ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ
Team Udayavani, Jan 21, 2022, 5:59 PM IST
ಬೆಂಗಳೂರು : ರಾಜ್ಯ ಸರಕಾರ ಶುಕ್ರವಾರ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿರುವ ಕ್ರಮಕ್ಕೆ ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.
5 ಸಾವಿರ ಕೋವಿಡ್ ಕೇಸ್‌ಗಳಿದ್ದಾಗ – ವೀಕೆಂಡ್ ಕರ್ಫ್ಯೂ. 50 ಸಾವಿರ ಕೋವಿಡ್ ಕೇಸ್‌ಗಳಿದ್ದಾಗ – ವೀಕೆಂಡ್ ಕರ್ಫ್ಯೂ ವಾಪಸ್!, ಕರ್ಫ್ಯೂ ಜಾರಿಗೊಳಿಸಿದ್ದು ಕರೋನಾ ನಿಯಂತ್ರಿಸುವ ಉದ್ದೇಶದಿಂದಲ್ಲ, ಪಾದಯಾತ್ರೆ ನಿಯಂತ್ರಿಸುವ ಉದ್ದೇಶದಿಂದ ಅಷ್ಟೇ! ರಾಜಕೀಯ ಹಿತಾಸಕ್ತಿಗಾಗಿ ಜನರನ್ನು ಗೋಳಾಡಿಸಿದ ಬಿಜೆಪಿ ಸರ್ಕಾರ ಜನರ ಕ್ಷಮೆ ಕೇಳಬೇಕು. ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಆಗ್ರಹಿಸಿದೆ.
ಇದನ್ನೂ ಓದಿ : ಕೋವಿಡ್ ಮಹತ್ವದ ಸಭೆ: ವೀಕೆಂಡ್ ಕರ್ಫ್ಯೂ ತೆರವು, ನೈಟ್ ಕರ್ಫ್ಯೂ ಮುಂದುವರಿಕೆ
ರಾಜ್ಯ ಸರಕಾರ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಿ ವೀಕೆಂಡ್ ಕರ್ಫ್ಯೂ ತೆರವು ಗೊಳಿಸುವ ತೀರ್ಮಾನ ಕೈಗೊಂಡಿದೆ.
ಸಭೆಯ ಬಳಿಕ ಸಚಿವ ಆರ್ ಅಶೋಕ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ , ಎಲ್ಲಾ ತಜ್ಞರ ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳು ಸ್ವೀಕರಿಸಿದ್ದಾರೆ. ವೀಕೆಂಡ್ ಕರ್ಫ್ಯೂ ತೆರವು ಗೊಳಿಸುವ ತೀರ್ಮಾನ ಕೈಗೊಂಡಿದ್ದು, ನೈಟ್ ಕರ್ಫ್ಯೂ ಮುಂದುವರಿಯಲಿದೆ, ಉಳಿದ ಎಲ್ಲ ನಿಯಮಗಳು ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾರ್ಕೋನಹಳ್ಳಿ ಜಲಾಶಯ ಭರ್ತಿ: ರೈತರಲ್ಲಿ ಮಂದಹಾಸ, ಜಲಾಶಯದ ಒಳಹರಿವು 2200 ಕ್ಯೂಸೆಕ್ಸ್
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ
ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ
ಪಿಎಸ್ಐ ನೇಮಕಾತಿ ಅಕ್ರಮ : ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ವಿಜಯಪುರ : ಸಿಡಿಲಿಗೆ 14 ಕುರಿಗಳು ಸಾವು : ಸೂಕ್ತ ಪರಿಹಾರಕ್ಕೆ ಒತ್ತಾಯ