ವಿ. ಮುರಳೀಧರನ್‌, ಕಣ್ಣಂತಾನಂ, ಕುಮ್ಮನಂ ನಿರೀಕ್ಷೆಯಲ್ಲಿ..

Team Udayavani, May 25, 2019, 6:18 AM IST

muralidharan

ಕಾಸರಗೋಡು: ಕೇರಳದಲ್ಲಿ ಈ ಬಾರಿಯಾದರೂ ಖಾತೆ ತೆರೆಯುವ ಬಗ್ಗೆ ಬಹಳಷ್ಟು ನಿರೀಕ್ಷೆಯಿರಿಸಿದ್ದ ಬಿಜೆಪಿಗೆ ಈ ಗುರಿ ಸಾಧಿಸಲು ಸಾಧ್ಯವಾಗದಿದ್ದರೂ, ಈ ಹಿಂದಿನ ಎಲ್ಲ ಚುನಾವಣೆಗಿಂತಲೂ ಅಧಿಕ ಮತಗಳನ್ನು ಪಡೆದು ತನ್ನ ನೆಲೆಯನ್ನು ಭದ್ರಗೊಳಿಸುವ ನಿಟ್ಟಿನಲ್ಲಿ ಸಾಗಿದೆ ಎಂಬುದನ್ನು ಈ ಬಾರಿ ಲಭಿಸಿದ ಮತಗಳ ಅಂಕಿಅಂಶ ಸಾರುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶೇ.15.53 ವೋಟ್‌ ಪಡೆದಿದ್ದು ಈ ಹಿಂದಿನ ವರ್ಷಗಳ ದಾಖಲೆಗಳನ್ನು ಹಿಂದಿಕ್ಕಿದೆ. 2016ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶೇ. 14.93 ಮತ ಪಡೆದಿದ್ದರೆ, 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.10.81 ಮತ ಪಡೆದಿತ್ತು.

ಕೇರಳದಲ್ಲಿ ಅಕೌಂಟ್‌ ತೆರೆಯದಿದ್ದರೂ, ಪ್ರಸ್ತುತ ಲೋಕಸಭೆಯಲ್ಲಿ ಕೇರಳದಿಂದ ಸಚಿವ ಪದವಿಯನ್ನು ಬಿಜೆಪಿ ಕೇರಳ ಘಟಕ ನಿರೀಕ್ಷಿಸಿದೆ.
ಮಿಜೋರಾಂ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿ ತಿರುವನಂತಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಕುಮ್ಮನಂ ರಾಜಶೇಖರನ್‌ ಅವರು ಕೇಂದ್ರ ಸಚಿವರಾಗುವ ಸಾಧ್ಯತೆಯಿದೆ.

ಬಿಜೆಪಿ ಕೇರಳ ರಾಜ್ಯ ಮಾಜಿ ಅಧ್ಯಕ್ಷ ವಿ. ಮುರಳೀಧರನ್‌, ಕೇಂದ್ರ ಸಚಿವ ಅಲ್ಫಾನ್ಸ್‌ ಕಣ್ಣಂತಾನಂ, ಚಲನಚಿತ್ರ ನಟ ಸುರೇಶ್‌ ಗೋಪಿ ರಾಜ್ಯ ಸಭಾ ಸದಸ್ಯರಾಗಿದ್ದಾರೆ.

ಇವರಲ್ಲಿ ವಿ. ಮುರಳೀಧರನ್‌ ಹೊರತುಪಡಿಸಿ ಕಣ್ಣಂತಾನಂ ಮತ್ತು ಸುರೇಶ್‌ ಗೋಪಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ವಿ. ಮುರಳೀಧರನ್‌ ಬಿಜೆಪಿ ಕೇರಳ ಘಟಕದ ಪ್ರಮುಖ ನೇತಾರರಲ್ಲೋರ್ವರಾಗಿದ್ದಾರೆ. ಪ್ರಸ್ತುತ ಮೋದಿ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಕಣ್ಣಂತಾನಂ ಅವರಿಗೆ ಮತ್ತೆ ಸಚಿವ ಹುದ್ದೆ ನೀಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ತಿರುವನಂತಪುರದಲ್ಲಿ ಸ್ಪರ್ಧಿಸಿದ ಕುಮ್ಮನಂ ರಾಜಶೇಖರನ್‌ ಅವರು ಗೆಲುವು ಸಾಧಿಸಿದರೆ ಕೇಂದ್ರ ಸಚಿವರಾಗುವರೆಂದು ಪ್ರಚಾರ ಮಾಡಲಾಗಿತ್ತು. ಆದರೆ ಅವರು ಪರಾಭವಗೊಂಡರೂ ಕಮ್ಮನಂ ಅವರನ್ನು ತಿರಸ್ಕರಿಸಲಾಗದು ಎಂದೇ ಕೇಳಿ ಬರುತ್ತಿದೆ. ಕೇರಳದಲ್ಲಿ ಈ ಬಾರಿ ಒಂದು ಕ್ಷೇತ್ರದಲ್ಲಾದರೂ ಬಿಜೆಪಿ ಗೆಲುವು ಸಾಧಿಸಬಹುದೆಂದು ಕೇಂದ್ರ ನೇತೃತ್ವ ನಿರೀಕ್ಷಿಸಿತ್ತು. ಆದರೆ ಅಕೌಂಟ್‌ ತೆರೆಯಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಸಚಿವ ಸ್ಥಾನ ನೀಡಬಹುದೇ ಎಂಬ ಕುತೂಹಲ ಮೂಡಿದೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.