ಸಮಾಜಘಾತುಕ ಶಕ್ತಿಗಳ ವಿರುದ್ಧ ಸಂಘ ಪರಿವಾರದ ಪ್ರತಿಭಟನೆ

ಬಾಯಾರಿನಲ್ಲಿ ಕಜಂಪಾಡಿ ಸುಬ್ರಹ್ಮಣ್ಯ ಭಟ್‌ ಮೇಲೆ ಹಲ್ಲೆ ಯತ್ನ

Team Udayavani, Apr 27, 2019, 6:11 AM IST

26KSDE4

ಬಾಯಾರು: ಸಮಾಜ ಘಾತುಕ ಶಕ್ತಿಗಳ ನಡೆಸುವ ದುಷ್ಕೃತ್ಯ ವಿರುದ್ಧ ಬಾಯಾರಿನಲ್ಲಿ ಸಂಘ ಪರಿವಾರದ ಪ್ರತಿಭಟನೆ ನಡೆಯಿತು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖೀಲ ಭಾರತ ಸ್ತರ ಜವಾಬ್ದಾರಿಯನ್ನು ಹೊಂದಿರುವ ಕಜಂಪಾಡಿ ಸುಬ್ರಹ್ಮಣ್ಯ ಭಟ್‌ ಅವರು ಖಾಸಗಿ ಕಾರ್ಯಕ್ರಮವೊಂದಕ್ಕೆ ತಮ್ಮ ಮನೆಯವರ ಜತೆ ಬಾಯಾರಿನಿಂದ ವಾಹನವೊಂದರಲ್ಲಿ ಹೊರಟಿದ್ದರು. ಆಗ ಬಾಯಾರು ಸೊಸೈಟಿ ಬಳಿ ಗುಂಪೊಂದು ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿತ್ತು. ಜತೆಗೆ ಆ ಸಂದರ್ಭದಲ್ಲಿ ಸಿಡಿಮದ್ದುಗಳನ್ನು ಕೂಡ ರಸ್ತೆ ಬದಿಯಲ್ಲಿ ಸುಡಲಾಗುತ್ತಿತ್ತು. ಸುಡುಮದ್ದು ಮುಗಿಯುವ ತನಕ ತಮ್ಮ ವಾಹನವನ್ನು ನಿಲ್ಲಿಸಿ, ಅನಂತರ ಹೊರಡಲು ಅನುವಾದರು. ಆಗ ಅಲ್ಲಿಗೆ ಬಂದ ಯುವಕರು ತಂಡ ವಾಹನವನ್ನು ತಡೆದುದು ಮಾತ್ರವಲ್ಲದೆ ಎಲ್ಲರನ್ನೂ ಕೆಟ್ಟದಾಗಿ ನಿಂದಿಸಿ ವಾಹನದ ಮೇಲೆ ದಾಳಿ ನಡೆಸಿದ ದುಷ್ಕೃತ್ಯವನ್ನು ಪ್ರತಿಭಟಿಸಿ ಮೆರವಣಿಗೆ ನಡೆಯಿತು.

ಬಾಯಾರು ಪದವಿನಿಂದ ಬಾಯಾರು ಸೊಸೈಟಿಯ ವರೆಗೆ ನಡೆದ ಮೆರವಣಿಗೆಯಲ್ಲಿ ಸಂಘ ಪರಿವಾರದ ಪ್ರಮುಖರು ಭಾಗವಹಿಸಿದ್ದರು.

ವಿನಾಕಾರಣ ಹಲ್ಲೆ
ಪ್ರತಿಭಟನ ಮೆರವಣಿಗೆಯ ಕೊನೆಯಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಕಾರ್ಯವಾಹ ಲೋಕೇಶ್‌ ಜೋಡುಕಲ್ಲು ಮಾತನಾಡಿ ಪ್ರಯಾಣಿಸುತ್ತಿದ್ದ ಸಂಘದ ಹಿರಿಯರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್‌ ಅವರ ವಾಹನದ ಮೇಲೆ ಯಾವುದೇ ಕಾರಣ ಇಲ್ಲದೆ ನಡೆದ ಹಲ್ಲೆ ಖಂಡನೀಯ.

ಇಂತಹ ಅನೇಕ ಘಟನೆಗಳು ಕಾಸರಗೋಡಿನಾದ್ಯಂತ ನಡೆಯುವುದು ಇತ್ತೀಚೆಗೆ ಸಾಮಾನ್ಯ ಆಗುತ್ತಿದೆ. ನಾವು ಹಿಂದೂಗಳು ಎಂದೂ ಹಿರಿಯರು ಕಲಿಸಿದ ಜೀವನ ಪದ್ಧತಿಯಲ್ಲಿ ನಡೆಯುವವರು. ಯಾವತ್ತಿಗೂ ಕಾನೂನು ಮೀರಿ ನಡೆಯುವವರಲ್ಲ. ವಾಹನವನ್ನು ತಡೆದು ಹಲ್ಲೆಗೆ ಯತ್ನಿಸಿದವರ ಮೇಲೆ ಸಂಬಂಧಪಟ್ಟ ಇಲಾಖೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇವೆ. ಅಕಸ್ಮಾತ್‌ ಕ್ರಮ ಕೈಗೊಳ್ಳಲು ಅವರಿಗೆ ಸಾಧ್ಯವಿಲ್ಲ ಎಂದಾದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಬೇಕೆಂಬುದು ತಿಳಿದಿದೆ ಎಂದರು.

ಅನಂತರ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್‌ ಶಬರಿಮಲೆ ಹೋರಾಟದ ಸಂದರ್ಭದಲ್ಲಿ ಅಯ್ಯಪ್ಪ ನಾಮ ಸಂಕೀರ್ತನೆಯನ್ನು ಜಪಿಸುತ್ತಿದ್ದ ಭಕ್ತರನ್ನು ಬಂಧಿ ಸಿದ ಪೊಲೀಸರು, ವಿನಾಕಾರಣ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದವರ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳುತ್ತೀರಿ ಎಂದು ಪೊಲೀಸ್‌ ಇಲಾಖೆಯನ್ನು ಪ್ರಶ್ನಿಸಿದರು.

ಅನಂತರ ಅವರು ಮಾತನಾಡುತ್ತ ಮದುವೆಯ ನೆಪದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡಿದ್ದು ಮಾತ್ರವಲ್ಲದೆ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ ಪಡಿಸಿದ ಘಟನೆಯನ್ನು ಖಂಡಿಸಿದರಲ್ಲದೆ ಅಂತಹ ವ್ಯಕ್ತಿಗಳ ಮೇಲೆ ಕಠಿನ ಕ್ರಮಕ್ಕೆ ಆಗ್ರಹಿಸಿದರು. ಈ ಕೃತ್ಯಕ್ಕೆ ಮದುವೆ ಮನೆಯವರು ಒಪ್ಪಿಗೆ ಇಲ್ಲದಿದ್ದಲ್ಲಿ ಅವರೇ ಸ್ವತಃ ಅಪರಾ ಧಿಗಳ ಪತ್ತೆಗೆ ಸಹಕರಿಸಲಿ, ಇಲ್ಲದಿದ್ದರೆ ಅವರೂ ಈ ಘಟನೆಗೆ ಕಾರಣ ಎಂದು ಭಾವಿಸಬೇಕಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಂಚಾಲಕ ಗೋಪಾಲ ಚೆಟ್ಟಿಯಾರ್‌ ಹಾಗೂ ವಿ.ಹಿಂ.ಪ, ಭಾಜಪ, ಸಹಕಾರ ಭಾರತಿಯ ಹಲವು ಪ್ರಮುಖರು ಉಪಸ್ಥಿತರಿದ್ದರು.

ಕ್ರಮ ಕೈಗೊಳ್ಳದಿದ್ದರೆ ಹೋರಾಟ
ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಯವರಾಗಿದ್ದರೂ ಹಲ್ಲೆ ಮಾಡಿದವರ ಯಾವುದೇ ಕಾರಣಕ್ಕೆ ಅವರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸ್‌ ಮುಂದಾಗ ದಿದ್ದಲ್ಲಿ ಮುಂದಿನ ಕ್ರಮವನ್ನು ನಮ್ಮ ಕಾರ್ಯಕರ್ತರೇ ಕೈಗೆತ್ತಿ ಕೊಳ್ಳಬೇಕಾದೀತು. ಅಂತಹ ಅವಕಾಶ ನೀಡಬೇಡಿ ಎಂದು ಪೊಲೀಸ್‌ ಇಲಾಖೆಗೆ ಎಚ್ಚರಿಸಲಾಯಿತು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.