ಕಾಸರಗೋಡಿನ ವ್ಯಕ್ತಿಯಲ್ಲಿ ಕೋವಿಡ್-19 ಪತ್ತೆ ಹಿನ್ನೆಲೆ

51 ಸಹಪ್ರಯಾಣಿಕರ ವಿಳಾಸ ಪತ್ತೆ; 14 ದಿನ ನಿಗಾ

Team Udayavani, Mar 19, 2020, 6:52 AM IST

ಕಾಸರಗೋಡಿನ ವ್ಯಕ್ತಿಯಲ್ಲಿ ಕೋವಿಡ್-19 ಪತ್ತೆ ಹಿನ್ನೆಲೆ

ಮಂಗಳೂರು: ದುಬಾೖಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಾಸರಗೋಡಿಗೆ ತೆರಳಿದ ವ್ಯಕ್ತಿಯಲ್ಲಿ ಕೋವಿಡ್-19 ಪತ್ತೆಯಾದ ಹಿನ್ನೆಲೆಯಲ್ಲಿ ಆತನೊಂದಿಗೆ ಸಹ ಪ್ರಯಾಣಿಕರಾಗಿದ್ದ 51 ಮಂದಿ ದಕ್ಷಿಣ ಕನ್ನಡಿಗರ ವಿಳಾಸ ಪತ್ತೆಹಚ್ಚಲಾಗಿದ್ದು, ಎಲ್ಲರ ಮನೆಗೆ ತೆರಳಿ 14 ದಿನಗಳ ನಿಗಾದಲ್ಲಿರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

ಮಾ. 14ರಂದು ದುಬಾೖಯಿಂದ ಬಂದಿಳಿದ ಕಾಸರಗೋಡು ಮೂಲದ ವ್ಯಕ್ತಿಯಲ್ಲಿ ಕಾಸರಗೋಡು ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಕೋವಿಡ್-19 ವೈರಸ್‌ ಪತ್ತೆಯಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಆತನೊಂದಿಗೆ ವಿಮಾನದಲ್ಲಿ ಸಹ ಪ್ರಯಾಣಿಕರಾಗಿ ಬಂದವರನ್ನು ಪತ್ತೆಹಚ್ಚಿ ನಿಗಾದಲ್ಲಿಡುವ ಕಾರ್ಯವನ್ನು ಜಿಲ್ಲಾ ಆರೋಗ್ಯ ಇಲಾಖೆಗಳು ಮಾಡಿದ್ದವು.

632 ಮಂದಿಯ ತಪಾಸಣೆ
ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಒಟ್ಟು 632 ಮಂದಿಯನ್ನು ಬುಧವಾರ ತಪಾಸಣೆಗೊಳಪಡಿಸಲಾಗಿದೆ. ಈವರೆಗೆ 689 ಮಂದಿ ಮನೆಯಲ್ಲೇ ನಿಗಾದಲ್ಲಿದ್ದಾರೆ. 8 ಮಂದಿ ನಿಗಾ ಅವಧಿಯನ್ನು ಪೂರ್ಣಗೊಳಿಸಿ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಮೂರು ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, 14 ಮಂದಿಯ ವರದಿ ಈಗಾಗಲೇ ಆರೋಗ್ಯ ಇಲಾಖೆ ಕೈ ಸೇರಿದ್ದು, ಎಲ್ಲವೂ ನೆಗೆಟಿವ್‌ ಆಗಿವೆ.

ಆಸ್ಪತ್ರೆಗಳಲ್ಲಿ ನಿಗಾ ಘಟಕ: ಭಯ ಬೇಡ
ಕೊರೊನಾ ಸಂಬಂಧಿ ಲಕ್ಷಣಗಳು ಪತ್ತೆಯಾದಲ್ಲಿ ತಪಾಸಣೆ-ಚಿಕಿತ್ಸೆ ನೀಡುವ ಸಲುವಾಗಿ ವೆನ್ಲಾಕ್ ಆಸ್ಪತ್ರೆ ಮಾತ್ರವಲ್ಲದೆ ನಗರದ ಇತರ ಖಾಸಗಿ ಆಸ್ಪತ್ರೆಗಳಲ್ಲಿಯೂ ನಿಗಾ ವಾರ್ಡ್‌ಗಳನ್ನು ಮೀಸಲಿಡಲಾಗಿದೆ. ಈ ವಾರ್ಡ್‌ಗೆ ಯಾರಿಗೂ ಭೇಟಿಗೆ ಅವಕಾಶ ನೀಡುವುದಿಲ್ಲ. ಆದರೆ ವಾರ್ಡ್‌ ಕಡೆ ತೆರಳಲು ಅವಕಾಶ ನೀಡದಿರುವುದನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡು ಕೊರೊನಾ ಪೀಡಿತರು ಆಸ್ಪತ್ರೆಯಲ್ಲಿರುವುದರಿಂದ ವಾರ್ಡ್‌ ಕಡೆ ಹೋಗಲು ಅವಕಾಶ ನೀಡುತ್ತಿಲ್ಲ ಎಂದು ವದಂತಿಗಳು ಹಬ್ಬುತ್ತಿವೆ. ಈ ಬಗ್ಗೆ ಜನರು ಹೆದರಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

2,12,639 ಮಂದಿಗೆ ಜಾಗೃತಿ
ಆಶಾ ಕಾರ್ಯಕರ್ತೆಯರು ನಿರಂತರ ಮನೆ ಭೇಟಿ ಮಾಡುತ್ತಿದ್ದು, ಈವರೆಗೆ 55,241 ಮನೆ ಭೇಟಿ ಮಾಡಿ 2,12,639 ಮಂದಿಗೆ ಕೊರೊನಾ ವೈರಸ್‌ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣ ಹೊರತುಪಡಿಸಿ ಇತರ ಮಾರ್ಗಗಳಿಂದ ವಿದೇಶದಿಂದ ಬಂದವರನ್ನೂ ಮನೆಯಲ್ಲೇ ವಾಸ್ತವ್ಯ ಇರುವಂತೆ ಸೂಚಿಸಲಾಗಿದೆ. ತಲಪಾಡಿ, ಮಂಗಳೂರು ಜಂಕ್ಷನ್‌, ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಗಳಲ್ಲಿ ಚೆಕ್‌ಪೋಸ್ಟ್‌ ತೆರೆಯಲಾಗಿದ್ದು, ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗುತ್ತಿದೆ.

ಎನ್‌ಆರ್‌ಐಗಳು ಮನೆಯಲ್ಲಿ ಇರಿ!
ವಿದೇಶದಿಂದ ಬಂದವರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡುವಾಗ ಕೋವಿಡ್-19 ಸೋಂಕಿನ ಪತ್ತೆಯಾಗದೆ ಇದ್ದರೂ 14 ದಿನಗಳ ಬಳಿಕ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಅಂಥವರು 20 ದಿನಗಳ ಕಾಲ ಮನೆಯೊಳಗೇ ಇರುವುದು ಉತ್ತಮ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಔಷಧ ಸಿಂಪಡಣೆ ವದಂತಿ
ಮಂಗಳೂರು: ಕೋವಿಡ್-19 ವೈರಸ್‌ ಹರಡದಂತೆ ಬುಧವಾರ ರಾತ್ರಿ ಔಷಧ ಸಿಂಪಡಣೆ ಮಾಡುವುದರಿಂದ ಮಂಗಳೂರಿಗರು ಮನೆಯಿಂದ ಹೊರಬರಬಾರದು ಎಂಬ ವದಂತಿಯೊಂದು ಸಾಮಾಜಿಕ ತಾಣಗಳಲ್ಲಿ ಹರಿದಾಡಿದ ಪ್ರಸಂಗ ಬುಧವಾರ ನಡೆಯಿತು.

ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ಈ ಔಷಧ ಸಿಂಪಡಣೆ ನಡೆಯುತ್ತದೆ. ಈ ಹೊತ್ತಿನಲ್ಲಿ ಯಾರೂ ಮನೆಯಿಂದ ಹೊರ ಬರಬಾರದು. ಈ ವಿಚಾರವನ್ನು ಆದಷ್ಟು ಶೇರ್‌ ಮಾಡಿ ಎಲ್ಲರಿಗೂ ತಲುಪಿಸಿ ಎಂದು ಬರೆದು ಕೆಲವರು ಸಾಮಾಜಿಕ ತಾಣಗಳಲ್ಲಿ ಹರಿಯ ಬಿಟ್ಟಿದ್ದರು. ಇದನ್ನು ನಂಬಿದ ಬಹುತೇಕ ಮಂದಿ ವಿಷಯವನ್ನು ಶೇರ್‌ ಮಾಡಿದ್ದಲ್ಲದೆ, ಈ ಬಗ್ಗೆ ಅವರಿವರಲ್ಲಿ ಮಾಹಿತಿ ಪಡೆದುಕೊಳ್ಳುವ ಯತ್ನ ನಡೆಸಿದ್ದಾರೆ. ಇದು ಕೇವಲ ವದಂತಿಯಷ್ಟೇ ಎಂದು ಗೊತ್ತಾದ ಬಳಿಕವೂ ಶೇರ್‌ ಆಗುವುದು ನಿಂತಿಲ್ಲ.

ವದಂತಿ ವಿರುದ್ಧ ಕ್ರಮ
“ಜಿಲ್ಲೆಯಲ್ಲಿ ಇಂತಹ ಯಾವುದೇ ಕ್ರಮಕ್ಕೆ ನಿರ್ಧರಿಸಿಲ್ಲ; ಕೋವಿಡ್‌-19 ಬಗ್ಗೆ ಯಾವುದೇ ವದಂತಿ ಹರಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡುವ ತಪ್ಪು ಮಾಹಿತಿ ಪ್ರಕಟಿಸಿದ ಕೆಲವು ವೆಬ್‌ಸೈಟ್‌ಗಳ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹೂ ವ್ಯಾಪಾರ ಕುಸಿತ
ಧಾರ್ಮಿಕ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಸರಕಾರ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಹೂವಿನ ವ್ಯಾಪಾರ ಕುಸಿದಿದ್ದು, ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.