ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, May 18, 2019, 6:00 AM IST

Crime-545

ವ್ಯಕ್ತಿಯ ಶವ ಪತ್ತೆ
ಕಾಸರಗೋಡು ಪಾಲಕುನ್ನು ಬಸ್‌ ಪ್ರಯಾಣಿಕರ ತಂಗುದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತ ವ್ಯಕ್ತಿಗೆ ಸುಮಾರು 54 ವರ್ಷ ಎಂದು ಅಂದಾಜಿಸಲಾಗಿದೆ. ಮೃತದೇಹದ ಬಳಿಯಿಂದ ಜಿಲ್ಲಾಸ್ಪತ್ರೆಯ ಚೀಟಿಯೊಂದು ಲಭಿಸಿದ್ದು, ಇವರು ನೀಲೇಶ್ವರ ನಿವಾಸಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಶುಕ್ರವಾರ ಬೆಳಗ್ಗೆ ಮೃತ ದೇಹ ಪತ್ತೆಯಾಗಿದ್ದು, ಬೇಕಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ..

ಪಾನ್‌ಮಸಾಲೆ ಸಹಿತ ಇಬ್ಬರ ಬಂಧನ
ಕುಂಬಳೆ: ಹೊಸಂಗಡಿಯ ಕ್ವಾರ್ಟರ್ಸ್‌ವೊಂದರಿಂದ 50 ಕಿಲೋ ಪಾನ್‌ ಮಸಾಲೆ ವಶಪಡಿಸಿಕೊಂಡ ಅಬಕಾರಿ ದಳ ಈ ಸಂಬಂಧ ಉತ್ತರ ಪ್ರದೇಶ ನಿವಾಸಿಗಳಾದ ಭಜನ್‌ ಮತ್ತು ರುತಾಪ್‌ನನ್ನು ಬಂಧಿಸಿದೆ.

ವಾರಂಟ್‌ ಆರೋಪಿಗಳ ಬಂಧನ
ಮಂಜೇಶ್ವರ: ವಿವಿಧ ಪ್ರಕರಣಗಳ ನಾಲ್ಕು ಮಂದಿ ವಾರಂಟ್‌ ಆರೋಪಿಗಳನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
2018ರಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿ ಪೈವಳಿಕೆಯ ಹಮೀದ್‌ (35), 2018 ರಲ್ಲಿ ವಾಹನ ಅಪಘಾತ ಪ್ರಕರಣದ ಆರೋಪಿ ಉಪ್ಪಳ ನಿವಾಸಿ ಜಾಬಿರ್‌ ಹಸನ್‌, 2019ರಲ್ಲಿ ಜುಗಾರಿ ದಂಧೆ ಪ್ರಕರಣ ಮತ್ತು 2018ರಲ್ಲಿ ಹಲ್ಲೆ ಪ್ರಕರಣದ ಆರೋಪಿ ಮಂಜೇಶ್ವರ ಗೋವಿಂದ ಪೈ ಕಾಲೇಜು ಸಮೀಪದ ಮನೋಜ್‌ ಕುಮಾರ್‌ (34) ಹಾಗೂ 2016ರಲ್ಲಿ ಹಲ್ಲೆ ಪ್ರಕರಣದ ಆರೋಪಿ ಕುಂಜತ್ತೂರು ನಿವಾಸಿ ಇಮಿ¤ಯಾಜ್‌ನನ್ನು ಬಂಧಿಸಿದ್ದಾರೆ.

ಅಪಘಾತ : ಗಾಯಾಳು ಸಾವು
ಕಾಸರಗೋಡು: ಮೇ 9 ರಂದು ರಾತ್ರಿ 10 ಗಂಟೆಗೆ ಮಲಪ್ಪುರಂ ಚೇಳಾರಿಯಲ್ಲಿ ಎರಡು ಮೋಟಾರ್‌ ಬೈಕ್‌ಗಳು ಪರಸ್ಪರ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಪರವನಡ್ಕ ಕೈಂದಾರ್‌ ನಿವಾಸಿ ಪಿ.ಕುಂಞಂಬು ನಾಯರ್‌ ಅವರ ಪುತ್ರ ಕೆ.ಅಜೀಶ್‌(26) ಅವರು ಮೇ 16 ರಂದು ರಾತ್ರಿ 11 ಗಂಟೆಗೆ ಸಾವಿಗೀಡಾದರು.

ಪೆಟ್ರೋಲ್‌ ಬಂಕ್‌ನಿಂದ ಕಳವು:
ಎರಡು ಬೆರಳ ಗುರುತು ಪತ್ತೆ
ಬದಿಯಡ್ಕ: ಬೀಜಂತ್ತಡ್ಕ ಪೆಟ್ರೋಲ್‌ ಬಂಕ್‌ನಿಂದ 4,000 ರೂ. ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬೆರಳ ಗುರುತು ತಜ್ಞರು ನಡೆಸಿದ ತನಿಖೆಯಲ್ಲಿ ಎರಡು ಬೆರಳ ಗುರುತು ಪತ್ತೆಯಾಗಿದೆ.

ಸ್ಕೂಟರ್‌ನಿಂದ ಬಿದ್ದ ವೃದ್ಧೆ ಸಾವು
ಕಾಸರಗೋಡು: ಚಟ್ಟಂಚಾಲ್‌ನಲ್ಲಿ ತಲೆಸುತ್ತಿ ಸ್ಕೂಟರ್‌ನಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದ ಬಟ್ಟತ್ತೂರು ನೆಲ್ಲಿಯಡ್ಕ ಪಾಲಕಿ ಮನೆಯ ಗುರುವಯ್ಯ ಅವರ ಪತ್ನಿ ಪಿ. ಸುಶೀಲಾ (67) ಸಾವಿಗೀಡಾದರು. ಆಸ್ಪತ್ರೆಗೆ ತೆರಳಿ ಪುತ್ರನ ಜತೆ ಸ್ಕೂಟರ್‌ನಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ಅವರು ಸ್ಕೂಟರ್‌ನಿಂದ ಬಿದ್ದಿದ್ದರು.

ಬಾವಿಗೆ ಬಿದ್ದ ಯುವಕನ ರಕ್ಷಣೆ
ಉಪ್ಪಳ: ಬಾವಿ ಶುಚಿಗೊಳಿಸಿ ಮೇಲೇರುತ್ತಿದ್ದಾಗ ಅರ್ಧದಿಂದ ಕೆಳಕ್ಕೆ ಬಿದ್ದು ಗಾಯಗೊಂಡ ಬಂದ್ಯೋಡ್‌ ನಿವಾಸಿ ಸಂದೀಪ್‌(27)ನನ್ನು ಉಪ್ಪಳದ ಅಗ್ನಿಶಾಮಕ ದಳ ರಕ್ಷಿಸಿದೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.