ಗಂಡನನ್ನು ಕೊಂದ ಮಾಹಿತಿ Facebookನಲ್ಲಿ ಹಂಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ


Team Udayavani, Jan 4, 2021, 4:30 PM IST

ಗಂಡನನ್ನು ಕೊಂದ ಮಾಹಿತಿ ಫೇಸ್ ಬುಕ್ ನಲ್ಲಿ ಹಂಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ನವದೆಹಲಿ : ತನ್ನ ಗಂಡನನ್ನು ಚೂರಿಯಿಂದ ಇರಿದು ಕೊಂದು, ಬಳಿಕ ತಾನು ಕೊಂದಿರುವ ಮಾಹಿತಿಯನ್ನು ಫೇಸ್ ಬುಕ್ ನಲ್ಲಿ ಹಂಚಿಕೊಂಡು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ದೆಹಲಿಯ ಛತ್ತರ್ ಪುರದಲ್ಲಿರುವ ವಸತಿ ಸಮ್ಮುಚ್ಛಯದಲ್ಲಿ ಶನಿವಾರ ನಡೆದಿದೆ.

ಘಟನೆಯ ವಿವರ : ದಕ್ಷಿಣ ದೆಹಲಿಯ ಛತ್ತರ್ ಪುರದಲ್ಲಿರುವ ವಸತಿ ಸಮುಚ್ಛಯದಲ್ಲಿರುವ ಗಂಡ ಹೆಂಡತಿ ವಾಸಿಸುತ್ತಿದ್ದರು, ಶನಿವಾರ ಅವರಿಬ್ಬರ ನಡುವೆ ಅದೇನು ನಡೆಯಿತೋ ಗೊತ್ತಿಲ್ಲ ಹೆಂಡತಿ ತನ್ನ ಗಂಡನನ್ನು ಚೂರಿಯಿಂದ ಇರಿದು ಕೊಂದಿದ್ದಾಳೆ, ಅಷ್ಟೇ ಅಲ್ಲ ಕೊಂದ ವಿಚಾರವನ್ನು ತನ್ನ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾಳೆ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಮಹಿಳೆ ತನ್ನ ಫೇಸ್ ಬುಕ್ ನಲ್ಲಿ ತಾನು ಕೊಂದಿರುವ ಮಾಹಿತಿಯನ್ನು ಅದೇ ಪ್ರದೇಶದ ಮಹಿಳೆಯೊಬ್ಬರು ಗಮನಿಸಿದ್ದಾರೆ, ಫೇಸ್ ಬುಕ್ ನಲ್ಲಿ ಹಾಕಿರುವ ಮಾಹಿತಿಯನ್ನು ಮನಗಂಡ ಮಹಿಳೆ ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ: ಕೇಂದ್ರದ ಶಿಸ್ತು ಸಮಿತಿಗೆ ಯತ್ನಾಳ್ ವಿಚಾರದಲ್ಲಿ ಮಾಹಿತಿ ನೀಡಿದ್ದೇವೆ: ನಳಿನ್ ಕುಮಾರ್ ಕಟೀಲ್

ಮಾಹಿತಿ ಅರಿತು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ತೆರೆಯುವ ಪ್ರಯತ್ನ ಮಾಡಿದ್ದಾರೆ ಆದರೆ ಒಳಗಿನಿಂದ ಯಾವುದೇ ಪ್ರತಿಕ್ರೀಯೆ ಬರದಿದ್ದಾಗ ಪೊಲೀಸರು ಬಾಗಿಲನ್ನು ಒಡೆದು ಒಳ ಪ್ರವೇಶಿಸಿದ್ದಾರೆ, ಕೊಠಡಿಯ ಒಳಗೆ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ಅದರ ಪಕ್ಕದಲ್ಲೇ ಇರುವ ಬೆಡ್ ಮೇಲೆ ಮಹಿಳೆ ಅರೆಪ್ರಜ್ಞಾವಸ್ಥೆಯಲ್ಲಿರುವುದು ಗಮನಗಕ್ಕೆ ಬಂದಿದೆ.

ಕೂಡಲೇ ಪೊಲೀಸರು ಮಹಿಳೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ.

ಮಾಹಿತಿಗಳ ಪ್ರಕಾರ 2013ರಲ್ಲಿ ಗಂಡ ಹೆಂಡತಿ ಛತ್ತರ್ ಪುರದ ವಸತಿ ಸಮ್ಮುಚ್ಛಯದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದು , ಇಬ್ಬರೂ ಇನ್ಸೂರೆನ್ಸ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರೆಂದು ಹೇಳಲಾಗಿದೆ.

ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ ಆದರೆ ಕೆಲವೊಂದು ಮೂಲಗಳ ಪ್ರಕಾರ ದಂಪತಿಗೆ ಮಕ್ಕಳಿಲ್ಲದ ಕಾರಣ ಮನನೊಂದು ಈ ರೀತಿ ಕೃತ್ಯ ಎಸಗಿರುವ ಅನುಮಾನಗಳೂ ಇವೆ ಎನ್ನಲಾಗಿದೆ.

ಸದ್ಯ ಸ್ಥಳೀಯರ ಹೇಳಿಕೆಯ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

1-sdds

ಸ್ವಾತಂತ್ರ್ಯ ಹೋರಾಟಕ್ಕೆ ರಾಜ್ಯದ ಕೊಡುಗೆ:’ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ

ಕಾರಜೋಳ

ತಮಿಳುನಾಡಿಗೆ ಹೊಗೇನೇಕಲ್ ನಲ್ಲಿ ಯೋಜನೆ ಮಾಡಲು ಬಿಡುವುದಿಲ್ಲ: ಕಾರಜೋಳ

30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

SUNIL-KUMAR

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

ರೈಡ್ ನಲ್ಲಿ ತಾನು ಔಟಾದರೂ ಬೆಂಗಾಲ್ ತಂಡಕ್ಕೆ ಎಂಟು ಅಂಕ ತಂದ ನಬಿಬಕ್ಷ್! ಆಗಿದ್ದೇನು?

ರೈಡ್ ನಲ್ಲಿ ತಾನು ಔಟಾದರೂ ಬೆಂಗಾಲ್ ತಂಡಕ್ಕೆ ಎಂಟು ಅಂಕ ತಂದ ನಬಿಬಕ್ಷ್! ವಿಡಿಯೋ ನೋಡಿ

1-assads-2

ಪ್ರಧಾನಿ ಮೋದಿ ಹೆಸರಲ್ಲಿ ಸಂಕಲ್ಪ: ಎರಡು ವರ್ಷಗಳಿಂದ ನಿತ್ಯ ಯಾಗ!

ಉಡುಪಿ; OLXನಲ್ಲಿ ಕಿವಿಯೋಲೆ ಮಾರಲು ಹೋಗಿ 93 ಸಾವಿರ ರೂ. ಕಳೆದುಕೊಂಡ ಯುವತಿ

ಉಡುಪಿ; OLXನಲ್ಲಿ ಕಿವಿಯೋಲೆ ಮಾರಲು ಹೋಗಿ 93 ಸಾವಿರ ರೂ. ಕಳೆದುಕೊಂಡ ಯುವತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎನ್‌ಡಿಎಗೆ 296 ಸ್ಥಾನ ಖಚಿತ; ಇಂಡಿಯಾ ಟುಡೇ ಮೂಡ್‌ ಆಫ್ ದ ನೇಷನ್‌ ವರದಿ

ಎನ್‌ಡಿಎಗೆ 296 ಸ್ಥಾನ ಖಚಿತ; ಇಂಡಿಯಾ ಟುಡೇ ಮೂಡ್‌ ಆಫ್ ದ ನೇಷನ್‌ ವರದಿ

crime (2)

ಪುಷ್ಪ ಚಿತ್ರದ ಪ್ರೇರಣೆ : ಕೊಲೆ ಮಾಡಿ ವೈರಲ್ ಆಗಲು ಬಯಸಿದ್ದ ಬಾಲಕರು!

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

amar jawan jyoti

ಶಾಶ್ವತವಾಗಿ ನಂದಲಿದೆ 50 ವರ್ಷಗಳಿಂದ ಬೆಳಗಿದ ಇಂಡಿಯಾ ಗೇಟ್ ಅಮರ್ ಜವಾನ್ ಜ್ಯೋತಿ!

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

MUST WATCH

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

ಹೊಸ ಸೇರ್ಪಡೆ

1-sdds

ಸ್ವಾತಂತ್ರ್ಯ ಹೋರಾಟಕ್ಕೆ ರಾಜ್ಯದ ಕೊಡುಗೆ:’ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ

ಕಾರಜೋಳ

ತಮಿಳುನಾಡಿಗೆ ಹೊಗೇನೇಕಲ್ ನಲ್ಲಿ ಯೋಜನೆ ಮಾಡಲು ಬಿಡುವುದಿಲ್ಲ: ಕಾರಜೋಳ

30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ…ಇಡೀ ನಗರವೇ ಸ್ಥಳಾಂತರ

13childrens-killed

ಮಕ್ಕಳನ್ನು ಬಾವಿಗೆ ನೂಕಿ ಹತ್ಯೆಗೈದ ಹೆತ್ತ ತಾಯಿ

SUNIL-KUMAR

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.