ಮಂಗಳೂರು: ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತ್ಯು
Team Udayavani, Jan 1, 2023, 10:30 AM IST
ಮಂಗಳೂರು: ಬಿಎಸ್ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಜ. 1 ರಂದು ನಡೆದಿದೆ.
ಕುಲಶೇಖರ ಉಮಿಕಾನ ನಿವಾಸಿ, ಬಿಎಸ್ಎಫ್ ಯೋಧ ಹರೀಶ್ ಕುಮಾರ್ (43) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ 21 ವರ್ಷಗಳಿಂದ ಅವರು ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 142 ನೇ ಬಟಾಲಿಯನ್ ಒರಿಸ್ಸಾದಲ್ಲಿ ಕರ್ತವ್ಯದಲ್ಲಿದ್ದು, ರಜೆಗಾಗಿ ಊರಿಗೆ ಬಂದಿದ್ದ ಸಮಯ ನಿನ್ನೆ (ಡಿ. 31) ಹೃದಯಾಘಾತವಾಗಿದ್ದು, ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜ.1ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, 6 ವರ್ಷದ ಪುತ್ರ ಹಾಗೂ ಒಂದುವರೆ ವರ್ಷದ ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?