ಫೋನ್ ಕದ್ದಾಲಿಕೆ ಪ್ರಕರಣ ತನಿಖೆ ಸಿಬಿಐಗೆ: ಬಿಎಸ್ ವೈ
Team Udayavani, Aug 18, 2019, 9:12 AM IST
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಹಲವು ದಿನಗಳಿಂದ ಸುದ್ದಿ ಮಾಡುತ್ತಿರುವ ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಪೋನ್ ಕದ್ದಾಲಿಕೆ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸಲು ಆದೇಶ ಮಾಡಲಾಗಿದೆ. ನಾಳೆ ಈ ಸಂಬಂಧ ಆದೇಶ ಹೊರಡಿಸಲಾಗುವುದು. ಈ ಬಗ್ಗೆ ಸಮಗ್ರ ತನಿಖೆ ನಡೆದು ಸತ್ಯಾಂಶ ಹೊರ ಬರಬೇಕು ತಪ್ಪಿತಸ್ಥರ ವಿರುದ್ದ ಕ್ರಮವಾಗಬೇಕು. ಹೀಗಾಗಿ ಪೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದು ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.