ಕೇರಳದಲ್ಲಿ ಇಬ್ಬರಿಗೆ ಕೊರೊನಾ ವೈರಸ್‌ ಸೋಂಕು


Team Udayavani, Feb 2, 2020, 6:39 PM IST

02KSDE16

ಜನರಲ್‌ ಆಸ್ಪತ್ರೆಯಲ್ಲಿ ಸಜ್ಜುಗೊಳಿಸಿದ ಐಸೋಲೇಶನ್‌ ವಾರ್ಡ್‌.

ಕಾಸರಗೋಡು: ಕೊರೊನಾ ವೈರಸ್‌ ಸೋಂಕು ವಿಶ್ವಾದ್ಯಂತ ಭೀತಿ ಸೃಷ್ಟಿಸಿರುವಂತೆಯೇ ಕೇರಳದಲ್ಲಿ ಇನ್ನೊಬ್ಬ ವಿದ್ಯಾರ್ಥಿನಿಗೆ ಈ ಸೋಂಕು ತಗಲಿರುವುದಾಗಿ ಖಾತರಿಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದೀಗ ಈ ಸೋಂಕು ತಗಲಿದವರ ಸಂಖ್ಯೆ ಎರಡಕ್ಕೇರಿದೆ.ಕೇರಳದಿಂದ ಇತ್ತೀಚೆಗೆ ಚೀನ ಸಂದರ್ಶಿಸಿದ ಆಲಪ್ಪುಳ ನಿವಾಸಿ ವೈದ್ಯಕೀಯ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಲಕ್ಷಣ ಪತ್ತೆಹಚ್ಚಲಾಗಿದೆ. ಅವರನ್ನು ಆಲಪ್ಪುಳ ವೈದ್ಯಕೀಯ ಕಾಲೇಜಿನ ಐಸೋಲೇಶನ್‌ ವಾರ್ಡ್‌ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚೈನಾದಿಂದ ಹಿಂದಿರುಗಿದ ವಿದ್ಯಾರ್ಥಿನಿಯ ರಕ್ತ ಮಾದರಿಯನ್ನು ಪುಣೆಯಲ್ಲಿರುವ ವೈರೋಲಜಿ ಇನ್‌ಸ್ಟಿಟ್ಯೂಟಿಗೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಇದರಲ್ಲಿ ಸೋಂಕು ತಗಲಿರುವುದು ಖಾತರಿಪಡಿಸಲಾಗಿದೆ. ಈ ಮೂಲಕ ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ತಗಲಿದವರ ಸಂಖ್ಯೆ ಎರಡಕ್ಕೇರಿದೆ.

ಚೀನದಿಂದ ಹಿಂದಿರುಗಿದವರ ಪೈಕಿ ಕೇರಳದಲ್ಲಿ ಇದೀಗ ಕಾಸರಗೋಡಿನ 70 ಮಂದಿ ಸಹಿತ ಒಟ್ಟು 1,793 ಮಂದಿಯಲ್ಲಿ ಆರೋಗ್ಯ ಇಲಾಖೆ ನಿಗಾ ಇರಿಸಿದೆ. ಈ ಪೈಕಿ 22 ಮಂದಿ ಆಸ್ಪತ್ರೆಯಲ್ಲಿ ದಾಖಲಿಸಿ ನಿಗಾ ವಹಿಸಲಾಗಿದೆ. ತೃಶೂರಿನಿಂದ ಐದು ಮಂದಿಯ ರಕ್ತ ಮಾದರಿಯನ್ನು ಲ್ಯಾಬ್‌ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ.

ಇದೇ ವೇಳೆ ಚೀನದಿಂದ ಮತ್ತೆ 323 ಮಂದಿ ಭಾರತೀಯರನ್ನು ವಿಶೇಷ ವಿಮಾನದಲ್ಲಿ ರವಿವಾರ ಬೆಳಗ್ಗೆ ದಿಲ್ಲಿಗೆ ಕರೆತರಲಾಗಿದೆ. ಅದರಲ್ಲಿ ವಿದ್ಯಾರ್ಥಿ ಗಳೂ ಒಳಗೊಂಡಿದ್ದಾರೆ. ಭಾರತಕ್ಕೆ ಪ್ರಯಾಣ ಬೆಳೆಸಿದ ವಿಮಾನದಲ್ಲಿ ದಿಲ್ಲಿಗೆ ಬರಬೇಕಾಗಿದ್ದ ಆರು ಮಂದಿ ಭಾರತೀಯರೂ ಜ್ವರ ಪೀಡಿತರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ವಿಮಾನ ಏರಲು ಚೀನಾ ಅಧಿಕಾರಿಗಳು ಅವಕಾಶ ನೀಡದೆ, ಅಲ್ಲಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಸರಗೋಡಿನಲ್ಲಿ ಭೀತಿ : ಕೊರೊನಾ ವೈರಸ್‌ ಬಗ್ಗೆ ಕಾಸರಗೋಡಿನಲ್ಲಿ ಭೀತಿಯನ್ನು ಹುಟ್ಟಿಸಿದೆ. ಚೀನಾದಿಂದ ಬಂದ ಇಬ್ಬರನ್ನು ಕಾಂಞಂಗಾಡ್‌ನ‌ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕೊರೊನಾ ವೈರಸ್‌ ಬಾಧಿತರಿಗಾಗಿ ಸಿದ್ಧಪಡಿಸಿದ ಐಸೋಲೇಶನ್‌ ವಾರ್ಡ್‌ನಲ್ಲಿ ಇವರನ್ನು ದಾಖಲಿಸಲಾಗಿದ್ದು, ಇವರ ಕುರಿತಾದ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ. ಈ ಪೈಕಿ ಒಬ್ಬ ವೈದ್ಯಕೀಯ ವಿದ್ಯಾರ್ಥಿ ಯಾಗಿದ್ದಾನೆ. ಮೂರನೇ ವ್ಯಕ್ತಿ ಚಿಕಿತ್ಸೆಗಾಗಿ ಬಂದಿರುವುದಾಗಿ ಹೇಳಲಾಗಿದೆ. ವೈರಸ್‌ ಬಾಧಿತರ ಮೇಲೆ ನಿಗಾ ಇರಿಸಲು ಜಿಲ್ಲಾಸ್ಪತ್ರೆ ಹಾಗೂ ಕಾಸರಗೋಡಿನ ಜನರಲ್‌ ಆಸ್ಪತ್ರೆಯಲ್ಲಿ ಐಸೋಲೇಶನ್‌ ವಾರ್ಡ್‌ ಗಳನ್ನು ಸಜ್ಜುಗೊಳಿಸಲಾಗಿದೆ. ಆಸ್ಪತ್ರೆಯ ಇತರ ರೋಗಿಗಳೊಂದಿಗೆ ಸಂಪರ್ಕ ಸಾಧಿಸದಂತೆ ಹಾಗೂ ಚೀನದಿಂದ ಬರುವವರ ಪ್ರತ್ಯೇಕ ಪತಾಸಣೆಗಾಗಿ ಟ್ರಯಾಜಿನ್‌ ವ್ಯವಸ್ಥೆಯಿಂದ ಕೂಡಿದ ಪ್ರತ್ಯೇಕ ಕೊಠಡಿಯನ್ನು ನಿರ್ಮಿಸಲಾಗಿದೆ.

ಕೊರೊನಾ ವೈರಸ್‌ ಬಾಧಿಸಿದಲ್ಲಿ ಎಲ್ಲ ರೀತಿಯಲ್ಲೂ ಎದುರಿಸಲು ಜಿಲ್ಲಾ ಆರೋಗ್ಯ ಇಲಾಖೆ ಸಜ್ಜಾಗಿರುವುದಾಗಿ ಜಿಲ್ಲಾ ವೈದ್ಯಾಧಿಕಾರಿ ಎ.ಪಿ. ದಿನೇಶ್‌ ಕುಮಾರ್‌ ತಿಳಿಸಿದ್ದಾರೆ. ಇನ್ನು ವೈರಸ್‌ ಬಾಧಿತರನ್ನು ತಪಾಸಣೆ ಮಾಡಲು ಪ್ರತ್ಯೇಕ ಸುರಕ್ಷಾ ಧಿರಿಸು, ಕೈಕವಚ, ಮಾಸ್ಕ್ ಪೂರೈಕೆಯಾಗಿದ್ದು, ಇವುಗಳನ್ನು ಬಳಸುವ ವಿಧಾನದ ಬಗ್ಗೆ ಆಸ್ಪತ್ರೆ ಸಿಬಂದಿಗೆ ತರಬೇತಿ ನೀಡಲಾಗುತ್ತಿದೆ.

ವೈರಸ್‌ ಬಾಧಿತರನ್ನು ಅಥವಾ ಚೀನದಿಂದ ಬಂದವರನ್ನು ಹೆಚ್ಚಿನ ನಿಗಾ ವಹಿಸಿ ತಪಾಸಣೆ ನಡೆಸುವ ಬಗ್ಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ತರಬೇತಿಯನ್ನು ಆಯೋಜಿಸಲಾಗಿದೆ.

ಜಿಲ್ಲೆಯಲ್ಲಿ ರೋಗ ಲಕ್ಷಣಗಳಿಲ್ಲ
ಕೊರೊನಾ ವೈರಸ್‌ಗೆ ಸಂಬಂಧಿಸಿ ಜಿಲ್ಲೆಯಲ್ಲಿ ನಿಗಾಯಿರಿಸಿದ್ದ ವ್ಯಕ್ತಿಗಳಿಗೆ ರೋಗ ಲಕ್ಷಣಗಳಿಲ್ಲವೆಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ. ಈಗಾಗಲೇ 70ರಷ್ಟು ಮಂದಿಯನ್ನು ಪರೀಕ್ಷಿಸಲಾಗಿದೆ. ಇನ್ನಷ್ಟು ಮಂದಿ ರೋಗ ತಪಾಸಣೆಗಾಗಿ ಆರೋಗ್ಯ ಕೇಂದ್ರಗಳಿಗೆ ತಲುಪಬೇಕೆಂದು ವೈದ್ಯಾಧಿಕಾರಿ ಸೂಚಿಸಿದ್ದಾರೆ. ಚೀನದ ವುಹಾನ್‌ನಿಂದ ಜ. 15ರ ಬಳಿಕ ಜಿಲ್ಲೆಗೆ ತಲುಪಿದವರು ಕಡ್ಡಾಯವಾಗಿ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ಜಿಲ್ಲಾ ಆರೋಗ್ಯ ಇಲಾಖೆಯ ಕಂಟ್ರೋಲ್‌ ಸೆಲ್‌ 9946000493 ಎಂಬ ನಂಬ್ರದಲ್ಲಿ ಸಂಪರ್ಕಿಸಲು ತಿಳಿಸಲಾಗಿದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.