ಸೋಂಕಿತರು ಪ್ರಾಥಮಿಕ ಸಂಪರ್ಕದ ಮಾಹಿತಿ ಮುಚ್ಚಿಟ್ಟರೆ ಅಪಾಯ ಹೆಚ್ಚು!


Team Udayavani, May 2, 2021, 4:20 AM IST

ASCas

ಮಹಾನಗರ: ದ.ಕ. ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ತೀವ್ರಗತಿಯಲ್ಲಿ ಹಬ್ಬುತ್ತಿದ್ದು, ಗುರುವಾರ ಒಂದೇ ದಿನ ಸಾವಿರಕ್ಕೂ ಹೆಚ್ಚಿನ ಪಾಸಿಟಿವ್‌ ಪ್ರಕರಣ ದೃಢಪಟ್ಟಿವೆ. ಕೊರೊನಾ ಸೋಂಕಿಗೆ ಒಳಗಾಗಿರುವ ಕೆಲವು ಮಂದಿ ತಮ್ಮ ಪ್ರಾಥಮಿಕ ಸಂಪರ್ಕಿತರ ಮಾಹಿತಿಯನ್ನು ಗೌಪ್ಯವಾಗಿಡುತ್ತಿದ್ದು, ಇದು ಕೊರೊನಾ ಮತ್ತಷ್ಟು ಹರಡಲು ಕಾರಣವಾಗುತ್ತಿದೆ.

ಸೋಂಕಿತರ ಪೈಕಿ ಕೆಲವರು ಆರೋಗ್ಯ ಇಲಾಖೆಗೆ ತಾವು ಎಲ್ಲೆಲ್ಲಿ ಓಡಾಡಿದ್ದೇವೆ ಹಾಗೂ ಯಾರನ್ನೆಲ್ಲ ಸಂಪರ್ಕಿಸಿದ್ದೇವೆ ಎಂಬ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಈ ಕಾರಣಕ್ಕೆ ಸೋಂಕಿತರು, ಅವರ ಸಂಪರ್ಕಿತರನ್ನು ಪತ್ತೆ ಮಾಡುವುದು ಆರೋಗ್ಯ ಇಲಾಖೆಗೂ ಸವಾಲಾಗಿದೆ.

ಕೊರೊನಾ ಬಂತೆಂದು ಹೆದರುವ ಅಗತ್ಯವಿಲ್ಲ. ರೋಗ ಲಕ್ಷಣ ಬಂದಾಗ ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದರೆ ರೋಗ ಗುಣವಾಗುತ್ತದೆ. ಆದರೆ ಕೆಲವು ಮಂದಿ ಕೊರೊನಾ ಗುಣ-ಲಕ್ಷಣ ಇದ್ದರೂ ಮೆಡಿಕಲ್‌ಗ‌ಳಿಂದ ಜ್ವರ, ಶೀತ, ತಲೆನೋವಿನ ಮಾತ್ರೆ ಸೇವನೆಗೆ ಮುಂದಾಗುತ್ತಿದ್ದಾರೆ. ಇದರಿಂದ ರೋಗ ಮತ್ತಷ್ಟು ಉಲ್ಬಣಗೊಳ್ಳುತ್ತದೆ. ಬಳಿಕ ಯಾವುದೇ ರೀತಿಯ ಚಿಕಿತ್ಸೆ ನೀಡಿದರೂ ಅದು ಅಷ್ಟೊಂದು ಪರಿಣಾಮಕಾರಿಯಾಗುವುದಿಲ್ಲ.

ಕೊರೊನಾ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರ ಜವಾಬ್ದಾರಿ ಹೆಚ್ಚು ಇದೆ. ಒಂದು ವೇಳೆ ಕೊರೊನಾ ಸೋಂಕಿತ ವ್ಯಕ್ತಿಯು ತನ್ನ ಸಂಪರ್ಕಕ್ಕೆ ಬಂದಿದ್ದರೆ ಆ ವಿಷಯ ಮುಚ್ಚಿಡದೆ ತಾನು ಸ್ವಯಂ ಆಗಿ ತಪಾಸಣೆಗೆ ಒಳಗಾಗಬೇಕು. ಪಾಸಿಟಿವ್‌ ಬಂದರೆ, ತನ್ನ ಪ್ರಾಥಮಿಕ ಸಂಪರ್ಕದ ಮಾಹಿತಿಯನ್ನು ಆರೋಗ್ಯ ಇಲಾಖೆ ಜತೆಗೆ ಹಂಚಿಕೊಳ್ಳಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ತಪಾಸಣೆಯನ್ನು ಉಚಿತವಾಗಿ ನಡೆಸಲಾಗುತ್ತಿದೆ.

ಜಿಲ್ಲೆಯಲ್ಲಿ ಒಂದು ತಿಂಗಳಿನಿಂದ ಕೊರೊನಾ ರೋಗ ಪತ್ತೆ ತಪಾಸಣೆ ಏರಿಕೆ ಕಂಡಿದೆ. ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲಿ, ಅಪಾರ್ಟ್‌ಮೆಂಟ್‌, ಹಾಸ್ಟೆಲ್‌, ಕಾನ್ವೆಂಟ್‌ಗಳಲ್ಲಿ ಹೆಚ್ಚಾಗಿ ಕೊರೊನಾ ಸೋಂಕು ಕಂಡುಬರುತ್ತಿದ್ದು, ಸೋಂಕಿತರೆಲ್ಲರ ಪ್ರಾಥಮಿಕ ಸಂಪರ್ಕವನ್ನು ತಪಾಸಣೆ ಮಾಡಲಾಗುತ್ತಿದೆ. ಅದೇ ರೀತಿ, ರೋಗ ಲಕ್ಷಣ ಇರುವವರ ತಪಾಸಣೆಯೂ ನಡೆಯುತ್ತಿದೆ. ದಿನವೊಂದಕ್ಕೆ ಸರಾಸರಿ 4ರಿಂದ 5 ಸಾವಿರ ಮಂದಿಯ ಕೊರೊನಾ ತಪಾಸಣೆ ನಡೆಯುತ್ತಿದ್ದು, ಇದರಿಂದಾಗಿ ಕೊರೊನಾ ತಪಾಸಣ ವರದಿ ಬರಲು ವಿಳಂಬವಾಗುತ್ತಿದೆ. ಹಾಗಂತ ವರದಿ ಬರುವವರೆಗೆ ಯಾವುದೇ ಕಾರಣಕ್ಕೆ ಮನೆಯಿಂದ ಹೊರಗೆ ಹೋಗದೆ, ಹೋಂ ಐಸೋಲೇಶನ್‌ನಲ್ಲಿ ಇರಬೇಕು.

ಸಾಮಾನ್ಯ ಜ್ವರವೆಲ್ಲಾ ಕೋವಿಡ್ ಅಲ್ಲ

ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಮಳೆ ಬಿರುಸು ಪಡೆದಿದ್ದು, ಅನೇಕ ಕಡೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ವಾತಾವರಣ ಬದಲಾವಣೆಯಿಂದಾಗಿ ಸಾಮಾನ್ಯ ಶೀತ, ಜ್ವರ ಸಹಿತ ವೈರಲ್‌ ಜ್ವರ ಹೆಚ್ಚಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಅಗತ್ಯ. ಶೀತ, ತಲೆನೋವು, ಕೆಮ್ಮು, ಜ್ವರವನ್ನು ನಿರ್ಲಕ್ಷé ಮಾಡದೇ ವೈದ್ಯರ ಸಲಹೆಯಂತೆ ಸೂಕ್ತ ಔಷಧ ಪಡೆದುಕೊಳ್ಳಬೇಕು. ವೈದ್ಯರ ಸಲಹೆಯಿಲ್ಲದೆ, ಮೆಡಿಕಲ್‌ ಶಾಪ್‌ಗ್ಳಿಂದ ಔಷಧ ಖರೀದಿಸಿ ಸೇವಿಸಬಾರದು.

ತಪಾಸಣೆ ಅಗತ್ಯ

ಕೊರೊನಾ ರೋಗ ತೀವ್ರಗತಿಯಲ್ಲಿ ಹರಡುತ್ತಿದೆ. ಮೊದಲನೇ ಅಲೆಗಿಂತ ಎರಡನೇ ಅಲೆ ಹರಡುವಿಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗರೂಕರಾಗಿ, ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು. ಕೊರೊನಾ ಬಂತೆಂದು ಹೆದರಬೇಕಿಲ್ಲ. ಗುಣ ಲಕ್ಷಣವುಳ್ಳವರು ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಅವರ ಪ್ರಾಥಮಿಕ ಸಂಪರ್ಕ ಪತ್ತೆಗೆ ಆರೋಗ್ಯ ಇಲಾಖೆ ಜತೆ ಕೈಜೋಡಿಸಬೇಕು.
-ಡಾ| ಕಿಶೋರ್‌ ಕುಮಾರ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ

ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ

ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?

ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?

Mithali Raj and Jhulan Goswami rested from Women’s T20 Challenge

ಮಹಿಳಾ ಟಿ20 ಚಾಲೆಂಜ್: ಮಿಥಾಲಿ ರಾಜ್-ಜೂಲನ್ ಗೋಸ್ವಾಮಿಗೆ ಇಲ್ಲ ಜಾಗ

thumb 6

‘ದುಃಸ್ವಪ್ನ’ ಬಿದ್ದ ಮೇಲೆ ಕದ್ದ ದೇವಸ್ಥಾನದ 14 ವಿಗ್ರಹಗಳನ್ನು ಹಿಂದಿರುಗಿಸಿದ ಕಳ್ಳರು

kejriwal 2

ಅತಿಕ್ರಮಣ ವಿರೋಧಿ ಅಭಿಯಾನ : ಕೇಜ್ರಿವಾಲ್ ಆಕ್ರೋಶ

hd-kumarswaamy

ಸೈದ್ದಾಂತಿಕ ಬದ್ಧತೆಯ ಬಗ್ಗೆ ರಾಹುಲ್ ಗಾಂಧಿ ಬಿಡಿಸಿ ಹೇಳಬೇಕು: ಕುಮಾರಸ್ವಾಮಿ

ct-ravi

ಪಠ್ಯದಲ್ಲಿ ಹೆಗಡೆವಾರ್ ಭಾಷಣ ಸೇರ್ಪಡೆಯಾದರೆ ತಪ್ಪೇನು?: ಸಿ.ಟಿ.ರವಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dogs

ಬೀದಿನಾಯಿ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಚಿಕಿತ್ಸೆ

apmc

ಎಪಿಎಂಸಿ ಚುನಾವಣೆಗೆ ಜಿಲ್ಲಾದ್ಯಂತ ಭಾರೀ ಸಿದ್ಧತೆ

distilled-water

ಪಚ್ಚನಾಡಿ ಶುದ್ಧೀಕರಿಸಿದ ತ್ಯಾಜ್ಯ ನೀರು ಹರಿಸಲು ಪ್ರತ್ಯೇಕ ಪೈಪ್‌ಲೈನ್‌

bus

ಉಪಯೋಗಕ್ಕೆ ಇಲ್ಲದ ಬಸ್‌ ತಂಗುದಾಣಗಳು

thumb 4

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಪುನರಾರಂಭಗೊಳ್ಳದ ದೇಶೀಯ ಸರಕು ಸಾಗಾಟ

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ

ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ

11

ಐಟಿ ಕ್ಷೇತ್ರ ಓಟದ ಕುದುರೆ ಇದ್ದಂತೆ : ಸಿದ್ದನಗೌಡ

10

ಸಸಾಲಟ್ಟಿ ಏತ ನೀರಾವರಿಗೆ ಕೊನೆಗೂ ಸಿಕ್ಕಿತು ಚಾಲನೆ

17report

20ರಂದು ಮಾನ್ವಿ ಬಂದ್‌ಗೆ ಕರೆ

ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?

ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.