ಮೀನುಗಾರಿಕೆ ಮತ್ತೆ ಸಕ್ರಿಯ: ಬೆಸ್ತರಲ್ಲಿ  ಹೊಸ ಹುರುಪು

Team Udayavani, Aug 3, 2018, 6:15 AM IST

02ksde12.jpg

ಕಾಸರಗೋಡು: 52 ದಿನಗಳ ಟ್ರಾಲಿಂಗ್‌ ನಿಷೇಧದ ಬಳಿಕ ಆ. 1ರಿಂದ ಮತ್ತೆ ಆಳ ಸಮುದ್ರ ಮೀನುಗಾರಿಕೆ ಆರಂಭಗೊಂಡಿದ್ದು, ಬೆಸ್ತರಲ್ಲಿ ಹೊಸ ಚೈತನ್ಯ ಮೂಡಿದೆ. ಕಾಸರಗೋಡು ಜಿಲ್ಲೆಯ ಮಡಕರ ಮೀನುಗಾರಿಕಾ ಬಂದರು ಮತ್ತೆ ಸಕ್ರಿಯಗೊಂಡಿದೆ. ಅದೇ ರೀತಿಯಲ್ಲಿ ಕಾಸರಗೋಡು ಕಡಪ್ಪುರದಲ್ಲೂ ಮೀನುಗಾರಿಕೆಗೆ ತೆರಳಿದ ದೋಣಿಗಳು ಗುರುವಾರ ಬೆಳಗ್ಗೆ ದಡ ಸೇರಿದ್ದು, ಮೀನು ಮಾರಾಟಗಾರರು ಮೀನು ಖರೀದಿಸಲು ದೋಣಿಗಳಿಗೆ ಮುತ್ತಿಗೆ ಹಾಕುತ್ತಿರುವ ದೃಶ್ಯ ಕಂಡು ಬಂತು.

ಜು. 31ರ ಮಧ್ಯರಾತ್ರಿ ಟ್ರಾಲಿಂಗ್‌ ನಿಷೇಧ ಕಾಲಾವಧಿ ಕೊನೆಗೊಂಡಿದ್ದು, ಬೆಸ್ತರಲ್ಲಿ ಹಬ್ಬದ ವಾತಾವರಣ ಕಂಡು ಬಂದಿದೆ. ಕಳೆದ 52 ದಿನಗಳಿಂದ ಸಾಂಪ್ರದಾಯಿಕ ದೋಣಿಗಳಲ್ಲಿ ಬಲೆ ಬೀಸಿ ಸಮುದ್ರ ದಡದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೆಸ್ತರು ಇದೀಗ ಆಳ ಸಮುದ್ರಕ್ಕೆ ತೆರಳುತ್ತಿದ್ದಾರೆ. ಹೀಗಿರುವಂತೆ ಕೇರಳದ ದಕ್ಷಿಣದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮೀನು ಗಾರಿಕೆಗೆ ಆಳ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರು ವುದರಿಂದ ಸಹಜವಾಗಿಯೇ ಬೆಸ್ತರಲ್ಲಿ ಆತಂಕ ಮನೆ ಮಾಡಿದೆ.

ಚೆರ್ವತ್ತೂರಿನ ಮಡಕರ ಮೀನುಗಾರಿಕಾ ಬಂದರಿನಲ್ಲಿ ಲಂಗರು ಹಾಕಿ ನಿಂತಿದ್ದ ಎಲ್ಲ ದೋಣಿಗಳು ಮೀನುಗಾರಿಕೆಗೆ ತೆರಳಲು ಉತ್ಸುಕತೆಯಲ್ಲಿವೆ. ಈಗಾಗಲೇ ಹಲವು ದೋಣಿಗಳು ಸಮುದ್ರಕ್ಕಿಳಿದಿವೆ. ಕಾಸರಗೋಡು ಜಿಲ್ಲೆಯ ಮೀನುಗಾರರ ಜತೆಯಲ್ಲಿ ಇತರ ರಾಜ್ಯಗಳ ಕಾರ್ಮಿಕರು ಮೀನುಗಾರಿಕೆಗೆ ಸಾಗುತ್ತಿದ್ದಾರೆ.

ರಾಸಾಯನಿಕ ಆರೋಪ ಕಳೆದು
ಮೀನು ಮಾರುಕಟ್ಟೆ ಸಕ್ರಿಯ

ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಯಾಂತ್ರೀಕೃತ ದೋಣಿಗಳು ಸಮುದ್ರಕ್ಕಿಳಿ ಯುವ ಮೂಲಕ ಮೀನು ಮಾರುಕಟ್ಟೆಯೂ ಸಕ್ರಿಯವಾಗಲಿದೆ. ಇದೇ ವೇಳೆ ಅನ್ಯ ರಾಜ್ಯಗಳಿಂದ ಬರುವ ಮೀನುಗಳಿಗೆ ವಿಷಾಂಶವುಳ್ಳ ರಾಸಾಯನಿಕ ವಸ್ತುಗಳನ್ನು ಹಾಕುತ್ತಿರುವ   ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಮೀನು ಮಾರುಕಟ್ಟೆ ಹಿನ್ನಡೆ ಅನುಭವಿಸಿತ್ತು. ಆದರೆ ಇದೀಗ ರಾಜ್ಯದಲ್ಲಿ ಮೀನುಗಾರಿಕೆ    ಆರಂಭಗೊಂಡಿರುವುದರಿಂದ ಕೇರಳದ  ಮೀನುಗಾರರು ಬಲೆ ಬೀಸಿ ಪಡೆದ ಮೀನುಗಳು ಮಾರುಕಟ್ಟೆಗೆ ಬರಲಿವೆ. ಇದರಿಂದಾಗಿ ಮತ್ತೆ ಮೀನು ಮಾರುಕಟ್ಟೆ ಹಿಂದಿನಂತೆ ಹಬ್ಬದ ವಾತಾವರಣಕ್ಕೆ ಮರಳಲಿದೆ.ಕೆಲವು ದಿನಗಳ ವರೆಗೆ ಮೀನಿನ ದರ ದುಬಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಮೀನು ಮಾರಾಟಗಾರರು ಹೇಳುತ್ತಿದ್ದಾರೆ.

ಮೊದಲ ದಿನ ಭಾರೀ ಮೀನು
ಆ. 1ರಂದು ಮೀನುಗಾರಿಕೆಗೆ ತೆರಳಿದ್ದ ಬೋಟುಗಳು ಭಾರೀ ಮೀನುಗಳ ಸಹಿತ ದಡ ಸೇರಿವೆ. ಬೋಟ್‌ಗಳಲ್ಲಿ   ಬಂದ ಮೀನು ಖರೀದಿಸಲು ನೂರಾರು  ಮಂದಿ ಮಹಿಳೆಯರು ಸಮುದ್ರ ಕಿನಾರೆಗೆ  ತಲುಪಿದ್ದು, ಮೀನು ಖರೀದಿಯಲ್ಲಿ ಸಕ್ರಿಯವಾಗಿದ್ದಾರೆ. ಮೀನು ಖರೀದಿಸಿ ಮಾರುಕಟ್ಟೆಯಲ್ಲಿ  ಮೀನು ಮಾರಾಟ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ. ಸಣ್ಣ ಗಾತ್ರದ ಬೋಟ್‌ಗಳು ಮಾತ್ರವೇ ಮೀನುಗಾರಿಕೆಯಲ್ಲಿ ತೊಡಗಿವೆ. ದೊಡ್ಡ ಗಾತ್ರದ ಬೋಟ್‌ಗಳು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳಲಿಲ್ಲ. ಮುಂದಿನ ಕೆಲವೇ ದಿನಗಳಲ್ಲಿ ಈ ಬೋಟ್‌ಗಳೂ ಕೂಡ ಮೀನುಗಾರಿಕೆಗೆ ತೆರಳಲಿವೆ. ಟ್ರಾಲಿಂಗ್‌ ನಿಷೇಧದ ಬಳಿಕ ಮೀನುಗಾರಿಕೆಗೆ ತೆರಳಿದ ಯಾಂತ್ರೀಕೃತ ದೋಣಿಗಳಿಗೆ ಪ್ರಥಮ ದಿನ ಸಿಗಡಿ ಮತ್ತು ಬೆರಕೆ ಮೀನಿನ ಮರಿಗಳು ಲಭಿಸಿವೆ. 

ಚಿತ್ರ : ಶ್ರೀಕಾಂತ್‌ ಕಾಸರಗೋಡು

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.