“ಓದಿನಿಂದ ತಿಳಿಯುವ ಸತ್ಯದಿಂದ ಪ್ರತಿಭೆ ಹೆಚ್ಚಳ’

ವಾಚನ ಪಕ್ಷಾಚರಣೆ ಆರಂಭ

Team Udayavani, Jun 20, 2019, 6:25 AM IST

19KSDE9

ಕಾಸರಗೋಡು: ಓದುವಿಕೆಯ ಮೂಲಕ ತಿಳಿಯುವ ಸತ್ಯವನ್ನು ಬದುಕಿನಲ್ಲಿ ಅಳವಡಿಸಿದಾಗ ನಮ್ಮ ಪ್ರತಿಭೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅಭಿಪ್ರಾಯಪಟ್ಟರು.

ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಜರಗಿದ ಓದುವ ಪಕ್ಷಾಚರಣೆಯ ಜಿಲ್ಲಾ ಮಟ್ಟದ ಉದ್ಘಾಟನೆ ನಡೆಸಿ ಅವರು ಮಾತನಾಡಿದರು.

ಓದಿದ್ದೆಲ್ಲವೂ ಸತ್ಯ ಎನ್ನುವಂತಿಲ್ಲ. ಓದುವಿಕೆಯ ನಡುವೆ ಎಲ್ಲೋ ಅಡಗಿರುವ ಸತ್ಯವನ್ನು ನಾವು ಕಂಡುಕೊಳ್ಳಬೇಕು. ಓದುವಿಕೆಯ ಪ್ರಕ್ರಿಯೆಯಲ್ಲಿ ಆಯ್ಕೆ ಬಹಳ ಪ್ರಧಾನವಾದುದು. ಒಳಿತು ವಿಚಾರಗಳ ಓದು ನಮ್ಮನ್ನು ಉತ್ತಮ ಪ್ರಜೆಗಳನ್ನಾಗಿಸುತ್ತದೆ. ಓದುವುದು ತಪ್ಪು ಮಾಹಿತಿಗಳನ್ನೇ ಆದರೆ ನಮ್ಮ ಹಾದಿಯೂ ತಪ್ಪುವ ಭೀತಿಯಿದೆ ಎಂದವರು ತಿಳಿಸಿದರು.

ಜಿಲ್ಲಾ ಲೈಬ್ರರಿ ಕೌನ್ಸಿಲ್‌, ಪಿ.ಎನ್‌.ಪಣಿಕ್ಕರ್‌ ಫೌಂಡೇಶನ್‌, ಜಿಲ್ಲಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿ ವತಿಯಿಂದ ಕಾರ್ಯಕ್ರಮ ಜರಗಿತು.
ನಗರಸಭೆ ಅಧ್ಯಕ್ಷೆ ಬಿಫಾತಿಮಾ ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದರು. ನೀಲೇಶ್ವರ ನಗರಸಭೆ ಅಧ್ಯಕ್ಷ ಪ್ರೊ| ಕೆ.ಪಿ. ಜಯರಾಜನ್‌ ಅವರು ಪಿ.ಎನ್‌. ಪಣಿಕ್ಕರ್‌ ಅವರ ಸಂಸ್ಮರಣೆ ನಡೆಸಿದರು. ಪ್ಲಸ್‌-ಟು ವಿದ್ಯಾರ್ಥಿನಿ ನಬೀಸತ್‌ ಟಿ.ಪಿ. ಮಿಸ್ರಿಯಾ ಪುಸ್ತಕ ವಾಚನ ನಡೆಸಿದರು. ಜಿಲ್ಲಾ ಗ್ರಂಥಾಲಯ ಮಂಡಳಿ ಅಧ್ಯಕ್ಷ ಡಾ| ಪಿ. ಪ್ರಭಾಕರನ್‌, ಸರ್ವಶಿಕ್ಷಣ ಅಭಿಯಾನ ಜಿಲ್ಲಾ ಯೋಜನೆ ಅಧಿಕಾರಿ ಪಿ.ಪಿ. ವೇಣು ಗೋಪಾಲ್‌, ಕಾಸರಗೋಡು ಡಯಟ್‌ ಪ್ರಭಾರ ಪ್ರಾಂಶುಪಾಲ ಕೆ. ರಾಮಚಂದ್ರನ್‌ ನಾಯರ್‌, ಶಾಲೆಯ ಪ್ರಾಂಶುಪಾಲೆ ಗೀತಾ ಜಿ. ತೋಪ್ಪಿಲ್‌, ಸಹಾಯಕ ಶಿಕ್ಷಣಾಧಿಕಾರಿ ಆಗಸ್ಟಿನ್‌ ಬರ್ನಾಡ್‌ ಮೊಂತೆರೋ, ಪ್ರಭಾರ ಮುಖ್ಯ ಶಿಕ್ಷಕ ಎಂ.ಪಿ. ಸುರೇಶ್‌, ಸಾರ್ವಜನಿಕ ಶಿಕ್ಷಣ ಸಂಚಾಲಕ ಪಿ. ದಿಲೀಪ್‌ ಕುಮಾರ್‌, ಜಿಲ್ಲಾ ಮಾಹಿತಿ ಅಧಿಕಾರಿ ಮಧುಸೂದನನ್‌ ಎಂ., ಜಿಲ್ಲಾ ಗ್ರಂಥಾಲಯ ಮಂಡಳಿ ಕಾರ್ಯದರ್ಶಿ ಪಿ.ವಿ.ಕೆ. ಪನೆಯಾಲ್‌, ತಾಲೂಕು ಗ್ರಂಥಾಲಯ ಮಂಡಳಿ ಕಾರ್ಯದರ್ಶಿ ಪಿ. ದಾಮೋದರನ್‌, ಎಂ.ಎ. ಜಲೀಲ್‌ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಗ್ರಂಥಾಲಯ ಮಂಡಳಿಯ ನೇತೃತ್ವದಲ್ಲಿ ಜಿಲ್ಲೆಯ ಶಾಲೆ, ಕಾಲೇಜು, ಗ್ರಂಥಾಲಯ, ಇತರ ಸಾಂಸ್ಕೃತಿಕ ಸಂಸ್ಥೆ ಇತ್ಯಾದಿ ಕಡೆಗಳ ಸಹಕಾರದೊಂದಿಗೆ ಜಿಲ್ಲೆಯ ವಿವಿಧೆಡೆ ಓದುವ ಪಕ್ಷಾಚರಣೆ ಜು. 4ರ ವರೆಗೆ ನಡೆಯಲಿದೆ. ಈ ಸರಣಿಯ ಅಂಗವಾಗಿ ಸಂಸ್ಮರಣ ಕಾರ್ಯಕ್ರಮಗಳು, ಓದುವ ಸ್ಪರ್ಧೆ, ಮಾದಕ ಪದಾರ್ಥ ಬಳಕೆ ವಿರುದ್ಧ ಜಾಗೃತಿ, ಪುಸ್ತಕ ಪ್ರದರ್ಶನ, ಬರಹ ಪೆಟ್ಟಿಗೆ, ಅಭಿನಂದನೆ ಕಾರ್ಯಕ್ರಮಗಳು ಇತ್ಯಾದಿ ನಡೆಯಲಿವೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.