ಜಲಮಂಡಳಿಗೆ ವಂಚನೆ: 13 ನೌಕರರ ಅಮಾನತು

Team Udayavani, Jan 4, 2023, 6:40 AM IST

ಜಲಮಂಡಳಿಗೆ ವಂಚನೆ: 13 ನೌಕರರ ಅಮಾನತು

ಬೆಂಗಳೂರು: ನೀರು ಪೂರೈಕೆ ಶುಲ್ಕ ವಸೂಲಿ ಮಾಡಿ ಜಲಮಂಡಳಿಗೆ ಪಾವತಿಸದೆ ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡಳಿಯ 13 ಅಧಿಕಾರಿ, ಸಿಬಂದಿಯನ್ನು ಅಮಾನತುಗೊಳಿಸಿ ಜಲಮಂಡಳಿ ಅಧ್ಯಕ್ಷ ಜಯರಾಂ ಆದೇಶಿಸಿದ್ದಾರೆ.

ಕೆಲವು ವರ್ಷಗಳ ಹಿಂದೆ ಜಲಮಂಡಳಿಯಿಂದ ನೀರು ಪೂರೈಕೆ ಶುಲ್ಕವನ್ನು ನಗದು ಅಥವಾ ಡಿಡಿ, ಚೆಕ್‌ ಮೂಲಕ ವಸೂಲಿ ಮಾಡಲಾಗುತ್ತಿತ್ತು. ಹೀಗೆ ವಸೂಲಿ ಮಾಡುವ ಮೊತ್ತವನ್ನು ಜಲಮಂಡಳಿಯ ನಗದು ಪುಸ್ತಕದಲ್ಲಿ ನೋಂದಾಯಿಸುವುದರ ಜತೆಗೆ ಸಜಲ ತಂತ್ರಾಂಶದಲ್ಲಿ ಗ್ರಾಹಕರ ಖಾತೆಯಲ್ಲಿ ಅದನ್ನು ನಮೂದಿಸಬೇಕಿತ್ತು. ಜತೆಗೆ ಹಣವನ್ನು ಜಲಮಂಡಳಿ ಬ್ಯಾಂಕ್‌ ಖಾತೆಗೆ ಪಾವತಿಸಬೇಕಿತ್ತು.

ಆದರೆ, 2016ರಿಂದ 2018ರವರೆಗೆ 850ಕ್ಕೂ ಹೆಚ್ಚಿನ ಗ್ರಾಹಕರಿಂದ ವಸೂಲಿಯಾದ ನೀರಿನ ಶುಲ್ಕವನ್ನು ಜಲಮಂಡಳಿ ಬ್ಯಾಂಕ್‌ ಖಾತೆಗೆ ಪಾವತಿಸದೆ, ಸಜಲ ತಂತ್ರಾಂಶದಲ್ಲಿ ಗ್ರಾಹಕರ ಖಾತೆಯಲ್ಲಿ ಹಣ ಪಾವತಿಸಲಾಗಿದೆ ಎಂದು ನಮೂದಿಸಿ ವಂಚಿಸಿರುವುದು ಕಳೆದ ತಿಂಗಳು ಬೆಳಕಿಗೆ ಬಂದಿತ್ತು. ಈ ವಂಚನೆಯಿಂದಾಗಿ ಮಂಡಳಿಗೆ 1.75 ಕೋಟಿ ರೂ.ಗಳಷ್ಟು ನಷ್ಟವುಂಟಾಗಿರುವ ಕುರಿತು ಅಂದಾಜಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಜಲಮಂಡಳಿಯು ಸಹಾಯಕ ನಿಯಂತ್ರಕರು (ಲೆಕ್ಕ) ಅವರ ನೇತೃತ್ವದಲ್ಲಿ 3 ತಂಡ ರಚಿಸಿ ಆಡಿಟ್‌ ಮಾಡಲಾಗಿತ್ತು. ಇದರ ‌ ಮಧ್ಯಂತರ ವರದಿ ಬಂದಿದ್ದು, ಅಂದಾಜು 1.75 ಕೋಟಿ ರೂ.ಗೂ ಹೆಚ್ಚಿನ ಮೊತ್ತದ ಬಿಲ್‌ ಮೊತ್ತ ವಸೂಲಿಯಾಗಿದ್ದು, ಅದನ್ನು ಜಲಮಂಡಳಿ ಬ್ಯಾಂಕ್‌ ಖಾತೆಗೆ ಪಾವತಿಸಲಾಗಿಲ್ಲ. ಜತೆಗೆ ಮಂಡಳಿಯ ಎಂಜಿನಿಯರ್‌ಗಳು ಸೇರಿ ಅಧಿಕಾರಿಗಳು ಮಾತ್ರ ಬಳಸುತ್ತಿದ್ದ ಸಜಲ ತಂತ್ರಾಂಶದ ಲಾಗಿನ್‌ ಐಡಿ ಮತ್ತು ಪಾಸ್‌ವರ್ಡ್‌ ಅನ್ನು ಗುತ್ತಿಗೆ ನೌಕರರು ದುರ್ಬಳಕೆ ಮಾಡಿಕೊಂಡು ಮಂಡಳಿಗೆ ವಂಚಿಸಲಾಗಿರುವುದು ಪತ್ತೆಯಾಗಿದೆ.

ಯಾರ್ಯಾರು ಅಮಾನತು?
ಸಹಾಯಕ ನಿಯಂತ್ರಕರು (ಲೆಕ್ಕ) ಅವರ ನೇತೃತ್ವದ ತಂಡಗಳು ನೀಡಿದ ಮಧ್ಯಂತರ ವರದಿಯನ್ನಾಧರಿಸಿ ಜಲಮಂಡಳಿ ಅಧ್ಯಕ್ಷ ಜಯರಾಂ ಅವರು 13 ಜನ ಗುತ್ತಿಗೆ ನೌಕರರು ಸೇರಿ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಅದರಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್‌, ಕಂದಾಯ ವ್ಯವಸ್ಥಾಪಕ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಸಹಾಯಕ ಕಲ್ಯಾಣಾಧಿಕಾರಿ ಸೇರಿ ಇನ್ನಿತರ ಹುದ್ದೆಯ ಅಧಿಕಾರಿಗಳಿದ್ದಾರೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.