ಭಾರತದಲ್ಲಿ ಕೋವಿಡ್ ಪ್ರಕರಣ ಶೇ.18.7ರಷ್ಟು ಇಳಿಕೆ; 24ಗಂಟೆಯಲ್ಲಿ 2,568 ಪ್ರಕರಣ ದೃಢ
ಕೋವಿಡ್ 19 ಸೋಂಕಿನಿಂದಾಗಿ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,23,889ಕ್ಕೆ ಏರಿಕೆಯಾಗಿದೆ.
Team Udayavani, May 3, 2022, 10:38 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,568 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದು ಸೋಮವಾರ ಪತ್ತೆಯಾದ ಪ್ರಕರಣಕ್ಕಿಂತ ಶೇ.18.7ರಷ್ಟು ಇಳಿಕೆಯಾದಂತಾಗಿದೆ. ಇದರೊಂದಿಗೆ ದೇಶದಲ್ಲಿನ ಕೋವಿಡ್ 19 ಪ್ರಕರಣಗಳ ಒಟ್ಟು ಸಂಖ್ಯೆ 4,30,84,913ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಮೇ 03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಇಲ್ಲಿ ಅವಕಾಶ ಎಲ್ಲರಿಗೂ ಸಿಗುವುದಿಲ್ಲ..; ಧೋನಿಗೆ ಮತ್ತೆ ಕುಟುಕಿದ ಯುವರಾಜ್
ಕೋವಿಡ್ ನಿಂದ 20 ಮಂದಿ ಸಾವನ್ನಪ್ಪಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದಾಗಿ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,23,889ಕ್ಕೆ ಏರಿಕೆಯಾಗಿದೆ.
ದೇಶದ ಐದು ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದ ಕೋವಿಡ್ 19 ಪ್ರಕರಣ ದಾಖಲಾಗಿದೆ. ದೆಹಲಿಯಲ್ಲಿ 1,076, ಹರ್ಯಾಣದಲ್ಲಿ 439, ಕೇರಳದಲ್ಲಿ 250, ಉತ್ತರಪ್ರದೇಶದಲ್ಲಿ 193 ಹಾಗೂ ಕರ್ನಾಟಕದಲ್ಲಿ 111 ಕೋವಿಡ್ ಪ್ರಕರಣ ವರದಿಯಾಗಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾನ ಶೇ. 98.74ರಷ್ಟಿದೆ. ಒಂದೇ ದಿನದಲ್ಲಿ 2,911 ಮಂದಿ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,41,887ಕ್ಕೆ ಹೆಚ್ಚಳವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್