ODI ವಿಶ್ವಕಪ್‌ ಕ್ರಿಕೆಟ್‌: ಅಹ್ಮದಾಬಾದ್‌ಗೆ ಏಕೆ ಹೆಚ್ಚಿನ ಮಹತ್ವ?

Team Udayavani, Jun 28, 2023, 7:49 AM IST

AHMEDABAD STADIUM

ಅಹ್ಮದಾಬಾದ್‌: ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ವೇಳಾಪಟ್ಟಿ ಪ್ರಕಟ ಗೊಂಡ ಬೆನ್ನಲ್ಲೇ ಭಾರೀ ಅಸಮಾಧಾನ ವ್ಯಕ್ತವಾಗಿದೆ. ಅಹ್ಮದಾಬಾದ್‌ಗೆ ಹೆಚ್ಚಿನ ಮಹತ್ವ ನೀಡಲಾಗಿದೆ, ಹಾಗೆಯೇ ದೇಶದ ಬಹುತೇಕ ಕ್ರಿಕೆಟ್‌ ಕೇಂದ್ರ ಗಳನ್ನು ನಿರ್ಲಕ್ಷಿಸಲಾಗಿದೆ, ರಾಜಕೀಯ ಹಿತಾಸಕ್ತಿಯೇ ಇಲ್ಲಿ ಮುಖ್ಯವಾದಂತಿದೆ ಎಂಬ ಆರೋಪ ಕೇಳಿಬಂದಿದೆ.

ಅವಕಾಶ ವಂಚಿತ ಪ್ರಮುಖ ಕೇಂದ್ರಗಳೆಂದರೆ ಮೊಹಾಲಿ, ನಾಗ್ಪುರ, ಇಂದೋರ್‌, ರಾಜ್‌ಕೋಟ್‌, ರಾಂಚಿ ಮತ್ತು ತಿರುವನಂತಪುರ. ಭಾರತ ಆಯೋಜಿಸಿದ ಹಿಂದಿನೆರಡು ವಿಶ್ವಕಪ್‌ ಪಂದ್ಯಾವಳಿಯ ವೇಳೆ ಮೊಹಾಲಿಗೆ ಮನ್ನಣೆ ನೀಡಲಾಗಿತ್ತು. ಇಲ್ಲಿ ಭಾರತ-ಪಾಕಿಸ್ಥಾನ ಪಂದ್ಯ ವನ್ನೂ ಆಯೋಜಿಸಲಾಗಿತ್ತು. ಈ ಬಾರಿ ಮೊಹಾಲಿ ಯನ್ನು ಮೂಲೆಗುಂಪು ಮಾಡಲಾಗಿದೆ. ಕೇರಳದ ತಿರುವನಂತಪುರ ಕೂಡ ಭಾರೀ ನಿರೀಕ್ಷೆಯಲ್ಲಿತ್ತು. ಅದಕ್ಕೆ ನಿರಾಸೆಯೇ ಗತಿಯಾಗಿದೆ. ಧರ್ಮ ಶಾಲಾದಲ್ಲಿ 5 ಪಂದ್ಯಗಳನ್ನು ಆಡಿಸುವ ಬದಲು ಕೆಲವನ್ನು ಬೇರೆ ನಗರಗಳಿಗೆ ಹಂಚಿಕೊಡಬಹುದಿತ್ತು ಎಂಬುದು ಕೆಲವು ಕ್ರಿಕೆಟ್‌ ಮಂಡಳಿಗಳ ವಾದ.

“1987ರಲ್ಲಿ ಆಸ್ಟ್ರೇಲಿಯ-ನ್ಯೂಜಿಲ್ಯಾಂಡ್‌ ಪಂದ್ಯವನ್ನು ಇಂದೋರ್‌ ಯಶಸ್ವಿಯಾಗಿ ನಡೆಸಿಕೊಟ್ಟಿತ್ತು. ಈ ಬಾರಿ ನಿರ್ಲಕ್ಷಿಸಲಾಗಿದೆ. ಇಂದೋರ್‌ ಅಮೋಘ ಕ್ರಿಕೆಟ್‌ ಇತಿಹಾಸವನ್ನು ಹೊಂದಿರುವ ನಗರ’ ಎಂದಿದ್ದಾರೆ ಮಧ್ಯಪ್ರದೇಶ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಅಭಿಲಾಷ್‌ ಖಾಂಡೇಕರ್‌.

1996ರಿಂದಲೂ ವಿಶ್ವಕಪ್‌ ಆತಿಥ್ಯ ಪಡೆಯುತ್ತ ಬಂದ ಮೊಹಾಲಿಯನ್ನು ಕಡೆಗಣಿಸಿದ್ದಕ್ಕೆ ಪಂಜಾಬ್‌ ಕ್ರೀಡಾ ಸಚಿವ ಗುರ್ಮೀತ್‌ ಸಿಂಗ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ರಾಜಕೀಯದ ಆಟ ಎಂದು ಕಿಡಿಕಾರಿದ್ದಾರೆ.

“ಭಾರತದಲ್ಲೇ ಅತ್ಯುತ್ತಮ ಕ್ರಿಕೆಟ್‌ ಸ್ಟೇಡಿಯಂ ಹೊಂದಿರುವ, ದಕ್ಷಿಣದ ಸ್ಪೋರ್ಟ್ಸ್ ಹಬ್‌ ಆಗಿರುವ ತಿರುವನಂತಪುರಕ್ಕೆ ವಿಶ್ವಕಪ್‌ ಪಂದ್ಯದ ಆತಿಥ್ಯ ಲಭಿಸದಿದ್ದುದಕ್ಕೆ ತೀವ್ರ ನಿರಾಸೆಯಾಗಿದೆ’ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.