ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಮಾಹಿತಿ ಬಿಟ್ಟುಕೊಡಲ್ಲ:ಡಿಕೆಶಿ
Team Udayavani, Jan 24, 2022, 6:11 PM IST
ಬೆಂಗಳೂರು: ಕೆಲ ಸಚಿವರು ಸೇರಿದಂತೆ ಬಿಜೆಪಿ ಮುಖಂಡರು ಡಿಕೆಶಿ ಅವರ ಸಂಪರ್ಕದಲ್ಲಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ನಮ್ಮ ಜತೆ ಮಾತನಾಡಿರುವವರ ಬಗ್ಗೆ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.
‘ಬಿಜೆಪಿ ಹಾಗೂ ಇತರೆ ಪಕ್ಷಗಳ ನಾಯಕರು ನಮ್ಮ ಜತೆ ಸಂಪರ್ಕದಲ್ಲಿರುವ ವಿಚಾರವನ್ನು ನಾವು ಬಹಿರಂಗವಾಗಿ ಮಾತನಾಡಲು ಸಾಧ್ಯವಿಲ್ಲ. ವಿಧಾನ ಪರಿಷತ್ ಹಾಗೂ ಶಾಸಕರ ವಿಚಾರ ಚರ್ಚೆ ಮಾಡಲು ಆಗುವುದಿಲ್ಲ. ಅವರ ಪಕ್ಷದಲ್ಲಿ ಏನಾಗುತ್ತಿದೆ ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ. . ಸಿದ್ದರಾಮಯ್ಯನವರ ಜತೆ ಯಾರೆಲ್ಲಾ ಮಾತನಾಡುತ್ತಿದ್ದಾರೆ ಎಂದು ಸಚಿವರುಗಳನ್ನೇ ಕೇಳಿ. ಈ ಪ್ರಶ್ನೆಯನ್ನು ನನ್ನ ಬಳಿ ಕೇಳುವ ಬದಲು ಅವರನ್ನೇ ಕೇಳಿ. ನನ್ನ ಬಳಿ ಯಾರು ಮಾತನಾಡುತ್ತಾರೆ ಎಂಬ ಮಾಹಿತಿಯನ್ನು ನಾನ್ಯಾಕೆ ಬಿಟ್ಟು ಕೊಡಲಿ? ಇದರಲ್ಲಿ ಗೌಪ್ಯತೆ ಕಾಪಾಡಿಕೊಳ್ಳುವುದು ಮುಖ್ಯ ಎಂದರು.
ಇದು ರಾಜಕಾರಣದ ಒಂದು ಭಾಗ. ಪ್ರತಿಯೊಬ್ಬ ನಾಯಕರು ತಮ್ಮ ರಾಜಕೀಯ ಭವಿಷ್ಯ ರೂಪಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಾರೆ. ಜನ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಯಾವ ರೀತಿ ಸಂದೇಶ ನೀಡುತ್ತಾರೆ ಎಂಬುದರ ಮೇಲೆ ಅವರು ತೀರ್ಮಾನ ಮಾಡುತ್ತಾರೆ’ ಎಂದರು.
‘ನಾವೇ ಮೇಕೆದಾಟು ಯೋಜನೆ ಮಾಡುತ್ತೇವೆ, ಕಾಂಗ್ರೆಸ್ ನವರಿಗೆ ಅವಕಾಶ ನೀಡುವುದಿಲ್ಲ ಎಂಬ ಸಚಿವ ಸೋಮಣ್ಣ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ನಾನು ಅಭಿನಂದಿಸುತ್ತೇನೆ. ಈ ವಿಚಾರದಲ್ಲಿ ತಡ ಮಾಡುವುದು ಬೇಡ. ಹೇಗಿದ್ದರೂ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಇದೆ. ಜತೆಗೆ ಬಿಜೆಪಿಯ 25 ಸಂಸದರಿದ್ದಾರೆ. ಒಂದೇ ದಿನದಲ್ಲಿ ಅನುಮತಿ ಪಡೆಯುವ ಸಾಮರ್ಥ್ಯವಿರುವ ಬಲಿಷ್ಠ ಸರ್ಕಾರವಿದೆ. ಅವರು ಈ ಕೆಲಸ ಮಾಡಲಿ, ಯೋಜನೆಯ ಗುದ್ದಲಿ ಪೂಜೆಗೆ ನಾವು ಕೂಡ ಹೋಗುತ್ತೇವೆ. ಸೋಮಣ್ಣ ಅವರನ್ನು ನಾನೇ ಭವ್ಯವಾಗಿ ಸ್ವಾಗತ ಮಾಡುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
ಅರ್ಚಕರ ನಿರ್ಲಕ್ಷ್ಯ : ದೇವರ ದರ್ಶಕ್ಕಾಗಿ ಕಾದು ಕಾದು ಸುಸ್ತಾದ ತೆಲುಗು ನಟ ನಾಗಿನೀಡು ಕುಟುಂಬ