ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ
Team Udayavani, Sep 26, 2020, 9:32 AM IST
ಮಂಗಳೂರು: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ನೋಟಿಸ್ ಪಡೆದಿರುವ ನಟಿ, ನಿರೂಪಕಿ ಅನುಶ್ರೀ ಇಂದು ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ವಿಚಾರಣೆಗೆ ಹಾಜರಾಗಲು ಸೆ.29ರ ಮೊದಲು ಹಾಜರಾಗುವಂತೆ ಪೊಲೀಸರು ನೋಟಿಸ್ನಲ್ಲಿ ತಿಳಿಸಿದ್ದರು. ಆದರೆ ಅನುಶ್ರೀ ಸೆ.25ರಂದೇ ಹಾಜರಾಗುವುದಾಗಿ ತಿಳಿಸಿದ್ದರು. ಅದರಂತೆ ಪೊಲೀಸರು ಅನುಶ್ರೀ ಶುಕ್ರವಾರ ವಿಚಾರಣೆಗೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದರು. ಮಾಧ್ಯಮದವರು ಕೂಡ ಎಸಿಪಿ ಕಚೇರಿ ಎದುರು ಅನುಶ್ರೀ ಆಗಮನದ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದರು. ಆದರೆ ಸಂಜೆಯವರೆಗೂ ಅನುಶ್ರೀ ವಿಚಾರಣೆಗೆ ಬಂದಿರಲಿಲ್ಲ.
ಬೆಳಗ್ಗೆಯೇ ಸಿಸಿಬಿ ಕಚೇರಿಗೆ ಆಗಮಿಸಿದ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀಯನ್ನು ಡಿಸಿಪಿ ವಿನಯ್ ಗಾಂವ್ ಕರ್, ಸಿ ಐ ಶಿವಪ್ರಕಾಶ್ ಅವರ ಪಣಂಬೂರು ಸಿಸಿಬಿ ತಂಡ ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ: ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ
ಸಿಸಿಬಿ ಹಾಗೂ ಎಕಾನಮಿಕ್ ಮತ್ತು ನಾರ್ಕೊಟಿಕ್ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ಸೇವನೆ ಮತ್ತು ಮಾರಾಟ ಆರೋಪದಲ್ಲಿ ಕೊರಿಯೋಗ್ರಾಫರ್ ಕಿಶೋರ್ ಅಮನ್ ಮತ್ತು ಅಕೀಲ್ ನೌಶೀಲ್ ನನ್ನು ಬಂಧಿಸಿದ್ದರು. ಅನಂತರ ತರುಣ್ ಎಂಬವರನ್ನು ಕೂಡ ವಿಚಾರಣೆ ನಡೆಸಿದ್ದರು. ಈ ಸಂದರ್ಭ ಅನುಶ್ರೀಗೆ ಇವರ ಜತೆ ನಂಟು ಇರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಅನುಶ್ರೀಗೆ ನೋಟಿಸ್ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ