ಫೋನ್ ಟ್ಯಾಪಿಂಗ್ ಸಿಬಿಐ ತನಿಖೆ ನಿರ್ಧಾರ ಸ್ವಾಗತಿಸುವೆ: ಸಿದ್ದರಾಮಯ್ಯ ಟ್ವೀಟ್
Team Udayavani, Aug 18, 2019, 12:51 PM IST
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಪೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ರಾಜ್ಯ ಸರಕಾರ ಸಿಬಿಐಗೆ ಒಪ್ಪಿಸಿದ್ದು, ಈ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಾಗತಿಸಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಿರ್ಧಾರ ಸ್ವಾಗತಾರ್ಹ. ಆದರೆ ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ ಎಂದು ನಂಬಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಪೋನ್ ಕದ್ದಾಲಿಕೆ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸಲು ಆದೇಶ ಮಾಡಲಾಗಿದೆ. ನಾಳೆ ಈ ಸಂಬಂಧ ಆದೇಶ ಹೊರಡಿಸ ಲಾಗುವುದು. ಈ ಬಗ್ಗೆ ಸಮಗ್ರ ತನಿಖೆ ನಡೆದು ಸತ್ಯಾಂಶ ಹೊರ ಬರಬೇಕು ತಪ್ಪಿತಸ್ಥರ ವಿರುದ್ದ ಕ್ರಮವಾಗಬೇಕು. ಹೀಗಾಗಿ ಪೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದು ಬಿ ಎಸ್ ಯಡಿಯೂರಪ್ಪ ಅವರು ರವಿವಾರ ಬೆಳಿಗ್ಗೆ ಹೇಳಿಕೆ ನೀಡಿದ್ದರು.
ಪೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಮುಖ್ಯಮಂತ್ರಿ @BSYBJP ನಿರ್ಧಾರ ಸ್ವಾಗತಾರ್ಹ.
ಆದರೆ ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ ಎಂದು ನಂಬಿದ್ದೇನೆ.— Siddaramaiah (@siddaramaiah) August 18, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ