ಕಳೆದ ಎರಡು ತಿಂಗಳ ಬಳಿಕ ದೇಶದಲ್ಲಿ ಭಾರೀ ಇಳಿಕೆ ಕಂಡ ಕೋವಿಡ್ ಪ್ರಕರಣ, 2427 ಸಾವು
ಕಳೆದ 24 ಗಂಟೆಗಳಲ್ಲಿ 1,73,399 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿರುವುದಾಗಿ ವರದಿ ತಿಳಿಸಿದೆ.
Team Udayavani, Jun 7, 2021, 10:16 AM IST
ನವದೆಹಲಿ:ಭಾರತದಲ್ಲಿ ಸತತವಾಗಿ ಕೋವಿಡ್ ಎರಡನೇ ಅಲೆ ಇಳಿಕೆಯಾಗುತ್ತಿದ್ದು, ಕಳೆದ ಎರಡು ತಿಂಗಳ ಬಳಿಕ ಭಾರೀ ಪ್ರಮಾಣದಲ್ಲಿ ಇಳಿಕೆಗೆ ಸಾಕ್ಷಿಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜೂನ್ 07) ಬಿಡುಗಡೆಗೊಳಿಸಿದ ಅಂಕಿ ಅಂಶದ ಪ್ರಕಾರ, ಕಳೆದ 24ಗಂಟೆಗಳಲ್ಲಿ 1,00,636 ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ಫ್ರೆಂಚ್ ಓಪನ್ ಪಂದ್ಯಾವಳಿಯಿಂದ ಹೊರ ನಡೆದ ರೋಜರ್ ಫೆಡರರ್
ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 2,427 ಮಂದಿ ಸಾವನ್ನಪ್ಪಿದ್ದಾರೆ. ಅಂಕಿಅಂಶದ ಪ್ರಕಾರ, ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 14,01,609ಕ್ಕೆ ಇಳಿಕೆಯಾಗಿದೆ. ಅಲ್ಲದೇ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 80,745ಕ್ಕೆ ಇಳಿದಿದೆ ಎಂದು ವಿವರಿಸಿದೆ.
ಸತತವಾಗಿ ಕಳೆದ 11 ದಿನಗಳಿಂದ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಎರಡು ಲಕ್ಷಕ್ಕಿಂತ ಕಡಿಮೆ ಪ್ರಕರಣ ವರದಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2,427 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ 3,49,186ಕ್ಕೆ ಏರಿಕೆಯಾಗಿದೆ.
ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ 25 ದಿನಗಳಿಂದ ಇಳಿಕೆಯಾಗುತ್ತಿದ್ದು, ಪ್ರಸ್ತುತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 14,01,609ಕ್ಕೆ ಇಳಿಕೆಯಾಗಿದೆ. ಅಲ್ಲದೇ ಈವರೆಗೆ ದೇಶದಲ್ಲಿ 2,71,59,180 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1,73,399 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!