ಪ.ಬಂಗಾಳ: BJP ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುವೆ: ರಾಜು ಬ್ಯಾನರ್ಜಿ
Team Udayavani, Nov 25, 2020, 8:56 PM IST
ದುರ್ಗಾಪುರ (ಪ.ಬಂಗಾಳ): ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜು ಬ್ಯಾನರ್ಜಿ ಹೇಳಿದ್ದಾರೆ.
ದುರ್ಗಾಪುರದಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಗೂಂಡಾಗಳ ರಾಜ್ಯವಾದಂತಾಗಿದೆ. ಪೊಲೀಸರು ಇವರನ್ನು ನಿಗ್ರಹಿಸಲು ಏನೂ ಮಾಡುತ್ತಿಲ್ಲ. ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ, ಇಂತಹ ಪೊಲೀಸರಿಗೆ ಯಾವ ನೆರವೂ ಸಿಕ್ಕುವುದಿಲ್ಲ ಅವರು ಬೂಟು ನೆಕ್ಕುವಂತೆ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ, ಬಂಗಾಳದಲ್ಲಿ ಮಹಿಳೆಯರಿಗೇ ಸುರಕ್ಷತೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಪಂಚಲಿಂಗ ದರ್ಶನಕ್ಕೆ ಒಂದು ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲು ಸಿಎಂ ಸೂಚನೆ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444