Fraud: ಮಾಜಿ ಯೋಧನಿಗೆ ಮದುವೆ ಆಸೆ ತೋರಿಸಿ ಬ್ಲ್ಯಾಕ್‌ಮೇಲ್; ಮೂವರ ಬಂಧನ


Team Udayavani, Dec 10, 2023, 2:04 PM IST

Fraud: ಮಾಜಿ ಯೋಧನಿಗೆ ಮದುವೆ ಆಸೆ ತೋರಿಸಿ ಬ್ಲ್ಯಾಕ್‌ಮೇಲ್; ಮೂವರ ಬಂಧನ

ಮಡಿಕೇರಿ: ಅವಿವಾಹಿತ 64 ವರ್ಷದ ಮಾಜಿ ಯೋಧರೊಬ್ಬರಿಗೆ ಮದುವೆಯ ಆಸೆ ತೋರಿಸಿ, ಬೆದರಿಕೆಯೊಡ್ಡಿ ನಗದು ಮತ್ತು ಚೆಕ್ ನ್ನು ಅಪಹರಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.

ಭಾರತೀಯ ಸೇನೆಯ ನಿವೃತ್ತ ಯೋಧ, ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ನಿವಾಸಿ ಜಾನ್ ಮ್ಯಾಥ್ಯು(64) ಎಂಬುವವರೇ ವಂಚನೆಗೊಳಗಾದ ವ್ಯಕ್ತಿ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ನಿವಾಸಿ ಅಬ್ದುಲ್ ಬಷೀರ್ (29) ಕಡಬದ ನಿವಾಸಿ ಸಾದೀಕ್ (30) ನನ್ನು ಕೊಡಗು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಆರೋಪಿ ಫೈಝಲ್ ಈಗಾಗಲೇ ಮೈಸೂರು ನಗರದಲ್ಲಿ ನಡೆದ ಅಪರಾಧ ಪ್ರಕರಣವೊಂದರ ಬಂಧಿಯಾಗಿದ್ದಾನೆ. ತಲೆ ಮರೆಸಿಕೊಂಡಿರುವ ಆರೋಪಿ ಅಮೀರ್ ಎಂಬಾತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ:ಇನ್ಸ್ಟಾಗ್ರಾಮ್‌ನಲ್ಲಿ ‘RIP’ ಫೋಟೋ ಪೋಸ್ಟ್‌ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ 

ಬಂಧಿತರಿಂದ ಕೃತ್ಯಕ್ಕೆ ಬಳಸಿದ 3 ಮೊಬೈಲ್‌ಗಳು, ರೂ.1,05,000 ನಗದು ಮತ್ತು ರೂ.2,10,000 ಮೌಲ್ಯದ ಚೆಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಮದುವೆ ನಾಟಕ :

ಅವಿವಾಹಿತರಾಗಿದ್ದ ನಿವೃತ್ತ ಯೋಧ ಜಾನ್ ಮ್ಯಾಥ್ಯು ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಫೈಝಲ್ ಮದುವೆಯಾಗುವಂತೆ ಹುರಿದುಂಬಿಸಿದ್ದಾನೆ. ಮದುವೆಯಾದರೆ ಸಂತೋಷದಿಂದ ಜೀವನ ಸಾಗಿಸಬಹುದು ಎಂದು ಪುಸಲಾಯಿಸಿದ್ದಾನೆ. ನನಗೆ ಪರಿಚಯವಿರುವ ಹುಡುಗಿಯೊಬ್ಬಳಿದ್ದಾಳೆ. ಮದುವೆ ಮಾಡಿಸುತ್ತೇನೆ ಎಂದು ನಂಬಿಸಿ 2023 ನ.26 ರಂದು ಜಾನ್ ಮ್ಯಾಥ್ಯು ಅವರನ್ನು ಮಡಿಕೇರಿ ನಗರದ ಹೋಂಸ್ಟೇಯೊಂದಕ್ಕೆ ಕರೆಸಿದ್ದಾನೆ. ಅಲ್ಲಿ ಫೈಝಲ್, ಅಬ್ದುಲ್ ಬಷೀರ್, ಸಾದೀಕ್ ಹಾಗೂ ಅಮೀರ್ ಎಂಬುವವರುಗಳು ಸೇರಿ ಮಹಿಳೆಯೊಬ್ಬರನ್ನು ತೋರಿಸಿ ಇವರನ್ನು ವಿವಾಹವಾಗುವಂತೆ ನಂಬಿಸಿದ್ದಾರೆ. ಅಲ್ಲದೆ ಹೋಂಸ್ಟೇಯಲ್ಲೇ ನಾಲ್ವರು ಆರೋಪಿಗಳು ಜಾನ್ ಮ್ಯಾಥ್ಯು ಅವರಿಗೆ ಮದುವೆ ಮಾಡಿಸಿದ್ದಾರೆ. ಅಲ್ಲದೆ ಅಲ್ಲೇ ತಂಗಲು ಅವಕಾಶ ಮಾಡಿಕೊಟ್ಟಿದ್ದಾರೆ.

ಅದೇ ದಿನ ಸಂಜೆ ಮತ್ತೆ ಪ್ರತ್ಯಕ್ಷರಾದ ನಾಲ್ವರು ಆರೋಪಿಗಳು ಮದುವೆಯ ಫೋಟೋಗಳನ್ನು ತೋರಿಸಿ ಇದನ್ನು ನಿಮ್ಮ ಕುಟುಂಬದವರಿಗೆ ಹಸ್ತಾಂತರಿಸುವುದಾಗಿ ಜಾನ್ ಮ್ಯಾಥ್ಯು ಅವರಿಗೆ ಬ್ಲ್ಯಾಕ್‌ಮೇಲ್ ಮಾಡಿ 10 ಲಕ್ಷ ರೂ. ನಗದು ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಜಾನ್ ಮ್ಯಾಥ್ಯು ಅವರು ಆರೋಪಿಗಳಿಗೆ 8 ಲಕ್ಷ ರೂ. ನಗದು ಹಾಗೂ ಉಳಿದ ಮೊತ್ತಕ್ಕೆ ಚೆಕ್ ನೀಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ವಂಚನೆಗೊಳಗಾದ ಜಾನ್ ಮ್ಯಾಥ್ಯು ಅವರು ನೀಡಿದ ದೂರಿನ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಸಹಿತ ನಗದು ಮತ್ತು ಚೆಕ್ ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಜಗದೀಶ್ ಎಂ, ಸಿಪಿಐ ಅನೂಪ್ ಮಾದಪ್ಪ, ಡಿಸಿಆರ್‌ಬಿ ಪಿಐ ಐ.ಪಿ.ಮೇದಪ್ಪ, ಮಡಿಕೇರಿ ನಗರ ಪಿಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿ ಅಮೀರ್ ನ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.