ಜಿಲ್ಲೆಗೂ ವ್ಯಾಪಿಸಿದ ವರುಣ ತಾಂಡವ:ದೋಣಿ ಮಗುಚಿ ಬೆಸ್ತ ಸಾವು


Team Udayavani, Aug 17, 2018, 6:00 AM IST

16ksde10.jpg

ಕಾಸರಗೋಡು: ಕೇರಳದ ದಕ್ಷಿಣ ಜಿಲ್ಲೆಗಳಲ್ಲಿ ಮಳೆಯ ರೌದ್ರಾವತಾರ ಮುಂದುವರಿಯುತ್ತಿದ್ದು, ಕಾಸರಗೋಡು ಜಿಲ್ಲೆಗೂ ವ್ಯಾಪಿಸಿದೆ. ಕಳೆದ 24 ಗಂಟೆಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಕಡಲ್ಕೊರೆತ ಮತ್ತೆ ಆರಂಭಗೊಂಡಿದೆ. ಜಿಲ್ಲೆಯ ಕೆಲವೆಡೆ ತಗ್ಗು ಪ್ರದೇಶದಲ್ಲಿ ನೀರು ತುಂಬಿಕೊಂಡಿರುವುದರಿಂದ ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಳೆಯ ಆರ್ಭಟದಿಂದ ವಿದ್ಯುತ್‌ ಕಂಬಗಳು ಉರುಳಿ ಬಿದ್ದು ವಿದ್ಯುತ್‌ ಸರಬರಾಜು ಮೊಟಕುಗೊಂಡಿದೆ.

ಕಾಸರಗೋಡಿನ ಚೇರಂಗೈಯಲ್ಲಿ ಮತ್ತೆ ತೀವ್ರ ಕಡಲ್ಕೊರೆತ ಉಂಟಾಗಿದ್ದು, ಐದು ಮನೆಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಚೇರಂಗೈ ಕಡಲ ಕಿನಾರೆ ಯಲ್ಲಿರುವ ಹಲವು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ತೆಂಗಿನ ಮರಗಳು ಧರಾಶಾಯಿಯಾಗಿವೆೆ. ಕೋಟಿಕುಳಂ, ತೃಕ್ಕನ್ನಾಡ್‌ ಮಾಳಿಗೆವಳಪ್ಪು ಕಡಪ್ಪುರ ಮತ್ತು ಗೋಪಾಲ್‌ಪೇಟೆ ಕಡಪ್ಪುರ ಪರಿಸರದಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಈ ಪರಿಸರದ 25 ಕುಟುಂಬಗಳನ್ನು ಫಿಶರೀಸ್‌ ಶಾಲೆ ಮತ್ತು ಕೋಟಿಕುಳಂ ಸರಕಾರಿ ಯು.ಪಿ. ಶಾಲೆಗೆ ಸ್ಥಳಾಂತರಿಸಲಾಗಿದೆ.

ಮಂಜೇಶ್ವರದಲ್ಲಿ ಕಟ್ಟೆಚ್ಚರ 
ಮಂಜೇಶ್ವರ ಸಹಿತ ವಿವಿಧೆಡೆ ಸಮುದ್ರ ಕಿನಾರೆಯಲ್ಲಿ ಪೊಲೀಸರು ಹಾಗೂ ಕರಾವಳಿ ಪೊಲೀಸರು ಕಟ್ಟೆಚ್ಚರ ಪಾಲಿಸುತ್ತಿದ್ದಾರೆ. ಉಪ್ಪಳ ಬಳಿಯ ಹನುಮಾನ್‌ ನಗರ, ಮಣಿಮುಂಡ, ಮೂಸೋಡಿ, ಕಣ್ವತೀರ್ಥ ಮೊದಲಾದೆಡೆಗಳಲ್ಲಿ ಪೊಲೀಸರು ಗಸ್ತು ತೀವ್ರಗೊಳಿಸಿದ್ದಾರೆ. ಸಮುದ್ರಕ್ಕೆ ತೆರಳದಂತೆ ಬೆಸ್ತರಿಗೆ ಮುನ್ನೆಚ್ಚರಿಕೆ ನೀಡಿಲಾಗಿದೆ. ಈ ಸಮುದ್ರ ಕಿನಾರೆಯಲ್ಲಿ ಇತ್ತೀಚೆಗೆ ಭಾರೀ ಕಡಲ್ಕೊರೆತ ಉಂಟಾಗಿತ್ತು. ಕಾಸರಗೋಡು ಜಿಲ್ಲೆಯ ಬಹುತೇಕ ಹೊಳೆಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳೆಲ್ಲ ನೀರಿನಿಂದ ಆವೃತವಾಗಿವೆ. ಜಿಲ್ಲೆಯಲ್ಲಿ ಅಪಾಯಕಾರಿ ಸ್ಥಿತಿಯಿದ್ದು, ಮುಂಜಾಗ್ರತೆ ವಹಿಸುವಂತೆ ವಿನಂತಿಸಲಾಗಿದೆ.

ದೋಣಿ ಮಗುಚಿ ಸಾವು 
ಪಯ್ಯನ್ನೂರು ರಾಮಂತಳಿಯಲ್ಲಿ ಮೀನುಗಾರಿಕಾ ದೋಣಿ ಮಗುಚಿ ಮೀನುಗಾರಿಕೆ ನಡೆಸುತ್ತಿದ್ದ ರಾಮಂತಳಿ ಕುನ್ನುಂಪುರ ಕಂಡೋತ್ತ್ ಪಂಡಾರವಳಪ್ಪಿಲ್‌ ಭಾಸ್ಕರನ್‌ (55) ಸಾವಿಗೀಡಾದರು. ಆ.15 ರಂದು ರಾತ್ರಿ ಹೊಳೆಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಅಪಾಯ ಸಂಭವಿಸಿದೆ. ಜತೆಯಲ್ಲಿದ್ದ ಬಾಲನ್‌ ಈಜಿ ದಡ ಸೇರಿ ದ್ದಾರೆ. ಹೊಳೆ ಬದಿಯಲ್ಲಿ ಭಾಸ್ಕರನ್‌ ಅವರ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಯಿತು.

ಉಕ್ಕೇರಿದ ಚಂದ್ರಗಿರಿ ಹೊಳೆ 
ಚಂದ್ರಗಿರಿ ಹೊಳೆ ಉಕ್ಕಿ ಹರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಹೊಳೆ ದಡದ ಸುಮಾರು 25 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕಾಸರಗೋಡು ಕೊರ ಕ್ಕೋಡಿನ ತಗ್ಗು ಪ್ರದೇಶದಲ್ಲಿ ವಾಸಿಸುವ 25 ಕುಟುಂಬಗಳನ್ನು ಕಂದಾಯ ಇಲಾಖೆ, ಪೊಲೀಸ್‌, ಅಗ್ನಿ ಶಾಮಕ ದಳ ಅಧಿಕಾರಿಗಳು ಸಂಯುಕ್ತವಾಗಿ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸಿದರು. ಕರ್ನಾಟಕದ ವಿವಿಧೆಡೆ ಭಾರೀ ಮಳೆಯಾಗುತ್ತಿರುವುದರಿಂದ ಚಂದ್ರಗಿರಿ ಹೊಳೆಯಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದೆ. ಚಂದ್ರಗಿರಿ ಹೊಳೆಯ ಇಕ್ಕೆಡೆಗಳಲ್ಲಿ ವಾಸಿಸುವ ಕುಟುಂಬಗಳಿಗೆ ಜಾಗೃತೆ ಪಾಲಿಸುವಂತೆಯೂ ಸೂಚನೆ ನೀಡಲಾಗಿದೆ. ತಳಂಗರೆ ಪಡಿಂಞಾರ್‌ ಪ್ರದೇಶದಲ್ಲೂ ನೀರಿನ ಮಟ್ಟ ಏರುತ್ತಿದ್ದು, ರಸ್ತೆ ನೀರಿನಲ್ಲಿ ಮುಳುಗಿದೆ.

ಮನೆ ಕುಸಿತ 
ಮಾನ್ಯದ ಲಕ್ಷಂವೀಡು ನಿವಾಸಿ ಸದಾನಂದ ಅವರ ಮನೆ ಕುಸಿದು ಬಿದ್ದಿದೆ. ಮನೆ ಕುಸಿಯುತ್ತಿರುವ ಸದ್ದು ಕೇಳಿ ಮನೆಯಿಂದ ಹೊರಗೆ ಓಡಿದ್ದರಿಂದ ಮನೆ ಮಂದಿ ಅಪಾಯದಿಂದ ಪಾರಾದರು. ಬೇಳ ಗ್ರಾಮಾಧಿಕಾರಿ ಮನೆ ಸಂದರ್ಶಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಹೊಸದುರ್ಗ ತಾಲೂಕಿನ ಕುನ್ನುಂಗೈ- ಚಿತ್ತಾರಿಕಲ್‌ ರಸ್ತೆ ಮತ್ತು ಕುನ್ನುಂಗೈ ಭೀಮ ನಡಿ ಸಂಪರ್ಕ ಪ್ರದೇಶದಲ್ಲಿ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದು ಸಾರಿಗೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕಾನತ್ತೂರಿನಲ್ಲಿ ಮರಗಳು ಉರುಳಿ ಮನೆ ಹಾಗೂ ಅಂಗಡಿಗೆ ಹಾನಿಗೀಡಾಗಿದೆ. ಅಲ್ಲಲ್ಲಿ ಮರಗಳು ಉರುಳಿಬಿದ್ದು ವಿದ್ಯುತ್‌ ಸಂಪರ್ಕ ಕಡಿದುಕೊಂಡಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.