ಪಶ್ಚಿಮಬಂಗಾಳ: ಮಮತಾ ಬ್ಯಾನರ್ಜಿ ಕಿರಿಯ ಸಹೋದರ ಅಶಿಮ್ ಕೋವಿಡ್ ನಿಂದ ನಿಧನ
ಶುಕ್ರವಾರ 136 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿತ್ತು.
Team Udayavani, May 15, 2021, 12:32 PM IST
ನವದೆಹಲಿ:ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಅಶಿಮ್ ಬ್ಯಾನರ್ಜಿ ಕೋವಿಡ್ 19 ಸೋಂಕಿನಿಂದ ಶನಿವಾರ(ಮೇ 15) ನಿಧನರಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಚುನಾವಣಾ ಶಾಖೆಯ ಶಿರಸ್ತೇದಾರರಾಗಿದ್ದ ನಾಗನೂರಿ ಕೋವಿಡ್ ಗೆ ಬಲಿ
ಮಾಧ್ಯಮಗಳ ವರದಿ ಪ್ರಕಾರ, ಅಶಿಮ್ ಬ್ಯಾನರ್ಜಿ ಕೋಲ್ಕತಾದ ಮೇದಿಕಾ ಆಸ್ಪತ್ರೆಯಲ್ಲಿ ಸುಮಾರು ಒಂದು ತಿಂಗಳ ಕಾಲದಿಂದ ಕೋವಿಡ್ 19 ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಶಿಮ್ ಕೊನೆಯುಸಿರೆಳೆದಿರುವುದಾಗಿ ವರದಿ ಹೇಳಿದೆ.
ಪಶ್ಚಿಮಬಂಗಾಳದಲ್ಲಿ ಶುಕ್ರವಾರ ದಾಖಲೆಯ 20,846 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 10,94,802ಕ್ಕೆ ಏರಿಕೆಯಾಗಿದೆ.
ಪಶ್ಚಿಮಬಂಗಾಳದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 12,993ಕ್ಕೆ ಏರಿಕೆಯಾಗಿದೆ. ಶುಕ್ರವಾರ 136 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದರು ಎಂದು ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದ ಬುಲೆಟಿನಲ್ಲಿ ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು