ಹಿರಿಯ ರಂಗಕರ್ಮಿ, ಸಾಹಿತಿ ಡಿ.ಕೆ. ಚೌಟ ನಿಧನ


Team Udayavani, Jun 20, 2019, 5:55 AM IST

chowta

ಕಾಸರಗೋಡು: ಕೃಷಿ, ರಂಗಭೂಮಿ, ಸಾಹಿತ್ಯ, ಕಲೆ ಸಹಿತ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಚಿಂತಕ, ರಂಗ ನಿರಂತರ ಕಾರ್ಯಾಧ್ಯಕ್ಷರಾಗಿದ್ದ ಮಂಜೇಶ್ವರಸಮೀಪದ ಮೀಯಪದವಿನ ಡಿ.ಕೆ. ಚೌಟ (82) ಅವರು ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ನಿಧನ ಹೊಂದಿದರು.

ಅವರು ಪತ್ನಿ ರಮಾ ಚೌಟ, ಪುತ್ರಿ ಡಾ| ಪ್ರಜ್ಞಾ ಚೌಟ, ಪುತ್ರ ಬಾಲಿವುಡ್‌ ಸಂಗೀತ ನಿರ್ದೇಶಕ ಸಂದೀಪ್‌ ಚೌಟ (ಮುಂಬಯಿ) ಅವರನ್ನು ಅಗಲಿದ್ದಾರೆ.

ದರ್ಬೆ ಕೃಷ್ಣಾನಂದ ಚೌಟ (ಡಿ.ಕೆ .ಚೌಟ) 1938 ಜೂನ್‌ 1ರಂದು ಕಾಸರಗೋಡು ಜಿಲ್ಲೆಯ ಮೀಯಪದವಿನಲ್ಲಿ ಜನಿಸಿದರು. ಚಿತ್ರಕಲೆ ಹಾಗೂ ರಂಗಭೂಮಿಯ ಬಗ್ಗೆ ಅತೀವ ಆಸಕ್ತಿ ಹೊಂದಿದ್ದ ಅವರು ಕಲಾ ಪೋಷಕರೂ ಆಗಿದ್ದರು. ರಂಗ ನಿರಂತರ ಸಂಸ್ಥೆಯ ಸಾರಥಿಯಾಗಿ ಅನೇಕ ಸಾಧನೆ ಮಾಡಿದ್ದಾರೆ. ಸೃಜನಶೀಲ ಬರಹಗಾರರಾಗಿ ಕನ್ನಡ ಹಾಗೂ ತುಳು ಭಾಷೆಗೆ ಅನನ್ಯ ಸೇವೆ ಸಲ್ಲಿಸಿದ್ದಾರೆ. ಅವರು ಬರೆದ ಮಿತ್ತಬೈಲ್ ಯಮುನಕ್ಕ, ಅರ್ಧಸತ್ಯ, ಬಾಕಿ ಸುಳ್ಳಲ್ಲ, ಕರಿಯಜ್ಜನ ಕಥೆಗಳು, ಪಿಲಿಪತ್ತಿ ಗಡಸ್‌, ಮೂರು ಹೆಜ್ಜೆ, ಮೂರು ಲೋಕ ಪ್ರಮುಖ ಕೃತಿಗಳಾಗಿ ಸಾಹಿತ್ಯ ಲೋಕದಲ್ಲಿ ಗುರುತಿಸಲ್ಪಟ್ಟಿವೆ.

ತೋಟವೇ ಸಂಶೋಧನಾ ಕೇಂದ್ರ

ಡಿ.ಕೆ. ಚೌಟ ಅವರು ಬೆಂಗಳೂರಿನಲ್ಲಿದ್ದರೂ ಮೀಯಪದವಿನಲ್ಲಿದ್ದ ತಮ್ಮ ಜಮೀನಿನ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದ್ದರು. ಅನೇಕ ಎಕರೆಗಳ ವಿಸ್ತಾರದಲ್ಲಿರುವ ಈ ತೋಟವು ಬೃಹತ್ತಾದ ಸಂಶೋಧನಾ ಕೇಂದ್ರವೇ ಆಗಿದೆ. ಇಲ್ಲಿನ ಪ್ರಬುದ್ಧ ಕೃಷಿ ಚಟುವಟಿಕೆಗಳು ವಿಶೇಷ ಪ್ರಶಂಸೆಗೆ ಒಳಗಾಗಿದ್ದುವು. 2015ರಲ್ಲಿ ಮೀಯಪದವಿನಲ್ಲಿ ನಡೆದ ಕಾಸರಗೋಡು ಜಿಲ್ಲಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕಾಸರಗೋಡಿನ ಕನ್ನಡ ಪರ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಮಂಜೇಶ್ವರ ಗೋವಿಂದ ಪೈ ಟ್ರಸ್ಟ್‌ನ ಗೌರವ ಅಧ್ಯಕ್ಷರಾಗಿದ್ದರು. ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷರು.

ಚಿತ್ರ ಸಂತೆ ಖ್ಯಾತಿ

90ರ ದಶಕದಲ್ಲಿ ಸಿಜಿಕೆ ಮೂಲಕ ಕನ್ನಡ ರಂಗಭೂಮಿಗೆ ಪರಿಚಿತರಾದರು. ಅನಂತರದಲ್ಲಿ ಸಮುದಾಯ ಸೇರಿದಂತೆ ಕರ್ನಾಟಕದ ವಿವಿಧ ರಂಗ ತಂಡಗಳಿಗೆ ಅವರು ನೀಡಿದ ಸಹಕಾರ ಅನನ್ಯವಾದುದು. ಸಮುದಾಯದ ರುಡಾಲಿ, ಜುಗಾರಿ ಕ್ರಾಸ್‌ ಸೇರಿದಂತೆ ಸಮುದಾಯದ ಉತ್ಸವಗಳಿಗೆ ಅವರ ಆರ್ಥಿಕ ಸಹಾಯ ದೊರಕಿದೆ. ಸಿಜಿಕೆ ನಂತರ ರಂಗ ನಿರಂತರದ ಚುಕ್ಕಾಣಿ ಹಿಡಿದು ಸಂಘಟನೆಗೆ ಬಲ ತುಂಬಿದರು. ತಮ್ಮ ಸೃಜನಶೀಲ ಬರವಣಿಗೆಯ ಮೂಲಕ ತುಳು, ಕನ್ನಡ ಸಾಹಿತ್ಯ ಲೋಕಕ್ಕೆ ಅವರು ನೀಡಿದ ಕೊಡುಗೆ ಗಮನಾರ್ಹ. ಚಿತ್ರಕಲಾ ಪರಿಷತ್ತಿನ ಬೆಳವಣಿಗೆಯಲ್ಲಿ ಚೌಟ ಅವರ ಪಾತ್ರ ಬಹಳ ದೊಡ್ಡದು. ಚಿತ್ರ ಸಂತೆ ಮೂಲಕ ಅವರು ರಾಷ್ಟ್ರ ಮಟ್ಟದಲ್ಲಿ ಚಿತ್ರಕಲಾ ಪರಿಷತ್‌ ಖ್ಯಾತಿ ಪಡೆಯಲು ಕಾರಣವಾಯಿತು.

ಆನಂದ ಕೃಷ್ಣ ಕಾವ್ಯನಾಮ

ಬಾಂಬೆ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು ಅನಂತರ ಗಾನಾ, ನೈಜೀರಿಯಾ ಮತ್ತು ಲಂಡನ್‌ನಲ್ಲಿ ನೆಲೆಸಿದ್ದರು. ಅನಂತರ ಬೆಂಗಳೂರಿಗೆ ಬಂದು ರಂಗಭೂಮಿಯಲ್ಲಿ ಮತ್ತು ಸಾಹಿತ್ಯ ಕೃಷಿಯಲ್ಲಿ ಸಕ್ರಿಯರಾಗಿದ್ದರು. ಆನಂದ ಕೃಷ್ಣ ಎಂಬ ಕಾವ್ಯನಾಮದಲ್ಲಿ ಹಲವು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್, ಕರ್ನಾಟಕ ಸರಕಾರದ ತುಳು ಅಕಾಡೆಮಿಯ ಸಾಹಿತ್ಯ ಪ್ರಶಸ್ತಿ ಸಹಿತ ಅನೇಕ ಗೌರವಗಳನ್ನು ಪಡೆದುಕೊಂಡಿದ್ದರು.

ಪ್ರಗತಿಪರ ಕೃಷಿಕರಾದ ಡಾ| ಚಂದ್ರಶೇಖರ ಚೌಟ ಹಾಗೂ ಪ್ರಭಾಕರ ಚೌಟ ಅವರು ಡಿ.ಕೆ. ಚೌಟರ ಸಹೋದರರಾಗಿದ್ದಾರೆ. ಡಿ.ಕೆ. ಚೌಟರ ನಿಧನದಿಂದಾಗಿ ಕಾಸರಗೋಡು ಜಿಲ್ಲೆಯ ಚೌಟರ ತೋಟದಲ್ಲಿ ನೀರವ ಮೌನ ಆವರಿಸಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.