ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,499 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ಈವರೆಗೆ ದೇಶದಲ್ಲಿ ಕೋವಿಡ್ ನಿಂದ 3.11 ಕೋಟಿ ಮಂದಿ ಚೇತರಿಸಿಕೊಂಡಿದ್ದಾರೆ.
Team Udayavani, Aug 9, 2021, 10:32 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,499 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಆಗಸ್ಟ್ 09) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಅಂಚೆ ಅಣ್ಣನ ಆನ್ ಲೈನ್‌ನಲ್ಲಿ ಬಣ್ಣ ಬಣ್ಣದ ರಾಖೀಗಳು: ರಾಖೀಪೋಸ್ಟ್ ಆನ್‌ಲೈನ್ ಸೇವೆ ಆರಂಭ
ಕಳೆದ 24ಗಂಟೆಗಳಲ್ಲಿ 4,634 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುವುದರೊಂದಿಗೆ, ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,02,188ಕ್ಕೆ ಇಳಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ಕಳೆದ ಒಂದು ದಿನದಲ್ಲಿ ಕೋವಿಡ್ ನಿಂದ 447 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 39,686 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 4,28,309ಕ್ಕೆ ಏರಿಕೆಯಾಗಿದೆ. ಈವರೆಗೆ ದೇಶದಲ್ಲಿ ಕೋವಿಡ್ ನಿಂದ 3.11 ಕೋಟಿ ಮಂದಿ ಚೇತರಿಸಿಕೊಂಡಿದ್ದಾರೆ.
ಕೇಂದ್ರಾಡಳಿತ ಮತ್ತು ರಾಜ್ಯಗಳಲ್ಲಿ ಈವರೆಗೆ 52.40 ಕೋಟಿ ಡೋಸ್ ಗಳಷ್ಟು ಲಸಿಕೆ ನೀಡಲಾಗಿದೆ ಎಂದು ಕೇಮದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸುಮಾರು 2.33 ಕೋಟಿಯಷ್ಟು ಕೋವಿಡ್ ಡೋಸ್ ಗಳು ನಷ್ಟವಾಗಿದ್ದು, ಇದನ್ನೂ ಕೂಡಾ ಕೇಂದ್ರಾಡಳಿತ ಮತ್ತು ರಾಜ್ಯಗಳಿಗೆ ಪೂರೈಕೆ ಮಾಡಲಾಗುವುದು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…