ಅಡ್ಡಮತದಾನ ಮಾಡಿದ ಇಬ್ಬರನ್ನೂ ಪಕ್ಷದಿಂದ ಹೊರಹಾಕುತ್ತೇವೆ: ಸಿ.ಎಂ.ಇಬ್ರಾಹಿಂ
Team Udayavani, Jun 11, 2022, 12:31 PM IST
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಡೀಲ್, ಡೀಲ್, ಡೀಲ್, ಕಾಂಗ್ರೆಸ್ ಡೀಲ್ ಎಂದು ವ್ಯಂಗ್ಯವಾಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಅಡ್ಡಮತದಾನ ನಡೆಸಿದ ಇಬ್ಬರು ಶಾಸಕರನ್ನು ಪಕ್ಷದಿಂದ ಹೊರ ಹಾಕಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಅಡ್ಡ ಮತದಾನ ಮಾಡಿದ ಶಾಸಕರನ್ನು ಹೊರ ಹಾಕುತ್ತೇವೆ. ಇವರನ್ನು ಉಚ್ಛಾಟಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ನೂಪುರ್ ಶರ್ಮಾ ವಿವಾದ; ದೇಶಾದ್ಯಂತ ಉದ್ವಿಗ್ನ ಸ್ಥಿತಿ; ರಾಂಚಿಯಲ್ಲಿ 2 ಬಲಿ
ರಾಜ್ಯಸಭಾ ಚುನಾವಣೆಗೆ ಮನ್ಸೂರ್ ಅಲಿಖಾನ್ ಅವರನ್ನು ನಿಲ್ಲಿಸಿ ಕಾಂಗ್ರೆಸ್ ಸಾಧಿಸಿದ್ದೇನು? ಅಲ್ಪಸಂಖ್ಯಾತರನ್ನು ಸೋಲಿಸುವುದಕ್ಕೆ ಚುನಾವಣೆಗೆ ನಿಲ್ಲಿಸಿದ್ದಿರಾ? ಸಿದ್ದರಾಮಯ್ಯ ಈಗ ರಾಜ್ಯದಲ್ಲಿ ಬೆತ್ತಲಾಗಿದ್ದಾರೆ. ಕಾಂಗ್ರೆಸ್ ಧೋರಣೆ ಖಂಡಿಸಿ ಗಾಂಧಿ ಪ್ರತಿಮೆ ಬಳಿಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯಸಭಾ ಚುನಾವಣೆಯಲ್ಲಿ ಕೋಟ್ಯಾಂತರ ರೂ. ಕೈ ಬದಲಾಗಿದೆ. ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಎಂಬುದು ಈ ಫಲಿತಾಂಶದಿಂದ ಸಾಬೀತಾಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ