50,000 ಗಿಡಗಳು ಸಿದ್ಧ ಮೂಡುಬಿದಿರೆ ಕಡಲಕೆರೆ ನರ್ಸರಿ

Team Udayavani, Jun 9, 2020, 5:52 AM IST

50,000 ಗಿಡಗಳು ಸಿದ್ಧ ಮೂಡುಬಿದಿರೆ ಕಡಲಕೆರೆ ನರ್ಸರಿ

ಮೂಡುಬಿದಿರೆ: ಅರಣ್ಯ ಇಲಾಖೆಯ ಮಂಗಳೂರು ವಲಯ ಸಾಮಾಜಿಕ ಅರಣ್ಯ ವಿಭಾಗವು 2020-21ನೇ ಸಾಲಿಗೆ ಸಾರ್ವಜನಿಕರ ಅನುಕೂಲಕ್ಕಾಗಿ ರಿಯಾಯಿತಿ ದರದಲ್ಲಿ ಸಾರ್ವಜನಿಕ ವಿತರಣೆಗಾಗಿ 50,000 ಗಿಡಗಳನ್ನು ಮೂಡುಬಿದಿರೆ ಕಡಲಕೆರೆ ನರ್ಸರಿಯಲ್ಲಿ ಸಿದ್ಧಗೊಳಿಸಿದೆ.

ಇದರಲ್ಲಿ 10 ಹೆಕ್ಟೇರ್‌ ಬ್ಲಾಕ್‌ ನೆಡುತೋಪು ಹಾಗೂ 8 ಕಿ. ಮೀ. ರಸ್ತೆ ಬದಿ ನಾಟಿ ಉದ್ದೇಶವೂ ಸೇರಿದೆ. ಸಾರ್ವಜನಿಕ ಉದ್ದೇಶಕ್ಕಾಗಿ ಮಹಾಗನಿ, ಬೇಂಗ, ಸಾಗುವಾನಿ, ತಾರೆಯಂಥ ನಾಟಾ ಉತ್ಪಾದಿಸುವ ಗಿಡಗಳು, ಹಲಸು, ಮಾವು, ಗೇರು, ನೇರಳೆ, ಪೇರಳೆ, ನೆಲ್ಲಿಯಂತಹ ಹಣ್ಣಿನ ಗಿಡಗಳು ಸಹಿತ ಸುಮಾರು 43,000 ಗಿಡಗಳಿದ್ದು, ಸಾರ್ವಜನಿಕರು ರಿಯಾಯಿತಿ ದರದಲ್ಲಿ ಲಭಿಸುವ ಈ ಗಿಡಗಳನ್ನು ಕಚೇರಿಗೆ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದಾಗಿದೆ.

ಉದ್ಯೋಗ ಖಾತರಿ ಯೋಜನೆಯ ಲಾಭ ಪಡೆಯಿರಿ
ಕೋವಿಡ್-19 ಮಹಾಮಾರಿಯ ಕಾರಣ, ದೂರದ ಊರುಗಳಿಂದ ಸ್ವಗ್ರಾಮಕ್ಕೆ ಮರಳಿರುವ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕುಗಳ ವಿವಿಧ ಗ್ರಾ.ಪಂ.ಗಳ ಫಲಾನುಭವಿಗಳಿಗೆ ಈ ಗಿಡಗಳನ್ನು ನೀಡುವ ಜತೆಗೆ ಅವುಗಳ ನಾಟಿ ಕೆಲಸಕ್ಕೆ ಕೂಲಿ ಪಾವತಿ ಮಾಡಲಾಗುತ್ತದೆ. ಈ ಯೋಜನೆಯಡಿ ಗಿಡಗಳನ್ನು ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳು ಸಂಬಂಧಪಟ್ಟ ಗ್ರಾ.ಪಂ.ಗಳಲ್ಲಿ ಈ ಯೋಜನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಉದ್ಯೋಗ ಚೀಟಿ ಪಡೆದು, ತಮ್ಮ ಹೆಸರು, ವಿಳಾಸ ಹಾಗೂ ಸ್ಥಳದ ವಿವರಗಳೊಂದಿಗೆ (ಪಹಣಿ ಪ್ರತಿ), ಆಧಾರ್‌ ಕಾರ್ಡ್‌ ಪ್ರತಿ, ಉದ್ಯೋಗ ಚೀಟಿ (ಜಾಬ್‌ ಕಾರ್ಡ್‌)ಯ ಪ್ರತಿ ಹಾಗೂ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ ಅಥವಾ ಬಿ.ಪಿ.ಎಲ್‌. ಕಾರ್ಡ್‌ ಪ್ರತಿ (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ತಮ್ಮ ಪ್ರಮಾಣ ಪತ್ರದ ಪ್ರತಿ) ಇತ್ಯಾದಿ ತಮಗೆ ಬೇಕಾಗಿರುವ ಗಿಡಗಳ ವಿವರಗಳನ್ನು ನಮೂದಿಸಿ, ವಲಯ ಅರಣ್ಯಾಧಿಕಾರಿಗಳು, ಸಾಮಾಜಿಕ ಅರಣ್ಯ ವಿಭಾಗ, ಮಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.

ಬಳಿಕ ಗಿಡಗಳನ್ನು ಮೂಡುಬಿದಿರೆ ಕಡಲಕೆರೆ ಸಸ್ಯ ಕ್ಷೇತ್ರದಿಂದ ಪಡೆದುಕೊಳ್ಳಬಹುದಾಗಿದೆ ಎಂದು ಸಾಮಾಜಿಕ ಅರಣ್ಯ ವಲಯ ಮಂಗಳೂರು ಇಲ್ಲಿನ ವಲಯ ಅರಣ್ಯಾಧಿಕಾರಿಯವರ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.