ಕಾಸರಗೋಡು: 28 ಮಂದಿಗೆ ಸೋಂಕು
Team Udayavani, Jul 6, 2020, 10:21 AM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ 28 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇವರಲ್ಲಿ 10 ಮಂದಿ ವಿದೇಶಗಳಿಂದ, 11 ಮಂದಿ ಇತರ ರಾಜ್ಯಗಳಿಂದ ಆಗಮಿಸಿದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ವಿ. ರಾಮದಾಸ್ ತಿಳಿಸಿದರು. ಜಿಲ್ಲೆಯಲ್ಲಿ 7,230 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 6,902 ಮಂದಿ, ಸಾಂಸ್ಥಿಕ ನಿಗಾದಲ್ಲಿ 328 ಮಂದಿ ಇದ್ದಾರೆ. ರವಿವಾರ 736 ಮಂದಿ ನಿಗಾದಲ್ಲಿ ದಾಖಲಾಗಿದ್ದಾರೆ. 345 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ.
225 ಮಂದಿಗೆ ಸೋಂಕು ರಾಜ್ಯದಲ್ಲಿ ರವಿವಾರ 225 ಮಂದಿಗೆ ಕೊರೊನಾ ಸೋಂಕು ದೃಢಗೊಂಡಿದೆ ಎಂದು ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ತಿಳಿಸಿದ್ದಾರೆ. ಇದರಲ್ಲಿ 117 ಮಂದಿ ವಿದೇಶದಿಂದಲೂ, 57 ಮಂದಿ ಇತರ ರಾಜ್ಯಗಳಿಂದಲೂ ಬಂದವರು. 38 ಮಂದಿಗೆ ಸಂಪರ್ಕದಿಂದ ಕೊರೊನಾ ವೈರಸ್ ಬಾಧಿಸಿದೆ. ಚಿಕಿತ್ಸೆ ಪಡೆಯುತ್ತಿದ್ದ 126 ಮಂದಿ ಗುಣಮುಖರಾಗಿದ್ದಾರೆ.