ಅಭಿವೃದ್ಧಿಯತ್ತ ಚಿತ್ರಾಪುರ ಕಡಲತೀರ

4 ಕೋ.ರೂ.ವೆಚದಲ್ಲಿ ವಿವಿಧ ಕಾಮಗಾರಿ

Team Udayavani, Oct 9, 2022, 11:49 AM IST

9

ಸುರತ್ಕಲ್‌: ಪ್ರವಾಸೋದ್ಯಮ ಕೇಂದ್ರವಾದ ಚಿತ್ರಾಪುರ ಕಡಲ ತೀರ ಅಭಿವೃದ್ಧಿಯತ್ತ ಸಾಗಿದ್ದು, ಕರಾವಳಿಯ ಪ್ರತಿಷ್ಠಿತ ಪಣಂಬೂರು ಬೀಚ್‌ನ ಅನತಿ ದೂರದಲ್ಲಿರುವ ಬೀಚ್‌ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹತ್ತಿರದಲ್ಲಿದೆ.

ಅಂದಾಜು 4 ಕೋ.ರೂ. ವೆಚ್ಚದಲ್ಲಿ ಹೆದ್ದಾರಿಯಿಂದ ಬೀಚ್‌ಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ವಿಸ್ತರಣೆ, ಕಾಂಕ್ರೀಟ್‌ ಕಾಮಗಾರಿ, ತಡೆಗೋಡೆ ಮತ್ತಿತರ ಕೆಲಸ ಕಾರ್ಯ, ಬೀದಿ ದೀಪದ ಅಳವಡಿಕೆ ನಡೆಯಲಿದೆ.

ಮೀನುಗಾರಿಕೆಗೆ ಅನುಕೂಲ

ಈ ಕಡಲತೀರ ನಾಡದೋಣಿ ಮೀನು ಗಾರಿಕೆಗೂ ಅನುಕೂಲ ಕಲ್ಪಿಸಿದೆ. ಕಡಲಿನ ಉದ್ದಕ್ಕೂ ಮೀನುಗಾರಿಕೆ ರಸ್ತೆಯಿದ್ದು, ಈ ರಸ್ತೆಯ ಮೂಲಕ ಸಮುದ್ರ ತೀರದ ಉದ್ದಕ್ಕೂ ಸುರತ್ಕಲ್‌ವರೆಗೆ ಪ್ರಯಾಣಿಸಬಹುದಾಗಿದೆ.

ಬೀಚ್‌ ಟೂರಿಸಂಗೆ ಹೊಸ ಕೇಂದ್ರವಾಗಿ ಸೇರ್ಪಡೆ

ಸಮುದ್ರ ತೀರದ ಉದ್ದಕ್ಕೂ ಹಸುರು, ತೆಂಗಿನ ಮರಗಳ ಸಾಲು ಸಾಲು, ಉತ್ತಮ ಗಾಳಿ ಮನಸ್ಸಿಗೆ ಮುದ ನೀಡುತ್ತವೆ. ಮೂಲಸೌಕರ್ಯ ಅಭಿವೃದ್ಧಿಯ ಬಳಿಕ ಪುಣ್ಯಕ್ಷೇತ್ರ ಪ್ರವಾಸೋದ್ಯಮ ಹಾಗೂ ಬೀಚ್‌ ಟೂರಿಸಂಗೆ ಹೊಸ ಕೇಂದ್ರವಾಗಿ ಸೇರ್ಪಡೆ ಆಗುವುದರಲ್ಲಿ ಸಂಶಯವಿಲ್ಲ. ಸಿಆರ್‌ಝಡ್‌ವಲಯದ ಸರಳೀಕರಣದ ಬಳಿಕ ರಾಜ್ಯದ ಪ್ರವಾಸೋದ್ಯಮ ಇಲಾಖೆ ಹೊಸ ಪ್ರವಾಸಿ ಸ್ಥಳಗಳನ್ನು ಗುರುತಿಸುವಲ್ಲಿ ಗಮನ ಹರಿಸಲಿದೆ.

ರೆಸಾರ್ಟ್‌, ಹೊಟೇಲ್‌ ಮತ್ತಿತರ ವ್ಯವಸ್ಥೆಗಳು ಸಮೀಪದಲ್ಲೇ ಇದ್ದರೆ, ಭವಿಷ್ಯದಲ್ಲಿ ಸಿಆರ್‌ಝಡ್‌ ಸರಳೀಕರಣದಿಂದ ಹೋಮ್‌ ಸ್ಟೇ ಸೌಲಭ್ಯ ಪ್ರವರ್ಧಮಾನಕ್ಕೆ ಬರುವ ಸಾಧ್ಯತೆಯಿದೆ. ಇಲ್ಲಿನ ಬೀಚ್‌ನ ಉದ್ದಕ್ಕೂ ಪಾರ್ಕಿಂಗ್‌, ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಸೂರ್ಯಾಸ್ತ ವೀಕ್ಷಣೆಗೆ ಬೇಕಾದ ಸೌಲಭ್ಯ ಕಲ್ಪಿಸಿದಲ್ಲಿ ಪಣಂಬೂರು, ಸುರತ್ಕಲ್‌ ಬೀಚ್‌ಗೆ ಪರ್ಯಾಯವಾಗಿ ಚಿತ್ರಾಪುರ ಬೀಚ್‌ ಪ್ರವಾಸಿಗರ ಆಕರ್ಷಕವಾ ಗಿ ಹೊರಹೊಮ್ಮಲಿದೆ.

ದೇವಸ್ಥಾನ ಅಭಿವೃದ್ಧಿ

ಸ್ಥಳೀಯವಾಗಿ ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವೂ ಅಂದಾಜು 8 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗುತ್ತಿದ್ದು, ರಾಜ್ಯದ ಗಮನ ಸೆಳೆಯಲು ಸಿದ್ಧಗೊಳ್ಳುತ್ತಿದೆ. ಸಮುದ್ರಾಭಿಮುಖವಾಗಿ ಇಲ್ಲಿನ ಜಲದುರ್ಗೆ ವಿರಾಜಮಾನಳಾಗಿದ್ದಾಳೆ.

ಬೀಚ್‌ ಟೂರಿಸಂಗೆ ಹೆಚ್ಚಿನ ಆದ್ಯತೆ: ಸಿಆರ್‌ಝೆಡ್‌ ಕಾಯಿದೆಯಲ್ಲಿ ತಿದ್ದುಪಡಿ ಮಾಡಿದ್ದರಿಂದ ಬೀಚ್‌ ಟೂರಿಸಂಗೆ ಹೆಚ್ಚಿನ ಆದ್ಯತೆ ಸಿಗಲಿದೆ. ಬೀಚ್‌ ತೀರದಲ್ಲಿ ವಾಸಿಸುವ ಹಲವಾರು ಕುಟುಂಬಗಳಿಗೂ ಸ್ವಾವಲಂಬಿ ಜೀವನ ನಡೆಸಲು ಪ್ರವಾಸೋದ್ಯಮ ಸಹಕಾರಿಯಾಗಲಿದೆ. ತಣ್ಣೀರುಬಾವಿ ಬ್ಲೂ ಫ್ಲ್ಯಾಗ್‌ ಬೀಚ್‌ ಅಭಿವೃದ್ಧಿಯ ಜತೆಗೆ ಇತರ ಬೀಚ್‌ಗಳನ್ನು ಸ್ಥಳೀಯವಾಗಿ ಆಕರ್ಷಣೆಯ ಕೇಂದ್ರವಾಗಿ ಮಾಡಲಾಗುವುದು. –ಡಾ| ಭರತ್‌ ಶೆಟ್ಟಿ ವೈ., ಶಾಸಕರು

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.