ಯೋಜನೆ ಸದಸ್ಯರಿಗೆ ವಿಮೆ: ಡಾ| ಹೆಗ್ಗಡೆ

ಧರ್ಮಸ್ಥಳ: ಸುರಕ್ಷಾ ಆರೋಗ್ಯ ವಿಮೆ; ಚೆಕ್‌ ಹಸ್ತಾಂತರ 

Team Udayavani, Mar 28, 2019, 11:49 AM IST

28-March-5

ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದರು.

ಬೆಳ್ತಂಗಡಿ : ಆರೋಗ್ಯ ಕ್ಷೇತ್ರದಲ್ಲಿ, ವಿಜ್ಞಾನದಲ್ಲಿ ಹಲವು ಬದಲಾವಣೆಗಳಾಗಿದ್ದು, ಸಮರ್ಪಕ ಚಿಕಿತ್ಸೆಗೆ ಖರ್ಚು ತಗಲುವುದರಿಂದ ಧರ್ಮಸ್ಥಳ ಯೋಜನೆ ಮೂಲಕ ಕಳೆದ 15 ವರ್ಷಗಳಿಂದ ಯೋಜನೆಯ ಸದಸ್ಯರಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಒದಗಿಸಲಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದರು.
ಧರ್ಮಸ್ಥಳದಲ್ಲಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಬುಧವಾರ ನಡೆದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯ 16ನೇ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನ್ಯೂ ಇಂಡಿಯಾ ಇನ್ಶೂ ರೆನ್ಸ್‌ನ ಪ್ರಾದೇಶಿಕ ಪ್ರಬಂಧಕಿ ಜ್ಯೋತಿ,
ವಿಭಾಗೀಯ ಪ್ರಬಂಧಕ ಮನೋಹರ ರೈ, ನ್ಯಾಶನಲ್‌ ಇನ್ಶೂರೆನ್ಸ್‌ನ ವಿಭಾಗೀಯ ಪ್ರಬಂಧಕಿ ಪ್ರತಿಭಾ, ಓರಿಯೆಂಟಲ್‌ ಇನ್ಶೂರೆನ್ಸ್‌ನ ವಿಭಾಗೀಯ ಪ್ರಬಂಧಕಿ ಉಷಾ, ಯೋಜನೆಯ ಕೇಂದ್ರ ಒಕ್ಕೂಟ ಅಧ್ಯಕ್ಷ ಪ್ರಭಾಕರ ಹೊಸಂದೋಡಿ ಉಪಸ್ಥಿತರಿದ್ದರು.
ರುಡ್‌ಸೆಟ್‌ ನಿರ್ದೇಶಕ ಜನಾರ್ದನ, ಯೋಜನಾಧಿಕಾರಿ ಜಯಕರ ಶೆಟ್ಟಿ, ಹಣಕಾಸು ನಿರ್ದೇಶಕ ಶಾಂತಾರಾಮ ಪೈ, ಸಮುದಾಯ ವಿಭಾಗ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಯೋಜನೆಯ ವಿವಿಧ ವಲಯಾಧ್ಯಕ್ಷರು, ಸಂಪೂರ್ಣ ಸುರಕ್ಷಾ ಕಚೇರಿ ಸಿಬಂದಿ ಭಾಗವಹಿಸಿದ್ದರು. ಸಂಪೂರ್ಣ ಸುರಕ್ಷಾ ನಿರ್ದೇಶಕ ಅಬ್ರಾಹಂ ಸ್ವಾಗತಿಸಿ, ಗಣೇಶ್‌ ಭಟ್‌ ವಂದಿಸಿದರು. ಜಿನರಾಜ ಶೆಟ್ಟಿ ನಿರೂಪಿಸಿದರು.
60.5 ಕೋಟಿ ರೂ. ಪ್ರೀಮಿಯಂ
ಈ ಬಾರಿ 1 ಲಕ್ಷದ 80 ಸಾವಿರ ಕುಟುಂಬದ 6 ಲಕ್ಷ ಸದಸ್ಯರು ಸಂಪೂರ್ಣ ಸುರಕ್ಷಾ ಯೋಜನೆಗೆ ಹೆಸರನ್ನು ನೋಂದಾಯಿಸಿದ್ದಾರೆ. ಇವರ 60.5 ಕೋಟಿ ರೂ. ಪ್ರೀಮಿಯಂನ ಚೆಕ್‌ ಅನ್ನು ಮೂರು ವಿಮಾ ಕಂಪೆನಿಗಳಿಗೆ ಯೋಜನೆಯ ಅಧ್ಯಕ್ಷ ಡಾ| ಹೆಗ್ಗಡೆಯವರು ಹಸ್ತಾಂತರಿಸಿದರು. 2004ರಲ್ಲಿ ಆರಂಭಿಸಲಾದ ಸಂಪೂರ್ಣ ಸುರಕ್ಷಾ ಗುಂಪು ವಿಮಾ ಯೋಜನೆ ಉಡುಪಿ, ದ.ಕ., ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಿಸಿದೆ. ಕಳೆದ ಬಾರಿ 10 ಲಕ್ಷ ಫಲಾನುಭವಿಗಳ ವಿಮೆಗೆ 467 ಕೋಟಿ ರೂ. ವಿನಿಯೋಗಿಸಲಾಗಿತ್ತು.
ಚಿಕಿತ್ಸೆ  ಸೇವೆಗಳ ವಿಸ್ತರಣೆ
ವಿಮೆಯಿಂದ ಲಕ್ಷಾಂತರ ರೋಗಿಗಳು ಪ್ರಯೋಜನ ಪಡೆದಿದ್ದಾರೆ. ಇದನ್ನು ಕರ್ತವ್ಯವೆಂದು ತಿಳಿದುಕೊಂಡು ಈ ಬಾರಿಯೂ ಮುಂದುವರಿಸುತ್ತಿದ್ದೇವೆ. ಈ ವರ್ಷ ಪ್ರೀಮಿಯಂ ಅಧಿಕವಾಗಿದ್ದರೂ ಚಿಕಿತ್ಸೆ ಸೇವೆಗಳ ವಿಸ್ತರಣೆಯೂ ಮಾಡಲಾಗಿದೆ ಮತ್ತು ಎಂದಿನಂತೆ ಯೋಜನೆಯ ಪಾಲುದಾರರು ವಿಮೆಯಲ್ಲಿ ಭಾಗಿಗಳಾಗಿದ್ದಾರೆ.
– ಡಾ| ಡಿ. ವೀರೇಂದ್ರ ಹೆಗ್ಗಡೆ 
    ಧರ್ಮಸ್ಥಳ

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.