ಕಾಸರಗೋಡು: ಮನೆಯಲ್ಲಿ ತಾಯಿ, ಮಗಳ ನಿಗೂಢ ಸಾವು

Team Udayavani, Jan 23, 2023, 7:25 PM IST

ಕಾಸರಗೋಡು: ಮನೆಯಲ್ಲಿ ತಾಯಿ, ಮಗಳ ನಿಗೂಢ ಸಾವು

ಕಾಸರಗೋಡು: ಮನೆಯೊಳಗೆ ತಾಯಿ ಮತ್ತು ಮಗಳು ನಿಗೂಢ ರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಬೇಡಡ್ಕ ಕುಂಡಂಗುಳಿ ನೀರ್ಕಯದ ಚಂದ್ರನ್‌ ಅವರ ಪತ್ನಿ ನಾರಾಯಣಿ(45) ಮತ್ತು ಪುತ್ರಿ ಶ್ರೀನಂದ (12)ಸಾವಿಗೀಡಾಗಿದ್ದಾರೆ.

ನಾರಾಯಣಿ ಅಡುಗೆ ಕೊಠಡಿಯ ಪಕ್ಕದ ಶೆಡ್‌ನೊಳಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪುತ್ರಿ ಶ್ರೀನಂದ ಮನೆಯೊಳಗೆ ಕೊಠಡಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ನೆರೆಮನೆಯವರು ಜ.22 ರಂದು ಬೆಳಗ್ಗೆ ನಾರಾಯಣಿಗೆ ಫೋನ್‌ ಮಾಡಿದ್ದರು. ಆದರೆ ಫೋನ್‌ ಕಾಲ್‌ ಸ್ವೀಕರಿಸಿರಲಿಲ್ಲ. ಸಂಜೆಯಾದರೂ ಯಾರೂ ಮನೆಯಿಂದ ಹೊರ ಬರದೇ ಇದ್ದುದರಿಂದ ಸಂಶಯಗೊಂಡ ನೆರೆಮನೆಯವರು ಆ ಮನೆಗೆ ಬಂದು ನೋಡಿದಾಗ ತಾಯಿ ಮತ್ತು ಪುತ್ರಿ ಸಾವಿಗೀಡಾದ ಸ್ಥಿತಿಯಲ್ಲಿ ಕಂಡು ಬಂದರು. ವಿಷಯ ತಿಳಿದು ಬೇಡಗಂ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಜರು ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಬೀಡಿ ಕಾರ್ಮಿಕೆಯಾಗಿರುವ ನಾರಾಯಣಿ ಕೀಯೂರಿನ ದಿ|ರಾಮನ್‌-ವೆಳ್ಳಚ್ಚಿ ದಂಪತಿ ಪುತ್ರಿ. ಇವರು ಸಹೋದರರಾದ ರಾಘವನ್‌, ಬಾಲಕೃಷ್ಣನ್‌ ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಶ್ರೀನಂದ ಕುಂಡಂಗುಳಿ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ. ಆಕೆಯ ತಂದೆ ಚಂದ್ರನ್‌ ಟೂರಿಸ್ಟ್‌ ಬಸ್ಸಿನ ಚಾಲಕರಾಗಿದ್ದಾರೆ. ಅವರು ದಿನಗಳ ಹಿಂದೆ ಪ್ರವಾಸಿಗರನ್ನು ಹೇರಿಕೊಂಡು ಊಟಿಗೆ ಹೋಗಿದ್ದರು.

ಸಾವಿನ ಕಾರಣದ ಬಗ್ಗೆ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಲಭಿಸಿದ ಬಳಿಕವಷ್ಟೇ ಸಾವಿನ ಕಾರಣ ತಿಳಿದುಕೊಳ್ಳಲು ಸಾಧ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.