ನಾಸ್ತಿಕರಿಗೆ ಅವಕಾಶ ನೀಡಿದ್ದಕ್ಕೆ ಮತದಾರರ ಉತ್ತರ: ಸಜೀವನ್‌

Team Udayavani, Jun 30, 2019, 5:35 AM IST

nastika

ಕುಂಬಳೆ: ಶಬರಿಮಲೆ ಶ್ರೀ ಅಯ್ಯಪ್ಪನ ಬ್ರಹ್ಮಚರ್ಯೆಯನ್ನು ಕೆಡಿಸಲು ನಾಸ್ತಿಕ ಯುವತಿಯರನ್ನು ಬಲವಂತವಾಗಿ ಕ್ಷೇತ್ರಕ್ಕೆ ಪ್ರವೇಶಿಸಲು ಮುಂದಾದ ಎಡರಂಗ ಸರಕಾರಕ್ಕೆ ಮತದಾರರು ಸೂಕ್ತ ಉತ್ತರ ನೀಡಿದ್ದಾರೆ.

ಸಿ.ಪಿ.ಎಂ.ಪಕ್ಷದ ಹಿಂಸೆಯ ಭಯದಲ್ಲಿ ಅಭಯದ ಆಶ್ರಯ ಪಡೆಯಲು ರಾಜ್ಯದ ನಿಷ್ಪಕ್ಷ ಮತದಾರರು ಕೇರಳದಲ್ಲಿ ಐಕ್ಯರಂಗಕ್ಕೆ ಮತ ನೀಡಿದ್ದಾರೆ. ಅಲ್ಲದೆ ಸಿಪಿಎಂ ಮತಗಳು ಐಕ್ಯರಂಗದ ಪಾಲಾದವು.ಈ ಕಾರಣದಿಂದ ರಾಜ್ಯದಲ್ಲಿ ಮಾತ್ರ 20 ರಲ್ಲಿ 19 ಸ್ಥಾನ ಪಡೆಯಲು ಐಕ್ಯರಂಗಕ್ಕೆ ಸಾಧ್ಯವಾಗಿದೆ ಎಂಬುದಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ವಿ.ಕೆ. ಸಜೀವನ್‌ ಹೇಳಿದರು.

ಪೈವಳಿಕೆ ಪಂಚಾಯತ್‌ ಬಿಜೆಪಿ ಸಮಿತಿ ವತಿಯಿಂದ ಬಾಯಾರು ಪದವಿನಲ್ಲಿ ಜರಗಿದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದ 6 ರಾಜ್ಯಗಳಲ್ಲಿ 100 ಶೇಕಡಾ, 13 ರಾಜ್ಯಗಳಲ್ಲಿ 50 ಶೇಕಡಾ ಬಿಜೆಪಿ ಮತ ಪಡೆದಿದೆ.ಕಾಂಗ್ರೆಸ್‌ ಆಳ್ವಿಕೆ ಇರುವ ವ ರಾಜಸ್ಥಾನ, ಮಧ್ಯಪ್ರದೇಶಗಳಲ್ಲಿ ಬಿಜೆಪಿ ಅಜೇಯ ಜಯಗಳಿಸಿದೆ. 8 ಶೇಕಡಾ ಅಲ್ಪಸಂಖ್ಯಾಕ‌ರ ಮತದೊಂದಿಗೆ ದೇಶದಾದ್ಯಂತ 28 ಕೋಟಿ ಮತ ಪಡೆದು 303 ಸ್ಥಾನಗಳೊಂದಿಗೆ ಪಕ್ಷ ಅಧಿಕಾರಕ್ಕೇರಿದೆ. ಪ್ರದಾನಿ ನರೇಂದ್ರ ಮೋದಿಯವರ ಆಡಳಿತವನ್ನು ಅಪಪ್ರಚಾರದ ಮೂಲಕ ಸೋಲಿಸಲು ಪ್ರತಿಪಕ್ಷ ಮತ್ತು ಕೆಲವು ಮಾಧ್ಯಗಳು ಶ್ರಮಿಸಿದರೂ ವಿಫಲವಾಗಿ ಪ್ರದಾನಿ ಮೋದಿಯವರು ಮತ್ತೆ ವಿಶ್ವಮಟ್ಟದಲ್ಲಿ ಸಮರ್ಥ ನಾಯಕನಾಗಿ ಮಿಂಚಿ ಜನಪ್ರಿಯರಾಗಿರುವರು.ಬಡವರಿಗೆ ಮನೆ,ಶೌಚಾಲಯ,ವಿದ್ಯುತ್‌,ಗ್ಯಾಸ್‌, ವಿಮಾ ಯೋಜನೆಗಳನ್ನು ನೀಡಿ ಜನಪ್ರಿಯರಾಗಿರುವರು.ಮುಂದಿನ ದಿನಗಳಲ್ಲಿ ದೇಶದಾದ್ಯಂತ ಎಲ್ಲರಿಗೂ ಕುಡಿಯುವ ನೀರು ಮತ್ತು ಕೃಷಿಕರಿಗೆ ಇನ್ನಷ್ಟು ಯೋಜನೆಗಳನ್ನು ಹಮ್ಮಿಕೊಂಡಿರುವುದಾಗಿ ಹೇಳಿದರು.

ಪೈವಳಿಕೆ ಪಂಚಾಯತ್‌ ಬಿಜೆಪಿ ಸಮಿತಿ ಅಧ್ಯಕ್ಷ ಸದಾಶಿವ ಚೇರಾಲ್ ಅಧ್ಯಕ್ಷತೆ ವಹಿಸಿದ ಸಭೆಯಲ್ಲಿ ಯುವಮೋರ್ಚಾ ರಾಜ್ಯ ಸಮಿತಿ ಸದಸ್ಯ ಪಿ.ಆರ್‌.ಸುನಿಲ್ ಅವರು ಮಾತನಾಡಿದರು.

ಪಕ್ಷದ ರಾಜ್ಯ ಸಮಿತಿ ಸದಸ್ಯ ನ್ಯಾಯವಾದಿ ವಿ.ಬಾಲಕೃಷ್ಣ ಶೆಟ್ಟಿ ,ರಾಜ್ಯ ಕೌನ್ಸಿಲ್ ಸದಸ್ಯೆ ಸರೋಜಾ ಆರ್‌.ಬಲ್ಲಾಳ್‌,ಬಿಜೆಪಿ ಮಂಡಲ ಅಧ್ಯಕ್ಷ ಕೋಳಾರು ಸತೀಶ್ಚಂದ್ರ ಭಂಡಾರಿ, ಯುವಮೋರ್ಚಾ ಮಂಡಲ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಚ್.ಸತ್ಯಶಂಕರ ಭಟ್,ಜಿಲ್ಲಾ ಸಮಿತಿ ಸದಸ್ಯ ಎಂ.ಹರಿಶ್ಚಂದ್ರ ಮಂಜೇಶ್ವರ ಉಪಸ್ಥಿತರಿದ್ದರು.

ಎ.ಸುಬ್ರಹ್ಮಣ್ಯ ಭಟ್ ಸ್ವಾಗತಿಸಿದರು.ಗೋಪಾಲ ಸಪಲ್ಯ ವಂದಿಸಿದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.