ಕಾಸರಗೋಡು: 323 ಮಂದಿಗೆ ಲಸಿಕೆ
Team Udayavani, Jan 17, 2021, 2:35 AM IST
ಕಾಸರಗೋಡು: ಜಿಲ್ಲೆಯ 9 ಕೇಂದ್ರಗಳಲ್ಲಿ ಶನಿವಾರ ಕೋವಿಡ್ ವೈರಸ್ ವಿರುದ್ಧ ಲಸಿಕೆ ವಿತರಣೆ ಆರಂಭಗೊಂಡಿತು. ಮೊದಲ ದಿನ 323 ಮಂದಿ ಲಸಿಕೆ ಹಾಕಿಸಿಕೊಂಡರು.
ಕಾಸರಗೋಡು ಜನರಲ್ ಆಸ್ಪತ್ರೆ, ಉಕ್ಕಿನಡ್ಕ ಮೆಡಿಕಲ್ ಕಾಲೇಜು, ಕಾಂಞಂಗಾಡ್ ಜಿಲ್ಲಾ ಆಸ್ಪತ್ರೆ, ಮಂಗಲ್ಪಾಡಿ, ಬೇಡಡ್ಕ, ನೀಲೇಶ್ವರ, ಪನತ್ತಡಿ ತಾಲೂಕು ಆಸ್ಪತ್ರೆಗಳು, ಪೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಎಣ್ಣಪ್ಪಾರ ಕುಟುಂಬ ಆರೋಗ್ಯ ಕೇಂದ್ರಗಳಲ್ಲಿ ಪ್ರಾಥಮಿಕ ಹಂತದ ಕೋವಿಡ್ ವಾಕ್ಸಿನೇಶನ್ ನಡೆಸಲಾಯಿತು.
ದ್ವಿತೀಯ ಹಂತದ ಲಸಿಕೆ ನೀಡಿಕೆಗೆ ಈ 9 ಕೇಂದ್ರಗಳ ಸಹಿತ ಜಿಲ್ಲೆಯ 58 ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ. ಮೂರನೇ ಹಂತದಲ್ಲಿ ಜಿಲ್ಲೆಯಲ್ಲಿ 329 ಕೇಂದ್ರಗಳನ್ನು ಆರಿಸಲಾಗಿದೆ. ಪ್ರತಿ ಕೇಂದ್ರದಲ್ಲೂ 4 ವಾಕ್ಸಿನೇಶನ್ ಅಧಿಕಾರಿಗಳೂ, 3 ವಾಕ್ಸಿನೇಟರ್ಗಳೂ ಇದ್ದರು. ಜತೆಗೆ ಎರಡು ಪಾಳಿಗಳಲ್ಲಿ ಇಬ್ಬರು ವೈದ್ಯರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ