
ವೀಕೆಂಡ್ ಪಾರ್ಟಿಗೆ ಪೊಲೀಸರ ದಾಳಿ : ಅಮಲು ಪದಾರ್ಥಗಳು ವಶಕ್ಕೆ
Team Udayavani, Apr 10, 2021, 11:15 PM IST

ನೆಲಮಂಗಲ: ತಾಲೂಕಿನ ಮರಸರಹಳ್ಳಿಯಲ್ಲಿ ಹೊರರಾಜ್ಯದ ಯುವಕ ಯುವತಿಯರ ನಡೆಸುತ್ತಿದ್ದ ವೀಕೆಂಡ್ ಪಾರ್ಟಿಗೆ ಪೊಲೀಸರು ದಾಳಿ ನಡೆಸಿ ಗಾಂಜಾ ಹಾಗೂ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ನಗರದಲ್ಲಿ ನೈಟ್‌ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ತಾಲೂಕಿನ ಶ್ರೀನಿವಾಸಪುರ ಗ್ರಾಮ ಪಂಚಾಯ್ತಿಯ ಮರಸರಹಳ್ಳಿಯಲ್ಲಿ ನಿವೃತ್ತ ಡೀಸಿ ತೋಟದಲ್ಲಿ ಕೇರಳ, ತಮಿಳುನಾಡು ಹಾಗೂ ಬೆಂಗಳೂರು ಸುತ್ತಮುತ್ತಲಿನ 70ಕ್ಕೂ ಹೆಚ್ಚು ಯುವಕ ಯುವತಿಯರು 1 ಸಾವಿರ ರೂ.ನಿಂದ 10 ಸಾವಿರ ರೂ.ವರೆಗೂ ಹಣ ನೀಡಿ ಪಾರ್ಟಿಯಲ್ಲಿ ಭಾಗವಹಿಸಿದ್ದರು.
ದಿಢೀರ್ ದಾಳಿ:
ಶನಿವಾರ ಮಧ್ಯಾಹ್ನದಿಂದ ಬೆಂಗಳೂರು, ಹೊರರಾಜ್ಯಗಳಿಂದ ಆಗಮಿಸಿರುವ ಯುವಕ ಯುವತಿಯರು ಸಂಜೆ ವೇಳೆಗೆ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಜಗದೀಶ್ ಹಾಗೂ ವೃತ್ತ ನಿರೀಕ್ಷಕ ಹರೀಶ್ ಕುಮಾರ್, ಸಬ್‌ಇನ್‌ಸ್ಪೆಕ್ಟರ್ ವಸಂತ್, ಸುರೇಶ್ ನೇತೃತ್ವದಲ್ಲಿ ದಿಢೀರ್ ದಾಳಿ ಮಾಡಿಸಿದ ಪೊಲೀಸರು ಯುವಕ ಯುವತಿಯರನ್ನು ವಶಕ್ಕೆ ಪಡೆದು ಪಾರ್ಟಿಗೆ ತಂದಿದ್ದ ಮದ್ಯ ಹಾಗೂ ಗಾಂಜಾ ವಶಕ್ಕೆ ಪಡೆದರು.
ಪೊಲೀಸರು ದಿಢೀರ್ ದಾಳಿ ನಡೆಸುತ್ತಿದಂತೆ ಪಾರ್ಟಿ ಆಯೋಜನೆ ಮಾಡಿದ್ದ ವ್ಯಕ್ತಿ ನಾಪತ್ತೆ ಆಗಿದ್ದಾನೆ. ಇಂತಹ ಪಾರ್ಟಿಗಳನ್ನು ನಡೆಸಲು ಜಮೀನು ಮಾಲಿಕರು ಅನುಮತಿ ನೀಡಿದ್ದು ಹೇಗೆ? ಕೊರೊನಾ ಕಟ್ಟುನಿಟ್ಟಿನ ನಿಯಮದ ನಡುವೆ 70ಕ್ಕೂ ಹೆಚ್ಚು ಹೊರರಾಜ್ಯದ ಯುವಕರು ಸೇರಿದ್ದು ಹೇಗೆ? ಎಂಬ ಅನುಮಾನಗಳು ವ್ಯಕ್ತವಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
