ಎ. 27ರಂದು ದ.ಕ.ಕ್ಕೆ ರಾಹುಲ್‌: ರೈ

Team Udayavani, Apr 25, 2018, 12:44 PM IST

rai.jpg

ಮಂಗಳೂರು: ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ದ್ವಿತೀಯ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದು, ಎ. 27ರಂದು ಬೆಳಗ್ಗೆ 10ಕ್ಕೆ ಬಿ.ಸಿ. ರೋಡ್‌ನ‌ಲ್ಲಿ ಕಾರ್ಯಕರ್ತರ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ಬಳಿಕ ಧರ್ಮಸ್ಥಳಕ್ಕೆ ತೆರಳುತ್ತಾರೆ ಎಂದು ಸಚಿವ ಬಿ. ರಮಾನಾಥ ರೈ ಹೇಳಿದರು.

ಮಂಗಳವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ರಾಹುಲ್‌ ಬಿ.ಸಿ. ರೋಡಿನ ಜೋಡುಮಾರ್ಗ ಉದ್ಯಾನ ವನದ ಬಳಿ ಮೈದಾನದಲ್ಲಿ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಧರ್ಮಸ್ಥಳಕ್ಕೆ ತೆರಳಿ ದೇವರ ದರ್ಶನ ಪಡೆಯುವರು. ಬಳಿಕ ಕೊಡಗು ಜಿಲ್ಲೆಗೆ ತೆರಳುವರು. ಅವರ ಭೇಟಿಯ ಸಂದರ್ಭ ವಿಭಾಗ ಮಟ್ಟದ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆಯಾಗಲಿದೆ ಎಂದರು.

ಈ ವಿಧಾನಸಭಾ ಚುನಾವಣೆ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ. ಕಾಂಗ್ರೆಸ್‌ ನಿರಂತರವಾಗಿ ದುರ್ಬಲರ ಪರ ಕೆಲಸ ಮಾಡಿದ್ದು, ಜನತೆ ಬೆಂಬಲಿಸುವರು. ಹೀಗಾಗಿ ಎಂಟೂ ಕ್ಷೇತ್ರಗಳನ್ನೂ ಕಾಂಗ್ರೆಸ್‌ ಗೆಲ್ಲಲಿದೆ ಎಂದರು.
ಕರಾವಳಿ ಸಹಿತ ರಾಜ್ಯದಲ್ಲಿ ಬಿಜೆಪಿ ಒಡೆದ ಮನೆಯಾಗಿದ್ದು, ಬಿಜೆಪಿಯ ಹಲವು ನಾಯಕರು ಕಾಂಗ್ರೆಸನ್ನು ಬೆಂಬಲಿಸಲಿದ್ದಾರೆ. ನಾನು ಎಂದಿಗೂ ಜಾತ್ಯತೀತ ನಿಲುವಿನೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ಮತೀಯ ವಾದವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದರು. 

ಸಂಸದ ನಳಿನ್‌ ಅವರು ನನಗೆ ವಿಶ್ರಾಂತಿ ಕೊಡುವ ಮಾತಾಡುತ್ತಿದ್ದಾರೆ. ಆದರೆ ಈಗ ಅವರಿಗೆ ಬಿಜೆಪಿಯವರೇ ವಿಶ್ರಾಂತಿ ಕೊಡಲಿದ್ದಾರೆ ಎಂದು ವ್ಯಂಗ್ಯವಾಡಿದರು. 

ರೈ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ಅನುದಾನವನ್ನೆಲ್ಲ ಬಂಟ್ವಾಳಕ್ಕೆ ಸುರಿಯುತ್ತಿದ್ದಾರೆ ಎಂದು ನಳಿನ್‌ ಹಿಂದೆ ಹೇಳುತ್ತಿದ್ದರು. ಆದರೆ ಈಗ ಬಂಟ್ವಾಳದಲ್ಲಿಯೂ ರೈ ಅಭಿವೃದ್ಧಿ ಮಾಡಿಲ್ಲ ಎನ್ನುತ್ತಿದ್ದಾರೆ. ಅವರ ಹೇಳಿಕೆಗಳಲ್ಲೇ ಗೊಂದಲ ಇದೆ ಎಂದ ಅವರು, ಟಿಕೆಟ್‌ ಹಂಚಿಕೆ ಕುರಿತು ಕಾಂಗ್ರೆಸ್‌ನಲ್ಲಿ ಗೊಂದಲಗಳಿಲ್ಲ ಎಂದು ಸ್ಪಷ್ಪಡಿಸಿದರು. ಕೆಪಿಸಿಸಿ ಕಾರ್ಯದರ್ಶಿ ಯು.ಬಿ. ವೆಂಕಟೇಶ್‌, ಪ್ರಮುಖರಾದ ಐವನ್‌ ಡಿ’ಸೋಜಾ, ಹರೀಶ್‌ ಕುಮಾರ್‌, ರಾಜಶೇಖರ್‌ ಕೋಟ್ಯಾನ್‌, ಇಬ್ರಾಹಿಂ ಕೋಡಿಜಾಲ್‌, ಧನಂಜಯ ಅಡ³ಂಗಾಯ, ಆರ್‌.ಕೆ. ಪೃಥ್ವಿರಾಜ್‌, ಮಮತಾ ಗಟ್ಟಿ, ಭಾಸ್ಕರ್‌ ಕೆ, ಬಿ.ಎಚ್‌. ಖಾದರ್‌, ಎ.ಸಿ. ವಿನಯರಾಜ್‌, ಶಶಿಧರ್‌ ಹೆಗ್ಡೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.