ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾದ ದೂಂಬ್ರ ಶ್ರೀ ಸುಬ್ರಹ್ಮಣ್ಯ, ನಾಗರಾಜ, ನಾಗಕನ್ಯಕೆ

Team Udayavani, May 3, 2019, 7:55 PM IST

4

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸುತ್ತಿರುವುದು.

ಬದಿಯಡ್ಕ : ಕುಂಬ್ದಾಜೆ ಗ್ರಾಮದ ಗೋಸಾಡ ಸಮೀಪದ ದೂಂಬ್ರ ಶ್ರೀ ಸುಬ್ರಹ್ಮಣ್ಯ, ನಾಗರಾಜ, ನಾಗಕನ್ಯಕೆ ಬನದ ಜೀರ್ಣೋದ್ಧಾರ ಕಾರ್ಯಗಳು ಸಂಪೂರ್ಣಗೊಂಡು ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದೆ. ಸುಮಾರು 300 ವರ್ಷಗಳ ಪುರಾತನವಿರುವ ಈ ಸನ್ನಿಧಿಯ ಜೀರ್ಣೋದ್ಧಾರ ಕಾರ್ಯಗಳು ಕಳೆದ ಒಂದು ವರ್ಷಗಳಿಂದ ತ್ವರಿತ ಗತಿಯಲ್ಲಿ ಸಾಗಿ ಇದೀಗ ಪೂರ್ಣಗೊಂಡು ಇದೇ ಬರುವ 2019 ಜೂನ್‌ 11ಮತ್ತು 12 ನೇ ತಾರೀಕುಗಳಲ್ಲಾಗಿ ಬ್ರಹ್ಮ ಶ್ರೀ ಕುಂಟಾರು ವಾಸುದೇವ ತಂತ್ರಿಗಳವರ ನೇತೃತ್ವದಲ್ಲಿ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶೋತ್ಸವವೂ ಜರಗಲಿರುವುದು. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಶ್ರೀ ಸನ್ನಿಧಿ ಪರಿಸರದಲ್ಲಿ ಜರಗಿತು. ಆಮಂತ್ರಣ ಪತ್ರಿಕೆಯನ್ನು ಗೋಸಾಡ ಶ್ರೀ ಮಹಿಷಮರ್ದಿನಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಆಧ್ಯಕ್ಷರಾದ ನಾರಾಯಣ ರೈ ಕುದಾಡಿಯವರು ಬ್ರಹ್ಮಕಲಶೋತ್ಸವದ ಪ್ರಚಾರ ಸಮಿತಿ ಸಂಚಾಲಕರಾದ ರಾಜೇಶ್‌ ಶೆಟ್ಟಿಯವರಿಗೆ ನೀಡುವ ಮೂಲಕ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಅದೇ ರೀತಿ ಅನ್ನದಾನದ ಹಾಗೂ ಲಕ್ಕಿ ಕೂಪನ್‌ನನ್ನು ಧಾರ್ಮಿಕ ಮುಂದಾಳು, ಅಧ್ಯಾಪಕರೂ ಆದ ಹರಿನಾರಯಣ ಚೂರಿಕ್ಕೋಡುರವರು ಆರ್ಥಿಕ ಸಮಿತಿ ಸಹ ಸಂಚಾಲಕರಾದ ಪ್ರಸಾದ್‌ ಗೋಸಾಡರವರಿಗೆ ನೀಡಿ ಬಿಡುಗಡೆಗೊಳಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕುಂಞಿರಾಮ ಗೋಸಾಡ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕ್ಷೇತ್ರೇಶರರೂ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ ಆದ ಕೃಷ° ಅಮ್ಮಣ್ಣಾಯ, ಶ್ರೀನಿವಾಸ ಅಮ್ಮಣ್ಣಾಯ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಕೋಶಾಧಿಕಾರಿ ಮನಮೋಹನ ಭಟ್‌ ಮೊದಲಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ರವಿಂದ್ರ ರೈ ಸ್ವಾಗತಿಸಿ ಹಾಗೂ ರವಿರಾಜ ಮಲ್ಲಮೂಲೆ ವಂದಿಸಿದರು.

ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.