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಅದರಲ್ಲೊಬ್ಬಾತ ಮೊಸಳೆಯ ಹಿಂಬದಿ ಬಾಲಕ್ಕೆ ತುಳಿದು, ಅದನ್ನು ಪ್ರಚೋದಿಸುತ್ತಿದ್ದ. ಮತ್ತೊಂದೆಡೆ ನಾಯಿಯೊಂದು ಮೊಸಳೆಯನ್ನು ಚೇಸ್ ಮಾಡಿದ್ದು, ನಂತರ ಹೆದರಿ ಓಡಿಹೋಗಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ಗಂಟೆಗಳ ನಂತರ ಅರಣ್ಯಾಧಿಕಾರಿಗಳು ಮೊಸಳೆಯನ್ನು ಹಿಡಿದು ಕೊಂಡೊಯ್ದಿದ್ದು, ಇದರೊಂದಿಗೆ ಸ್ಥಳೀಯರು ನಿಟ್ಟುಸಿರು ಬಿಟ್ಟಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.