ರೋಗಿಗಳಿಗಿನ್ನು ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ಸೌಲಭ್ಯ
Team Udayavani, Sep 18, 2018, 2:55 AM IST
ಕಾಸರಗೋಡು: ಕೇರಳ ರಾಜ್ಯದ ಎಲ್ಲ ಜಿಲ್ಲೆ ಮತ್ತು ಜನರಲ್ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ಸೌಲಭ್ಯ ದೊರಕಲಿದೆ. ಈವರೆಗೆ ರಾಜ್ಯದ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ಮಾತ್ರವಾಗಿ ಸೀಮಿತಗೊಳಿಸಲಾಗಿದ್ದ ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ಸೌಕರ್ಯಗಳು ಇನ್ನು ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ಜನರಲ್ ಆಸ್ಪತ್ರೆಗಳಲ್ಲಿ ಲಭಿಸಲಿವೆ. ಇದಕ್ಕಿರುವ ಕ್ರಮಗಳು ಹಾಗೂ ಅಗತ್ಯದ ಸೌಕರ್ಯಗಳನ್ನು ಶೀಘ್ರದಲ್ಲೇ ಏರ್ಪಡಿಸಲಾಗುವುದು ಎಂದು ಕೇರಳ ಆರೋಗ್ಯ ಖಾತೆ ಸಚಿವೆ ಕೆ.ಕೆ.ಶೈಲಜಾ ಅವರು ತಿರುವನಂತಪುರದಲ್ಲಿ ತಿಳಿಸಿದ್ದಾರೆ.
ಈ ಯೋಜನೆಯಂತೆ ಸೂಪರ್ ಸ್ಪೆಷಾಲಿಟಿ ಶ್ರೇಣಿಯಲ್ಲಿರುವ ತಜ್ಞ ಹಾಗೂ ನುರಿತ ವೈದ್ಯರನ್ನು ರಾಜ್ಯದ ಎಲ್ಲ ಜಿಲ್ಲಾ ಮತ್ತು ಜನರಲ್ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ನೇಮಿಸುವ ಕ್ರಮಗಳು ನಡೆಯುತ್ತಿವೆ. ಅದಕ್ಕಿರುವ ಅಗತ್ಯದ ಕಟ್ಟಡ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಸದ್ಯದಲ್ಲೇ ಏರ್ಪಡಿಸಲಾಗುವುದು. ಉನ್ನತ ಮಟ್ಟದ ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ಒದಗಿಸುವ ಸೌಲಭ್ಯಗಳನ್ನು ಕೂಡ ಒದಗಿಸಲಾಗುವುದು ಎಂದು ಸಚಿವೆ ಕೆ.ಕೆ. ಶೈಲಜಾ ವಿವರಿಸಿದರು.
ಎಂಡೋ ರೋಗಿಗಳಿಗೂ ಉತ್ತಮ ಚಿಕಿತ್ಸೆ ಲಭ್ಯ
ವೈದ್ಯಕೀಯ ಕಾಲೇಜುಗಳಿಲ್ಲದ ಜಿಲ್ಲೆಗಳ ರೋಗಿಗಳು ಉನ್ನತ ಮಟ್ಟದ ಚಿಕಿತ್ಸೆಗಾಗಿ ಬೇರೆ ಜಿಲ್ಲೆಗಳ ವೈದ್ಯಕೀಯ ಆಸ್ಪತ್ರೆಗಳು ಅಥವಾ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆಶ್ರಯಿಸಬೇಕಾದ ಪರಿಸ್ಥಿತಿ ಈಗಿದೆ. ಅಂತಹ ಚಿಕಿತ್ಸೆಗೆ ಭಾರೀ ಖರ್ಚು ತಗಲುತ್ತಿದೆ. ಬಡವರಿಗೆ ಇದು ಕೈಗೆಟುಕದ ವಿಷಯವಾಗಿದೆ. ಅದಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ರಾಜ್ಯ ಸರಕಾರವು ಈ ಹೊಸ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕಾಸರಗೋಡು ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗೆ ಉನ್ನತ ಮಟ್ಟದ ಚಿಕಿತ್ಸೆಗಾಗಿಯೂ ಇದು ಸಹಕಾರಿಯಾಗಲಿದೆ.
ಸರಕಾರದ ಈ ತೀರ್ಮಾನದಂತೆ ಕಾಸರಗೋಡು ಜನರಲ್ ಆಸ್ಪತ್ರೆ ಮತ್ತು ಕಾಂಞಂಗಾಡು ಚೆಮ್ಮಟಂವಯಲ್‌ನಲ್ಲಿರುವ ಕಾಸರಗೋಡು ಜಿಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಶೀಘ್ರದಲ್ಲೇ ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ಸೌಕರ್ಯ ಲಭ್ಯವಾಗಲಿದೆ. ಈ ಮಧ್ಯೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಯೋಜನೆಯನ್ನು ವಿಸ್ತರಿಸುವ ಕ್ರಮಗಳೂ ನಡೆಯುತ್ತಿವೆ. ಜಿಲ್ಲೆ ಮತ್ತು ಜನರಲ್ ಆಸ್ಪತ್ರೆಗಳ ವಿಭಾಗಗಳಲ್ಲಿ ಸೂಪರ್ ಸ್ಪೆಷಾಲಿಟಿ ಅಗತ್ಯದ ವೈದ್ಯರನ್ನು ನೇಮಿಸಲು ರಾಜ್ಯ ಆರೋಗ್ಯ ಇಲಾಖೆಯಲ್ಲಿ ಸೂಪರ್ ಸ್ಪೆಷಾಲಿಟಿ ಅರ್ಹತೆ ಹೊಂದಿರುವ ವೈದ್ಯರನ್ನು ಒಳಪಡಿಸಿ ವಿಶೇಷ ಕೇಡರ್‌ಗಳಿಗೂ ಈಗಾಗಲೇ ರೂಪು ನೀಡಲಾಗಿದೆ. ಈ ಮೂಲಕ ಎಲ್ಲಾ ಜಿಲ್ಲೆಗಳ ಸೂಪರ್ ಸ್ಪೆಷಾಲಿಟಿ ವಿಭಾಗಗಳಿಗೆ ಅಗತ್ಯದ ವೈದ್ಯರನ್ನು ನೇಮಿಸಲು ಕೂಡ ನಿರ್ಧರಿಸಲಾಗಿದೆ.
ಜಿಲ್ಲೆಯ ರೋಗಿಗಳಿಗೆ ಪ್ರಯೋಜನ
ಕಾಸರಗೋಡು ಜಿಲ್ಲೆಯ ಜನರಲ್ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿಯಾಗಿ ಮೇಲ್ದರ್ಜೆಗೆ ಏರಿಸಿದ್ದಲ್ಲಿ ಜಿಲ್ಲೆಯ ರೋಗಿಗಳಿಗೆ ಹೆಚ್ಚು ಪ್ರಯೋಜನ ದೊರಕಲಿದೆ. ಇದೀಗ ಜಿಲ್ಲೆಯ ರೋಗಿಗಳು ಉನ್ನತ ಮಟ್ಟದ ಚಿಕಿತ್ಸೆಗೆ ಮಂಗಳೂರು, ಮಣಿಪಾಲ ಹಾಗೂ ಪರಿಯಾರಂ ವೈದ್ಯಕೀಯ ಆಸ್ಪತ್ರೆಗಳಿಗೆ ತೆರಳುತ್ತಿದ್ದು, ಕೇರಳ ಸರಕಾರದ ನೂತನ ಯೋಜನೆಯು ಜಾರಿಗೆ ಬಂದಲ್ಲಿ ಅತೀ ಹೆಚ್ಚು ಉಪಕಾರವಾಗಲಿದೆ. ಅಲ್ಲದೆ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಉತ್ತಮ ಚಿಕಿತ್ಸೆ ಕೂಡ ಲಭಿಸಲಿದೆ. ಈ ಮೂಲಕ ಕಾಸರಗೋಡು ಜಿಲ್ಲೆಯು ವೈದ್ಯಕೀಯ ರಂಗದಲ್ಲಿ ಅಭಿವೃದ್ಧಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಹೊಸ ಸೇರ್ಪಡೆ
ಶಾಹೀದ್ ಅಫ್ರಿದಿ ಮಗಳ ಜೊತೆ ಪಾಕ್ ಬೌಲರ್ ಶಹೀನ್ ಅಫ್ರಿದಿ ವಿವಾಹ ನಿಶ್ಚಿತಾರ್ಥ
ಮತ ನೀಡದಿದ್ದರೆ ನೀರು, ವಿದ್ಯುತ್ ಏನೂ ಕೊಡಲ್ಲ.. ಮತದಾರರಿಗೆ ಸಚಿವರ ಬೆದರಿಕೆ
ತೆಕ್ಕಟ್ಟೆ ಮಹಾಲಿಂಗೇಶ್ವರ ದೇಗುಲದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ!
ನಿಮ್ಮ ಗ್ರಹಬಲ: ಈ ರಾಶಿಯವರಿಗೆ ವ್ಯಾಪಾರ ವ್ಯವಹಾರ ರಂಗದಲ್ಲಿ ಅದೃಷ್ಟದ ಆಸರೆ ಸದಾ ಇರುವುದು
75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ