ಇಂದು ಕೊಂಡೆವೂರಿನಲ್ಲಿ ಕನ್ನಡ ರಾಜ್ಯೋತ್ಸವ, ಪ್ರಶಸ್ತಿ ಪ್ರದಾನ  


Team Udayavani, Nov 17, 2018, 3:15 AM IST

kondevuru-16-11.jpg

ಬದಿಯಡ್ಕ: ಗಡಿನಾಡು ಕಾಸರಗೋಡಿನ ಕನ್ನಡ ಅಸ್ಮಿತೆಯ ಉಳಿಸುವಿಕೆಗಾಗಿ ಸನ್ನದ್ದವಾಗಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ನೇತೃತ್ವದಲ್ಲಿ ನ. 17ರಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಇವುಗಳ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಗಾಯತ್ರಿ ಮಂಟಪದಲ್ಲಿ ಬೆಳಗ್ಗೆ 10 ರಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸಮಾರಂಭದಲ್ಲಿ ಗಡಿನಾಡ ಕಲಾ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರಕಾರದ ಕುಡಿಯುವ ನೀರು ಹಾಗೂ ನೈರ್ಮಲ್ಯ ಖಾತೆಯ ಸಚಿವ ರಮೇಶ್‌ ಸಿ. ಜಿಗಜಿಣಗಿ ಉದ್ಘಾಟಿಸುವರು. ಕರ್ನಾಟಕ ಸರಕಾರದ ಅರಣ್ಯ ಸಚಿವ ಎಸ್‌.ಆರ್‌. ಶಂಕರ್‌ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಪ್ರಶಸ್ತಿ ಪ್ರದಾನಗೈಯುವರು. ಕಾಸರಗೋಡು ಶಾಸಕ ಎನ್‌.ಎ.ನೆಲ್ಲಿಕುನ್ನು, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಟಿ. ತಿಮ್ಮೇಗೌಡ, ಉಪಸ್ಥಿತರಿರುವರು.

ಕರ್ನಾಟಕ ಸರಕಾರದ ದಿಲ್ಲಿ ವಿಶೇಷ ಪ್ರತಿನಿಧಿ ಸಯ್ಯದ್‌ ಮೊಯ್ದಿ ಅಲ್ತಾಫ್‌, ಕೇರಳ ಜವುಳಿ ನಿಗಮದ ಅಧ್ಯಕ್ಷ ಸಿ.ಆರ್‌. ವಲ್ಸನ್‌, ಜಿಲ್ಲಾ ಪಂಚಾಯತ್‌ ಸದಸ್ಯ ನ್ಯಾಯವಾದಿ ಕೆ. ಶ್ರೀಕಾಂತ್‌, ಮಂಜೇಶ್ವರ ಬ್ಲಾ.ಪಂ. ಅಧ್ಯಕ್ಷ ಎ.ಕೆ.ಎಂ. ಅಶ್ರಫ್‌, ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಉಪಸ್ಥಿತರಿದ್ದು ಶುಭಹಾರೈಸುವರು. ವಿಶೇಷ ಆಹ್ವಾನಿತರಾಗಿ ಮಂಗಲ್ಪಾಡಿ ಗ್ರಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಬಿ.ಎಂ.ಮುಸ್ತಫಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ., ಉದ್ಯಮಿ ಯು.ಕೆ. ಯೂಸುಫ್‌ ಮೊದಲಾದವರು ಉಪಸ್ಥಿತರಿರುವರು.

ಉದ್ಘಾಟನಾ ಸಮಾರಂಭದ ಬಳಿಕ ಕವಿ, ಪತ್ರಕರ್ತ ಕೆ. ರಾಧಾಕೃಷ್ಣ ಉಳಿಯತ್ತಡ್ಕ ಅವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ಆ ಬಳಿಕ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಕತ್ವದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು,ನಿವೃತ್ತ ಉಪ ಜಿಲ್ಲಾಧಿಕಾರಿ ಬಾಲಕೃಷ್ಣ ಅಗ್ಗಿತ್ತಾಯ ಮಧೂರು, ಶ್ರೀಕಾಂತ್‌ ನಾರಾಯಣ್‌ ನೆಟ್ಟಣಿಗೆ, ಸಂಧ್ಯಾಗೀತಾ ಬಾಯಾರು, ವಿದ್ಯಾಗಣೇಶ್‌ ಅಣಂಗೂರು ನಿರ್ವಹಿಸುವರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗುವ ಸಾಧಕರು

ಸಮಾರಂಭದ ಉದ್ಘಾಟನಾ ವೇದಿಕೆಯಲ್ಲಿ ವಿಶೇಷ ಸಾಧನೆ- ಕೊಡುಗೆಗಳ ಮೂಲಕ ವಿವಿಧ ವಿಭಾಗಗಳ ಸಾಧಕರಿಗೆ ಪ್ರಶಸ್ತಿ ಪ್ರದಾನಗೈದು ಗೌರವಿಸಲಾಗುವುದು. ಸಾಮಾಜಿಕ ಹಸಿರು ಅರಿವಿನ ರೂವಾರಿ ನಾಡೋಜ ಸಾಲುಮರದ ತಿಮ್ಮಕ್ಕ, ದೀನಬಂಧು ಸಾಯಿರಾಂ ಗೋಪಾಲಕೃಷ್ಣ ಭಟ್‌, ಶಾ.ಮಂ.ಕೃಷ್ಣರಾಯ, ಜಾನಪದ ಕಲಾವಿದ ಕುಟ್ಟಿ ಬಜಕ್ಕೂಡ್ಲು, ಹಿರಿಯ ಪತ್ರಕರ್ತ, ಕವಿ-ಸಾಹಿತಿ ಮಲಾರು ಜಯರಾಮ ರೈ, ಮುನಿಯಾಲು ಉದಯ ಶೆಟ್ಟಿ, ಸಂಕೀರ್ತನಕಾರ ಜಯಾನಂದಕುಮಾರ್‌ ಹೊಸದುರ್ಗ, ತೋನ್ಸೆ ವಿಜಯಕುಮಾರ್‌ ಶೆಟ್ಟಿ, ಎಸ್‌. ಜಗದೀಶ್ಚಂದ್ರ ಅಂಚನ್‌, ಮೊಹಮ್ಮದ್‌ ಆಸೀಫ್‌ ಸವಣೂರು, ಮಡಿಕೇರಿ ಸುಳ್ಳಿಮಾಡದ ಗೌರಿ ನಂಜಪ್ಪ ಅವರನ್ನು ಗೌರವಿಸಲಾಗುವುದು. 

ಪ್ರಶಸ್ತಿ ಸ್ವೀಕರಿಸಲಿರುವ ಗಣ್ಯರು: ಸಾಲುಮರದ ತಿಮ್ಮಕ್ಕ, ಸಾಯಿರಾಂ ಗೋಪಾಲಕೃಷ್ಣ ಭಟ್‌, ಶಾ.ಮಂ. ಕೃಷ್ಣರಾಯ, ಜಾನಪದ ಕಲಾವಿದ ಕುಟ್ಟಿ ಬಜಕ್ಕೂಡ್ಲು, ಹಿರಿಯ ಪತ್ರಕರ್ತ, ಕವಿ-ಸಾಹಿತಿ ಮಲಾರು ಜಯರಾಮ ರೈ, ಮುನಿಯಾಲು ಉದಯ ಶೆಟ್ಟಿ, ಸಂಕೀರ್ತನಕಾರ ಜಯಾನಂದಕುಮಾರ್‌ ಹೊಸದುರ್ಗ, ತೋನ್ಸೆ ವಿಜಯಕುಮಾರ್‌ ಶೆಟ್ಟಿ, ಎಸ್‌.ಜಗದೀಶ್ಚಂದ್ರ ಅಂಚನ್‌, ಮೊಹಮ್ಮದ್‌ ಆಸೀಫ್‌ ಸವಣೂರು, ಮಡಿಕೇರಿ ಸುಳ್ಳಿಮಾಡದ ಗೌರಿ ನಂಜಪ್ಪ.

ಟಾಪ್ ನ್ಯೂಸ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಲಾಭ ಗಳಿಸಿದ ಷೇರು ಯಾವುದು…

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಮೇ.27ರಂದು ಲಾಭ ಗಳಿಸಿದ ಷೇರು ಯಾವುದು…

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

19car

ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿದ ಮಾಲೀಕ: ವಿಚಾರಣೆಯಲ್ಲಿ ಅಚ್ಚರಿ ಮಾಹಿತಿ ಬಯಲು

RR-RCB

ರಾಯಲ್ ಕದನ: ಇಲ್ಲಿದೆ ಬೆಂಗಳೂರು-ರಾಜಸ್ಥಾನ ನಡುವಿನ ಸ್ವಾರಸ್ಯಕರ ಅಂಶಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಾರಿಯಿಂದ ದ್ರವ ಪದಾರ್ಥ ಸೋರಿಕೆ: ವರ್ತಕರು,ವಿದ್ಯಾರ್ಥಿಗಳು ಅಸ್ವಸ್ಥ

ಲಾರಿಯಿಂದ ದ್ರವ ಪದಾರ್ಥ ಸೋರಿಕೆ: ವರ್ತಕರು,ವಿದ್ಯಾರ್ಥಿಗಳು ಅಸ್ವಸ್ಥ

ಪೊಲೀಸ್‌ ಕಸ್ಟಡಿಯಿಂದ ಆರೋಪಿ ಪರಾರಿ ; ಮೂವರು ಪೊಲೀಸರ ಅಮಾನತು

ಪೊಲೀಸ್‌ ಕಸ್ಟಡಿಯಿಂದ ಆರೋಪಿ ಪರಾರಿ ; ಮೂವರು ಪೊಲೀಸರ ಅಮಾನತು

ಹಾಡಹಗಲೇ ಮಹಿಳೆಗೆ ಚೂರಿ ತೋರಿಸಿ ಚಿನ್ನಾಭರಣ ಅಪಹರಣ

ಹಾಡಹಗಲೇ ಮಹಿಳೆಗೆ ಚೂರಿ ತೋರಿಸಿ ಚಿನ್ನಾಭರಣ ಅಪಹರಣ

ಕುಂಬಳೆ: ಪ್ರಯಾಣಿಕರ ಸರ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರ ಬಂಧನ

ಕುಂಬಳೆ: ಪ್ರಯಾಣಿಕರ ಸರ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರ ಬಂಧನ

ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರ ಸಾವು

ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರ ಸಾವು

MUST WATCH

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

ಹೊಸ ಸೇರ್ಪಡೆ

25

ಅಪನಂಬಿಕೆ-ಅತಿ ಕಾಳಜಿಯಿಂದ ಸ್ಕಿಜೋಫ್ರೇನಿಯಾ

pdo

ಬಡ್ತಿಗೆ ಒತ್ತಾಯಿಸಿ ಪಿಡಿಒಗಳಿಂದ ಮನವಿ ಸಲ್ಲಿಕೆ

24

ದೌರ್ಜನ್ಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಲಾಭ ಗಳಿಸಿದ ಷೇರು ಯಾವುದು…

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಮೇ.27ರಂದು ಲಾಭ ಗಳಿಸಿದ ಷೇರು ಯಾವುದು…

23

ಜನರ ಆಸಕ್ತಿ ಅನುಸಾರ ತರಬೇತಿ ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.