Udayavni Special

ಹೌಸ್‌ ಬೋಟ್‌ ಟರ್ಮಿನಲ್‌ ಕಾಮಗಾರಿ ಶೀಘ್ರ ಆರಂಭ


Team Udayavani, Feb 18, 2020, 7:30 AM IST

boat-house

ಕಾಸರಗೋಡು: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿದ್ದರೂ, ಅವುಗಳನ್ನು ಧನಾತ್ಮಕವಾಗಿ ಬಳಸಿಕೊಳ್ಳಲು ಈ ವರೆಗೂ ವಿಫಲವಾಗಿದೆ. ಇತಿಹಾಸ ಪ್ರಸಿದ್ಧ ಬೇಕಲ ಕೋಟೆಯನ್ನು ಕೇಂದ್ರವಾಗಿರಿಸಿ ಜಿಲ್ಲೆಯಲ್ಲಿ ಹಲವು ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಯೋಜಿಸಲಾಗಿದ್ದರೂ, ನಿರೀಕ್ಷೆಯಂತೆ ಅಭಿವೃದ್ಧಿ ಸಾಧ್ಯವಾಗಿಲ್ಲ.

ಹಣಕಾಸಿನ ಕೊರತೆ, ತಾಂತ್ರಿಕ ಕಾರಣಗಳು ಹಾಗೂ ಇಚ್ಛಾಶಕ್ತಿಯ ಕೊರತೆಯಿಂದಾಗಿ ಪ್ರವಾಸೋದ್ಯಮ ಅಭಿವೃದ್ಧಿ ಕುಂಟುತ್ತಾ ಸಾಗುತ್ತಿದೆ. ಇದೇ ವೇಳೆ ಪೆರಿಯಾದಲ್ಲಿ ಏರ್‌ಸ್ಟ್ರಿಪ್‌ ಯೋಜನೆಯನ್ನು ಸಾಕಾರಗೊಳಿಸಲು ಸಾಕಷ್ಟು ಪ್ರಯತ್ನಗಳು ಸಾಗುತ್ತಿವೆ. ಬಿಆರ್‌ಡಿಸಿ ವಿದೇಶಿ ಮತ್ತು ದೇಶೀಯ ಪ್ರವಾಸಿಗರಿಗಾಗಿ ನದಿ ಸಂಸ್ಕೃತಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು “ನೌಕಾಯಾನ’ ಪ್ರವಾಸೋದ್ಯಮಕ್ಕೆ ಒತ್ತು ನೀಡಿದೆ.

ಇದೇ ಸಂದರ್ಭದಲ್ಲಿ ಬಹಳಷ್ಟು ನಿರೀಕ್ಷೆಯನ್ನು ಹೊಂದಿದ್ದ ನೀಲೇಶ್ವರದ ಕೋಟ್ಟಪ್ಪುರದಲ್ಲಿ ಹೌಸ್‌ ಬೋಟ್‌ ಟರ್ಮಿನಲ್‌ ಕಾಮಗಾರಿಯನ್ನು ಶೀಘ್ರವೇ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ. ಹೌಸ್‌ ಬೋಟ್‌ ಟರ್ಮಿನಲ್‌ ಕಾಮಗಾರಿಗೆ 8 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಕಾಮಗಾರಿ ಪೂರ್ತಿಯಾಗುವುದರೊಂದಿಗೆ ಪ್ರವಾಸಿಗರಿಗೆ ಸುಲಭದಲ್ಲಿ ಹೌಸ್‌ ಬೋಟ್‌ ಟರ್ಮಿನಲ್‌ಗೆ ತಲುಪಲು ಸಾಧ್ಯವಾಗಲಿದೆ. 2018ರಲ್ಲಿ ಕೋಟ್ಟಪ್ಪುರ ದಲ್ಲಿ ಹೌಸ್‌ ಬೋಟ್‌ ಟರ್ಮಿನಲ್‌ ನಿರ್ಮಿಸಲು ಆಡಳಿತಾನುಮತಿ ಲಭಿಸಿತ್ತು. ಆದರೆ ಕೆಲವು ಕಾರಣಗಳಿಂದ ಕಾಮಗಾರಿ ವಿಳಂಬವಾಯಿತು. ಪ್ರಮುಖವಾಗಿ ರಸ್ತೆ ಸಮಸ್ಯೆ ತೊಡಕಾಗಿತ್ತು.

ಅಚ್ಚಾಂತುರ್ತಿ-ಕೋಟ್ಟಪ್ಪುರ ರಸ್ತೆ ಸೇತುವೆ ಲೋಕಾರ್ಪಣೆಗೊಳ್ಳುವುದರೊಂದಿಗೆ ಕೋಟ್ಟಪ್ಪುರ ಹೌಸ್‌ ಬೋಟ್‌ ಟರ್ಮಿನಲ್‌ಗೆ ಸಾರಿಗೆ ನಿಲುಗಡೆಗೊಂಡಿತು. ಈ ಕಾರಣದಿಂದ ಹೌಸ್‌ ಬೋಟ್‌ನಲ್ಲಿ ವಿಹಾರ ನಡೆಸಲು ಬರುತ್ತಿದ್ದ ಪ್ರವಾಸಿಗರ ಸಂಖ್ಯೆಯೂ ಕಡಿಮೆಯಾಯಿತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಶಾಸಕ ಎಂ. ರಾಜಗೋಪಾಲನ್‌, ನೀಲೇಶ್ವರ ನಗರಸಭೆ, ಮಲಬಾರ್‌ ಟೂರಿಸಂ ಪ್ರಮೋಶನ್‌ ಕೌನ್ಸಿಲ್‌ ಮಧ್ಯ ಪ್ರವೇಶಿಸುವ ಮೂಲಕ ಕೋಟ್ಟಪ್ಪುರ ಹೌಸ್‌ ಬೋಟ್‌ ಟರ್ಮಿನಲ್‌ಗೆ ರಸ್ತೆ ನಿರ್ಮಾಣಕ್ಕೆ ತೀರ್ಮಾನಿಸಲಾಯಿತು. ಆ ಬಳಿಕ ಸ್ಥಳೀಯರ ಬೃಹತ್‌ ಸಭೆ ಕರೆದು ಬೋಟ್‌ ಹೌಸ್‌ ಟರ್ಮಿನಲ್‌ಗೆ ಕೋಟ್ಟಪ್ಪುರದ ವೈಕುಂಠ ಕೇತ್ರದ ಸಮೀಪದಿಂದ ನದಿ ದಡದ ಮೂಲಕ ರಸ್ತೆ ನಿರ್ಮಿಸಲು ಒಡಂಬಡಿಕೆ ಮಾಡಿಕೊಳ್ಳಲಾಯಿತು.

ಟರ್ಮಿನಲ್‌ ಸಾಕಾರಗೊಂಡಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಕೋಟ್ಟಪ್ಪುರ ಹೌಸ್‌ ಬೋಟ್‌ ಟರ್ಮಿನಲ್‌ ಆರಂಭಗೊಂಡಲ್ಲಿ ವಿದೇಶಿ ಮತ್ತು ಸ್ವದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇದೆ. ಇದರಿಂದ ಆರ್ಥಿಕ ಪರಿಸ್ಥಿತಿಯೂ ಸುಧಾರಿಸಲಿದೆ. ದೋಣಿ ವಿಹಾರದ ಮೂಲಕ ಸಂತೋಷವನ್ನು ಹಂಚಿಕೊಳ್ಳಲು ಪ್ರವಾಸಿಗರು ಇತ್ತ ದೌಡಾಯಿಸಿದರೂ ಅಚ್ಚರಿಪಡಬೇಕಾಗಿಲ್ಲ.

ಬೇಕಲ ಕೋಟೆಯನ್ನು ವೀಕ್ಷಿಸಲು ಬರುವ ಪ್ರವಾಸಿಗರು ಕೋಟ್ಟಪ್ಪುರ ಹೌಸ್‌ ಬೋಟ್‌ನಲ್ಲಿ ವಿಹಾರ ನಡೆಸಲು ತೆರಳುವ ಸಾಧ್ಯತೆ ಅಧಿಕವಾಗಿದೆ. ಹಿನ್ನೀರಿನಲ್ಲಿ ಸಾಗುವ “ದೋಣಿ ಮನೆ’ಯಲ್ಲಿ ವಿಹಾರ ನಡೆಸುತ್ತಾ ಪ್ರಕೃತಿ ಸೌಂದರ್ಯವನ್ನು ಸವಿಯಲು ಉತ್ತಮ ಅವಕಾಶವೂ ಲಭಿಸುವುದು. ಈ ಮೂಲಕ ಪ್ರವಾಸೋದ್ಯಮವೂ ಅಭಿವೃದ್ಧಿ ಕಾಣಲಿದೆ. ಹಲವಾರು ಮಂದಿಗೆ ಉದ್ಯೋಗಾವಕಾಶ ಸಾಧ್ಯತೆಯಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಅಪಾಯ ಕೇಂದ್ರಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ

ಅಪಾಯ ಕೇಂದ್ರಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ

ಲಾಕ್‌ಡೌನ್‌ ಮುಂದುವರಿದರೆ ಪರೀಕ್ಷೆಗಳಿಗೆ ಕಂಟಕ

ಲಾಕ್‌ಡೌನ್‌ ಮುಂದುವರಿದರೆ ಪರೀಕ್ಷೆಗಳಿಗೆ ಕಂಟಕ

ಉಚಿತವಾಗಿ ಕೋವಿಡ್ 18 ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್‌ ಆದೇಶ

ಉಚಿತವಾಗಿ ಕೋವಿಡ್ 18 ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

ಕಾಸರಗೋಡು ಜಿಲ್ಲೆಯ 12 ಮಂದಿಯಲ್ಲಿ ಸೋಂಕು

ಕಾಸರಗೋಡು ಜಿಲ್ಲೆಯ 12 ಮಂದಿಯಲ್ಲಿ ಸೋಂಕು

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಇಂದು ಸಚಿವ ಸಂಪುಟ ಸಭೆ

ಇಂದು ಸಚಿವ ಸಂಪುಟ ಸಭೆ

ಲಾಕ್ ಡೌನ್ ಸ್ವಲ್ಪ ಸಡಿಲಿಸಿ ಇಬ್ಬರು ಹೆಂಡ್ತೀರ ಮನೆಗೆ ಹೋಗ್ಬೇಕು ನಂಗೆ!

ಲಾಕ್ ಡೌನ್ ಸ್ವಲ್ಪ ಸಡಿಲಿಸಿ ಇಬ್ಬರು ಹೆಂಡ್ತೀರ ಮನೆಗೆ ಹೋಗ್ಬೇಕು ನಂಗೆ!

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ