ಬಾಲಕಿಗೆ ಲೈಂಗಿಕ ಕಿರುಕುಳ: 18 ವರ್ಷ ಸಜೆ, ದಂಡ
Team Udayavani, Feb 9, 2023, 5:21 PM IST
ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಹೊಸದುರ್ಗ ಮಡಿಕೈ ನಿವಾಸಿ ವಿನೋದ್ ಕುಮಾರ್(35)ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ(1) ಐಪಿಸಿಯ ವಿವಿಧ ಸೆಕ್ಷನ್‌ಗಳಲ್ಲಾಗಿ ಒಟ್ಟು 18 ವರ್ಷ ಸಜೆ ಹಾಗು ಒಂದೂವರೆ ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದಿದ್ದಲ್ಲಿ ಎರಡು ವರ್ಷ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ.
2013 ರಲ್ಲಿ ಬಾಲಕಿಯನ್ನು ಜನ ವಾಸವಿಲ್ಲದ ಮನೆಗೆ ಹಲವು ಬಾರಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನೀಲೇಶ್ವರ ಪೊಲೀಸರು ವಿನೋದ್ ಕುಮಾರ್ ವಿರುದ್ಧ ಫೋಕೊÕà ಕೇಸು ದಾಖಲಿಸಿದ್ದರು.