ಈಗಲೂ ನಡೆಯುತ್ತಿದೆ ಬಾಲ್ಯವಿವಾಹ: ಡಿಸಿಯಿಂದ ಕಠಿನ ಕ್ರಮದ ಎಚ್ಚರಿಕೆ !

Team Udayavani, Sep 8, 2020, 6:00 AM IST

ಈಗಲೂ ನಡೆಯುತ್ತಿದೆ ಬಾಲ್ಯವಿವಾಹ: ಡಿಸಿಯಿಂದ ಕಠಿನ ಕ್ರಮದ ಎಚ್ಚರಿಕೆ !

ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಈಗಲೂ ಬಾಲ್ಯವಿವಾಹ ಕಂಡುಬರುತ್ತಿದೆ. ನಿಗದಿತ ಪ್ರಾಯಕ್ಕೆ ಮೊದಲು ಮಕ್ಕಳ ವಿವಾಹ ನಡೆಸಿದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಹೆತ್ತವರಷ್ಟೇ ತಪ್ಪಿತಸ್ಥರಲ್ಲ
ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದರೆ, ಮಕ್ಕಳ ಪಾಲಕರು, ಮದುವೆ ಹಾಲ್‌ ಅಥವಾ ಕಲ್ಯಾಣ ಮಂಟಪಗಳ ಮುಖ್ಯಸ್ಥರು, ಆಹ್ವಾನ ಪತ್ರಿಕೆ ಮುದ್ರಿಸಿದ ಪ್ರಿಂಟಿಂಗ್‌ ಪ್ರಸ್‌, ಧಾರ್ಮಿಕ ವಿಧಿಗಳನ್ನು ನೆರವೇರಿಸಿದ ವ್ಯಕ್ತಿಗಳ ವಿರುದ್ಧವೂ ಕೇಸು ದಾಖಲಿಸಲಾಗುವುದು. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡಬಾರದು. ಇಂತಹ ಮಾಹಿತಿ ಬಂದರೆ ಕೂಡಲೇ ಅದನ್ನು ತಡೆಗಟ್ಟಬೇಕು ಎಂದರು.

ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಮಾಹಿತಿ ಗಮನಕ್ಕೆ ಬಂದಿದೆ. ಆದುದ ರಿಂದ ಸಂಬಂಧಪಟ್ಟ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆ ಯರಿಂದ ಆಯಾ ವ್ಯಾಪ್ತಿಯಲ್ಲಿ ಮಾಹಿತಿ ಪಡೆದುಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕೇಸು ದಾಖಲಿಸಬೇಕು ಎಂದು ತಿಳಿಸಿದರು.

ಪಿಂಚಣಿ ವಂಚಿತರಾಗಕೂಡದು
ಜಿಲ್ಲೆಯಲ್ಲಿ ವಿಧವೆಯರು ಪಿಂಚಣಿ ವಂಚಿತರಾಗ ಬಾರದು. ಈ ನಿಟ್ಟಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರತೀ ಅಂಗನವಾಡಿ ಕಾರ್ಯಕರ್ತೆಯಿಂದ ಮಾಹಿತಿ ಪಡೆದು ಕೂಡಲೇ ವರದಿ ನೀಡಬೇಕು. ಸರಕಾರ ಪೂರೈಸಿದ ಸ್ಯಾನಿಟರಿ ಪ್ಯಾಡ್‌ಗಳನ್ನು ಎಲ್ಲ ಶಾಲಾ ಹೆಣ್ಣು ಮಕ್ಕಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವಿತರಿಸಿ ವರದಿ ಒಪ್ಪಿಸಬೇಕು. ಬಳಸಿ ಎಸೆಯಲು ತ್ಯಾಜ್ಯ ಸಂಗ್ರಹಣಾ ತೊಟ್ಟಿ ಮತ್ತು ಸುಡುವಿಕೆ ಯಂತ್ರ ಸರಿಯಾಗಿದೆಯೇ ಎಂದು ಪರಿಶೀಲಿಸಬೇಕು. ಹೆಣ್ಣು ಮಕ್ಕಳು ಶಾಲೆಗೆ ಗೈರಾಗುವುದನ್ನು ತಪ್ಪಿಸಲು ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಕಾರ್ಯ ಕ್ರಮಗಳನ್ನು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಮಕ್ಕಳನ್ನು ದತ್ತು ಪಡೆದು
ಕೊಳ್ಳುವ ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೆನ್ನಿ ಡಿಸೋಜಾ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಶಿಲ್ಪಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಸ್ಮಾನ್‌ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹಧನ
2019-20ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ 34 ವಿದ್ಯಾರ್ಥಿನಿಯರಿಗೆ ತಲಾ 5,000ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಶೇ. 100 ಫಲಿತಾಂಶ ದಾಖಲಿಸಿದ ಎಲ್ಲ ವಿದ್ಯಾರ್ಥಿನಿಯರು ಪಿಯುಸಿ ವಿದ್ಯಾಭ್ಯಾಸ ಮುಂದುವರಿಸಿರುವ 34 ಪ್ರೌಢಶಾಲೆಗಳಿಗೆ 5,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಗರಿಷ್ಠ ಹೆಣ್ಣು ಮಕ್ಕಳು ಜನಿಸಿದ ಜಿಲ್ಲೆಯ 5 ಗ್ರಾ.ಪಂ.ಗಳಿಗೆ ತಲಾ 5,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಮಹಿಳಾ ಶಕ್ತಿ ಕೇಂದ್ರದ ಮೂಲಕ ಗೊಂಚಲು ಕಾರ್ಯಕ್ರಮ ಹಾಗೂ ಇನ್ನಿತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಸ್ಮಾನ್‌ ಸಭೆಗೆ ತಿಳಿಸಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.