ಕೋವಿಡ್ ಸೋಂಕು: ದೆಹಲಿ, ಹರ್ಯಾಣ, ಯುಪಿ ಬಳಿಕ ಇದೀಗ ತಮಿಳುನಾಡಿನಲ್ಲೂ ಮಾಸ್ಕ್ ಕಡ್ಡಾಯ
ಒಂದು ವೇಳೆ ನಿಯಮ ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸಲಾಗುವುದು
Team Udayavani, Apr 22, 2022, 3:05 PM IST
ನವದೆಹಲಿ:ಕೋವಿಡ್ 19 ಸೋಂಕು ದೇಶದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಹರ್ಯಾಣ, ಉತ್ತರಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಘೋಷಿಸಿದ್ದ ಬೆನ್ನಲ್ಲೇ ಇದೀಗ ತಮಿಳುನಾಡು ಸರ್ಕಾರ ಶುಕ್ರವಾರ(ಏಪ್ರಿಲ್ 22) ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿದೆ.
ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಘೋಷಿಸಿರುವ ತಮಿಳುನಾಡು ಸರ್ಕಾರ, ಒಂದು ವೇಳೆ ನಿಯಮ ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.
ರಾಷ್ಟ್ರರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ವಿವರಿಸಿದೆ.
ಕಳೆದ ಕೆಲವು ದಿನಗಳಿಂದ ತಮಿಳುನಾಡಿನಲ್ಲಿಯೂ ಕೋವಿಡ್ ಸೋಂಕು ಪ್ರಕರಣ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗತೊಡಗಿದೆ. ಬುಧವಾರ ತಮಿಳುನಾಡಿನಲ್ಲಿ 31 ಪ್ರಕರಣ ಪತ್ತೆಯಾಗಿದ್ದು, ಗುರುವಾರ 39 ಮಂದಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ