ಬರಗಾಲ ಆತಂಕ:  ಜಿಲ್ಲಾ  ಮಟ್ಟದ ಮುನ್ನೆಚ್ಚರಿಕೆ ಸಭೆ


Team Udayavani, Feb 28, 2019, 1:00 AM IST

baragala.jpg

ಕಾಸರಗೋಡು: ಬರಗಾಲ ಎದುರಿಸುವ ನಿಟ್ಟಿನಲ್ಲಿ ಹಿರಿಯ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯ ಕಂದಾಯ ಸಚಿವ ಇ. ಚಂದ್ರಶೇಖರನ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಕೆಲವೆಡೆ ನದಿ, ತೊರೆ ಇತ್ಯಾದಿಗಳಲ್ಲಿ ಅಕ್ರಮವಾಗಿ ಪೈಪ್‌ ಅಳವಡಿಸಿ ನೀರು ಅಕ್ರಮ ಸಾಗಣೆ ನಡೆಸಲಾಗುತ್ತಿರುವ ಬಗ್ಗೆ ದೂರುಗಳು ಲಭಿಸಿದ್ದು, ಇದರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು. ಗ್ರಾಮ ಪಂಚಾಯತ್‌ಗಳು ಈ ಹೊಣೆ ಹೊರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಹೇಳಿದರು.

ಕೆಲವೆಡೆ ಅಡಿಕೆ ತೋಟಗಳಿಗೆ ತಾಸುಗಟ್ಟಲೆ ನೀರು ಸಿಂಪಡಿಸುತ್ತಿರುವ ಪರಿಣಾಮ ಜಿಲ್ಲೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ ಎಂದು ಸಭೆಯಲ್ಲಿ ಭಾಗವಹಿಸಿದ ಕೆಲವು ಗ್ರಾಮ ಪಂಚಾಯತ್‌ ಅಧ್ಯಕ್ಷರು ಆರೋಪಿಸಿದರು. ವೈಜ್ಞಾನಿಕ ರೀತಿಯಲ್ಲಿ ಬಳಸಿದರೆ ಸಸಿಗಳಿಗೆ ಕೊಂಚ ನೀರು ಸಾಲುತ್ತದಾದರೂ ಈ ರೀತಿ ಜಲ ದುರುಪಯೋಗ ನಡೆಸುವುದು ಸರಿಯಲ್ಲ. ಇಂಥವರ ವಿರುದ್ಧ  ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಉತ್ತರಿಸಿ, ಈ ಸಂಬಂಧ ಹೊಣೆಯನ್ನು ಕೃಷಿ ಇಲಾಖೆ, ನೀರಾವರಿ ಇಲಾಖೆ ಅಧಿಕಾರಿಗಳಿಗೆ ನೀಡಿದರು.

ಬರಪೀಡಿತ ಪ್ರದೇಶವೆಂದು ಸರಕಾರ ಆದೇಶ ನೀಡಿದರೆ ಮಾತ್ರ ಎಸ್‌.ಡಿ.ಆರ್‌.ಎಫ್‌. ನಿಧಿ ಬಳಕೆ ಸಾಧ್ಯ. ಕಳೆದ ವರ್ಷ ನಡೆಸಿದ ರೀತಿ ಜಿ.ಪಿ.ಎಸ್‌. ಅಳವಡಿಸಿ ವಾಹನಗಳಲ್ಲಿ ಕುಡಿಯುವ ನೀರು ವಿತರಿಸುವಂತೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಆದೇಶ ನೀಡಿದರು. ಈ ಸಂಬಂಧ ಕಿ.ಮೀ. ಬಾಡಿಗೆ ರೂಪದಲ್ಲಿ ಕರಾರು ವಾಹನಕ್ಕಾಗಿ ಕೊಟೇಷನ್‌ ಕೋರಲೂ ತಿಳಿಸಲಾಗಿದೆ. ರಸ್ತೆ ನಿರ್ಮಾಣ ವೇಳೆ ಪೈಪು ಒಡೆದು ನೀರು ಪೋಲಾಗು ತ್ತಿರುವ ವಿಚಾರದ ಬಗ್ಗೆ ಜಲ ಪ್ರಾಧಿಕಾರ ಸಿಬಂದಿ ಸಭೆಯಲ್ಲಿ ಪ್ರಸ್ತಾವಿಸಿದರು. ಸ್ಥಳೀಯಾಡಳಿತ ಸಂಸ್ಥೆಗಳು ಕಾಮಗಾರಿ ವೇಳೆ ಈ ಕುರಿತು ಜಾಗ್ರತೆ ಪಾಲಿಸುವಂತೆ ಮತ್ತು ಜಲಾಶಯಗಳ ಪುನಶ್ಚೇತನ ನಡೆಸಿ ಬಳಸುವಂತೆ ಆದೇಶ ನೀಡಲಾಗಿದೆ.

ಸಭೆಯಲ್ಲಿ ಸಂಸದ ಪಿ. ಕರುಣಾಕರನ್‌, ಶಾಸಕ ರಾದ ಎನ್‌.ಎ. ನೆಲ್ಲಿಕುನ್ನು, ಕೆ. ಕುಂಞಿರಾಮನ್‌, ಉಪ ಜಿಲ್ಲಾಧಿಕಾರಿ ಅರುಣ್‌ ಕೆ. ವಿಜಯನ್‌, ಹೆಚ್ಚುವರಿ ದಂಡನಾಧಿಕಾರಿ ಎನ್‌. ದೇವಿದಾಸ್‌, ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷರು, ಜನಪ್ರತಿನಿಧಿ ಗಳು, ಜಿಲ್ಲಾ ಮಟ್ಟದ ಸಿಬಂದಿ, ಆಡಳಿತ ನಿರ್ವಹಣೆ ಸಿಬಂದಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

Major lapse in UP CM Yogi Adityanth

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಭಾರೀ ಲೋಪ

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

Untitled-1

ಕಾಂಗ್ರೆಸ್ ಮಾಡಿದ ಅಭಿವೃದ್ಧಿಯನ್ನು ಬಿಜೆಪಿ ಮಾರಾಟ ಮಾಡುತ್ತಿದೆ : ಸಂಸದ ಡಿ.ಕೆ.ಸುರೇಶ್ ಆರೋಪ

ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ

ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ

MUST WATCH

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

ಹೊಸ ಸೇರ್ಪಡೆ

Warrior M Jayaram Nayak honored with Presidential Medal of Honor

ಯೋಧರಿಗೆ ಗೌರವ ಸಲ್ಲಿಕೆ ಎಲ್ಲರ ಕರ್ತವ್ಯ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

20-chennamma

ಚನ್ನಮ್ಮ ಪುತ್ಥಳಿ ಸ್ಥಾಪನೆಗೆ ಸರ್ವ ಪ್ರಯತ್ನ: ಸಿದ್ರಾಮೇಶ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.